Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಜೆರುಸಲೇಮಿನ ಗೋಳು : “ಅಯ್ಯೋ ನಾನು ಗಾಯಗೊಂಡೆ ನನಗೆ ಬಿದ್ದ ಪೆಟ್ಟು ಗಡಸು. ತಗಲಿದೆ ವ್ಯಾಧಿ, ಸಹಿಸಲೇಬೇಕಾದ ಕಾಯಿಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಗಡುಸು! ಆದರೂ ನಾನು - ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು ಅಂದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಯ್ಯೋ, ನನಗೆ (ಯೆರೆಮೀಯನಿಗೆ) ತುಂಬಾ ಪೆಟ್ಟಾಗಿದೆ. ನನಗೆ ಗಾಯವಾಗಿದೆ; ನನಗೆ ವಾಸಿಯಾಗುತ್ತಿಲ್ಲ. ಆದರೂ “ಇದು ನನ್ನ ವ್ಯಾಧಿ, ಇದನ್ನು ನಾನು ಅನುಭವಿಸಬೇಕು” ಎಂದು ಸಮಾಧಾನ ತಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ವಾಸಿಪಡಿಸಲಾಗದು. ಆದರೆ ನಾನು ನಿಶ್ಚಯವಾಗಿ, “ಇದು ನನ್ನ ರೋಗ, ಇದನ್ನು ನಾನು ಸಹಿಸಲೇಬೇಕಾಗಿದೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:19
17 ತಿಳಿವುಗಳ ಹೋಲಿಕೆ  

ನಾನು ಯೆಹೋವನಿಗೆ ಪಾಪ ಮಾಡಿದ್ದರಿಂದ ಆತನ ಕೋಪವನ್ನು ತಾಳಿಕೊಂಡಿರುವೆನು. ಕಾಲಾನುಕಾಲಕ್ಕೆ ಆತನು ತನ್ನ ವ್ಯಾಜ್ಯವನ್ನು ನಿರ್ವಹಿಸಿ, ನನಗೆ ನ್ಯಾಯವನ್ನು ತೀರಿಸುವನು. ನನ್ನನ್ನು ಬೆಳಕಿಗೆ ತರುವನು. ಆತನ ರಕ್ಷಣಾಧರ್ಮವನ್ನು ನೋಡುವೆನು.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಚೀಯೋನ್ ನಗರವು ಬೇನೆತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವುದನ್ನು ನಾನು ಕೇಳಿದ್ದೇನೆ; ಏದುಸಿರುಬಿಡುತ್ತಾ ಕೈಚಾಚಿ, “ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಪ್ರಾಣವು ಬಳಲುತ್ತದೆ” ಎಂದು ಅರಚಿಕೊಳ್ಳುತ್ತಾಳೆ.


ನೀನೇ ಇದನ್ನು ಬರಮಾಡಿದ್ದರಿಂದ ನಾನು ಏನೂ ಹೇಳದೆ ಮೌನವಾಗಿರುವೆನು.


ಸ್ವಜನರು ನಾಶವಾದ ಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವುದು.


ರಾತ್ರಿಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಾ ಗೋಳಾಡುವುದರಿಂದ ಕಣ್ಣೀರು ಕೆನ್ನೆಗಳ ಮೇಲೆ ನಿಂತೇ ಇದೆ; ಆಕೆಯ ಬಹುಮಂದಿ ಪ್ರಿಯರಲ್ಲಿ ಯಾರೂ ಸಂತೈಸರು; ಆಕೆಯ ಮಿತ್ರರೆಲ್ಲಾ ದ್ರೋಹಮಾಡಿ ಶತ್ರುಗಳಾಗಿದ್ದಾರೆ.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಅಯ್ಯೋ, ನನ್ನ ಶಿರಸ್ಸು ಜಲಮಯವಾಗಿಯೂ, ನನ್ನ ನೇತ್ರಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಎಷ್ಟೋ ಲೇಸು! ನನ್ನ ಜನರಲ್ಲಿ ಹತರಾದವರ ನಿಮಿತ್ತ ಹಗಲಿರುಳೂ ಅಳಬೇಕಲ್ಲಾ!


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.


ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.


ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು.


ಪುನಃ ನಾನು, “ಹೀಗೆ ನೆನಸುವುದು ನನ್ನ ಬಲಹೀನತೆಯೇ. ಪರಾತ್ಪರನಾದ ದೇವರ ಭುಜಬಲವು ಪ್ರಕಟವಾದ ವರ್ಷಗಳನ್ನು ಜ್ಞಾಪಿಸಿಕೊಳ್ಳುವೆನು.


ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ, ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು