Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಏಕೆಂದರೆ ಸರ್ವೇಶ್ವರ ನುಡಿವ ಮಾತಿದು : “ಇಗೋ, ಈ ಸಾರಿ ಈ ನಾಡಿನ ನಿವಾಸಿಗಳನ್ನು ಕವಣೆಯ ಕಲ್ಲಂತೆ ಎಸೆದುಬಿಡುವೆನು; ಬುದ್ಧಿಬರಲೆಂದು ಅವರನ್ನು ಬಾಧಿಸುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, ಅವರಿಗೆ ಬುದ್ಧಿಬರಲೆಂದು ಅವರನ್ನು ಬಾಧಿಸುವೆನು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೆಹೋವನು ಹೇಳುತ್ತಾನೆ: “ಈ ಸಾರಿ ಯೆಹೂದದ ಜನರನ್ನು ನಾನು ದೇಶದಿಂದ ಹೊರಗೆ ತಳ್ಳುತ್ತೇನೆ. ಅವರಿಗೆ ನಾನು ನೋವು ಮತ್ತು ಕಷ್ಟಗಳನ್ನು ತರುತ್ತೇನೆ. ಅವರು ಪಾಠ ಕಲಿಯುವದಕ್ಕೋಸ್ಕರ ನಾನು ಹೀಗೆ ಮಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣೆಯಿಂದ ಎಸೆದುಬಿಡುತ್ತೇನೆ. ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:18
11 ತಿಳಿವುಗಳ ಹೋಲಿಕೆ  

ಯಾವನಾದರೂ ನನ್ನ ಒಡೆಯನಾದ ನಿನ್ನನ್ನು ಹಿಂಸಿಸಿ ಜೀವತೆಗೆಯಬೇಕೆಂದಿದ್ದರೂ, ಆ ನಿನ್ನ ಜೀವವು ನಿನ್ನ ದೇವರಾದ ಯೆಹೋವನ ರಕ್ಷಣೆಯಲ್ಲಿರುವ ಜೀವ ನಿಕ್ಷೇಪದಲ್ಲಿ ಭದ್ರವಾಗಿರಲಿ. ಆದರೆ ಆತನು ನಿನ್ನ ಶತ್ರುಗಳ ಜೀವವನ್ನು ಕವಣೆಯ ಕಲ್ಲನ್ನೋ ಎಂಬಂತೆ ಎಸೆದು ಬಿಡಲಿ.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ಮತ್ತು ವಿಧಿಗಳೂ ನಿಮ್ಮ ಪೂರ್ವಿಕರನ್ನು ಹಿಂದಟ್ಟಿ ಹಿಡಿದು ಶಾಶ್ವತವಾಗಿ ಉಳಿದಿದೆ. ಅವರು ತಿರುಗಿಕೊಂಡು, ಸೇನಾಧೀಶ್ವರ ಯೆಹೋವನಿಗೆ ‘ನಮ್ಮ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ’” ಅಂದುಕೊಂಡರು.


ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು; ಈ ಕೇಡನ್ನು ಅವರಿಗೆ ಮಾಡುವೆನು ಎಂದು ನಾನು ಹೇಳಿದ್ದು ಬರೀ ಮಾತಲ್ಲ.’”


ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ. ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ನೀವಾಗಲಿ ಅಥವಾ ನಿಮ್ಮ ಪೂರ್ವಿಕರಾಗಲಿ ನೋಡದ ದೇಶಕ್ಕೆ ನಿಮ್ಮನ್ನು ಈ ದೇಶದೊಳಗಿಂದ ಎಸೆದುಬಿಡುವೆನು; ಅಲ್ಲಿ ಹಗಲಿರುಳೂ ಅನ್ಯದೇವತೆಗಳನ್ನು ಸೇವಿಸುವಿರಿ; ನಾನು ನಿಮಗೆ ದಯೆತೋರಿಸುವುದಿಲ್ಲ’” ಎಂದು ಹೇಳಿದನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ನಿನ್ನನ್ನೂ ಮತ್ತು ನಿನ್ನ ಹೆತ್ತ ತಾಯಿಯನ್ನೂ ಜನ್ಮಭೂಮಿಯಲ್ಲದ ಅನ್ಯದೇಶಕ್ಕೆ ಎಸೆದುಬಿಡುವೆನು; ಅಲ್ಲೇ ಸಾಯುವಿರಿ.


ಯೆಹೋವನಾದ ನನಗೆ ಜನರು ಪಾಪಮಾಡಿದ ಕಾರಣ ಕುರುಡರಂತೆ ನಡೆಯುವ ಹಾಗೆ ಅವರನ್ನು ಸಂಕಟಪಡಿಸುವೆನು; ಅವರ ರಕ್ತವು ಧೂಳಿನಂತೆ ಚೆಲ್ಲಿ ಹೋಗುವುದು, ಅವರ ಮಾಂಸವು ಮಲದ ಹಾಗೆ ಬಿದ್ದಿರುವುದು!


ಇಗೋ, ಬಲಿಷ್ಠ ಮನುಷ್ಯನಾದ ನಿನ್ನನ್ನು ಯೆಹೋವನು ಎಸೆಯುವನು, ನಿನ್ನನ್ನು ಕೆಳಗೆ ಎಸೆಯುವನು, ನಿನ್ನನ್ನು ಗಟ್ಟಿಯಾಗಿ ಹಿಡಿಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು