Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಸರ್ವೇಶ್ವರಾ, ಮಾನವನ ಗುರಿಸಾಧನೆ ಅವನ ಸ್ವಾಧೀನದಲ್ಲಿಲ್ಲ. ಸರಿದಿಸೆಯಲ್ಲಿ ಅವನು ಹೆಜ್ಜೆಯಿಡಲಾರನೆಂದು ನಿಮಗೆ ಗೊತ್ತಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿಲ್ಲವೆಂದು ನನಗೆ ಗೊತ್ತು; ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನಿಡಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನೇ, ಮಾನವನ ಜೀವ ಅವನ ಸ್ವಾಧೀನದಲ್ಲಿಲ್ಲವೆಂಬುದು ನನಗೆ ಗೊತ್ತು. ಜನರಿಗೆ ಸರಿಯಾದ ಜೀವನ ಕ್ರಮಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:23
9 ತಿಳಿವುಗಳ ಹೋಲಿಕೆ  

ಮನುಷ್ಯನಿಗೆ ಗತಿಯನ್ನು ಏರ್ಪಡಿಸುವವನು ಯೆಹೋವನೇ ಆಗಿರುವಲ್ಲಿ, ಮನುಷ್ಯನು ತನ್ನ ಮಾರ್ಗವನ್ನು ಹೇಗೆ ತಿಳಿದುಕೊಂಡಾನು?


ಹೃದಯದ ಸಂಕಲ್ಪವು ಮನುಷ್ಯನ ವಶವು, ತಕ್ಕ ಉತ್ತರಕೊಡುವ ಶಕ್ತಿಯು ಯೆಹೋವನಿಂದಾಗುವುದು.


ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ.


ನಿನ್ನ ಮಾರ್ಗದಲ್ಲೇ ಹೆಜ್ಜೆಯಿಟ್ಟು ನಡೆಯುತ್ತಾ ಇದ್ದೇನೆ; ನನ್ನ ಕಾಲು ಜಾರಲಿಲ್ಲ.


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ಮನುಷ್ಯನು ತನ್ನ ಮನದಂತೆ ದಾರಿಯನ್ನು ಆರಿಸಿಕೊಂಡರೂ, ಯೆಹೋವನೇ ಅವನಿಗೆ ಗತಿಯನ್ನು ಏರ್ಪಡಿಸುವನು.


ನೀತಿವಂತನ ಮಾರ್ಗವು ಸಮವಾಗಿದೆ; ನೀನು ಅವನ ದಾರಿಯನ್ನು ಸರಿಪಡಿಸಿ ನೇರಮಾಡುತ್ತಿ.


ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಮುಂದೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ, ಪತ್ನಿ ಹಾಗೂ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ, ಕಣ್ಣು, ಕಿವಿ ಇಲ್ಲದ ಬೆಳ್ಳಿ, ಬಂಗಾರ, ತಾಮ್ರ, ಕಬ್ಬಿಣ, ಮರ, ಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ. ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ, ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು