Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜನಾಂಗಗಳ ಒಡೆಯಾ, ಅರಸರೇ, ನಿಮಗೆ ಅಂಜದೆ ಇರುವವರಾರು? ಹೌದು, ನೀವು ಭಯಭಕ್ತಿಗೆ ಪಾತ್ರರು ರಾಷ್ಟ್ರಗಳ ಜ್ಞಾನಿಗಳಲ್ಲೂ ರಾಜಪರಂಪರೆಯಲ್ಲೂ ಯಾವನೂ ಇಲ್ಲ ನಿಮಗೆ ಸಮಾನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನಾಂಗಗಳ ಅರಸನೇ, ಯಾರು ನಿನಗೆ ಅಂಜದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ ರಾಜಪರಂಪರೆಯಲ್ಲಿಯೂ ನಿನ್ನ ಸಮಾನನು ಯಾವನೂ ಇಲ್ಲವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ಪ್ರತಿಯೊಬ್ಬರೂ ನಿನ್ನನ್ನು ಗೌರವಿಸಬೇಕು. ನೀನು ಪ್ರತಿಯೊಂದು ಜನಾಂಗಕ್ಕೂ ರಾಜನಾಗಿರುವೆ. ಅವರೆಲ್ಲರೂ ನಿನಗೆ ಗೌರವ ತೋರಿಸಬೇಕು. ಜನಾಂಗಗಳಲ್ಲಿ ಎಷ್ಟೋ ಮಂದಿ ಜ್ಞಾನಿಗಳಿದ್ದಾರೆ ಆದರೆ ಅವರಲ್ಲಿ ಒಬ್ಬರೂ ನಿನ್ನಷ್ಟು ಜ್ಞಾನಿಗಳಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಓ ಜನಾಂಗಗಳ ಅರಸರಾದವರೇ, ನಿಮಗೆ ಭಯಪಡದವನ್ಯಾರು? ಏಕೆಂದರೆ, ನಿಮಗೆ ಅದು ಸಲ್ಲತಕ್ಕದ್ದು. ಏಕೆಂದರೆ, ಜನಾಂಗಗಳ ಎಲ್ಲಾ ಜ್ಞಾನಿಗಳಲ್ಲಿಯೂ, ಅವುಗಳ ಎಲ್ಲಾ ರಾಜ್ಯಗಳಲ್ಲಿಯೂ ನಿಮ್ಮ ಹಾಗೆ ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 10:7
28 ತಿಳಿವುಗಳ ಹೋಲಿಕೆ  

ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”


ರಾಜ್ಯವು ಯೆಹೋವನದೇ; ಎಲ್ಲಾ ಜನಾಂಗಗಳಿಗೂ ಆತನೇ ಒಡೆಯನು.


ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ.


ನೀವು ನನಗೆ ಅಂಜುವುದಿಲ್ಲವೋ, ನನ್ನೆದುರಿಗೆ ನಡುಗುವುದಿಲ್ಲವೋ? ಸಮುದ್ರವು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದ್ದೇನಷ್ಟೆ. ತೆರೆಗಳು ಅಲ್ಲಕಲ್ಲೋಲವಾದರೂ ಮೀರಲಾರವು, ಭೋರ್ಗರೆದರೂ ಹಾಯಲಾರವು.


ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?


ಆದರೆ ನೀವು ಯಾರಿಗೆ ಭಯಪಡಬೇಕೆಂದು ತೋರಿಸುತ್ತೇನೆ, ಕೇಳಿ. ಸತ್ತ ಮೇಲೆ ನರಕದೊಳಗೆ ಹಾಕುವ ಅಧಿಕಾರವುಳ್ಳಾತನಿಗೆ ಹೆದರಬೇಕು. ಹೌದು ಆತನಿಗೇ ಭಯಪಡಬೇಕೆಂದು ನಿಮಗೆ ಒತ್ತಿಹೇಳುತ್ತೇನೆ.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವರು; ನಾನು ನಿಮ್ಮ ಮಧ್ಯದಲ್ಲಿ ವಾಸಿಸುವೆನು” ಆಗ, ಸೇನಾಧೀಶ್ವರನಾದ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬುದು ನಿನಗೆ ಗೊತ್ತಾಗುವುದು.


ಆತನು ದೇಶದೇಶಗಳ ವ್ಯಾಜ್ಯವನ್ನು ವಿಚಾರಿಸುವನು, ಬಹು ರಾಷ್ಟ್ರದವರಿಗೆ ನ್ಯಾಯತೀರಿಸುವನು; ಅವರೋ ತಮ್ಮ ಆಯುಧಗಳನ್ನು ಕುಲುಮೆಗೆ ಹಾಕಿ, ಕತ್ತಿಗಳನ್ನು ನೇಗಿಲ ಗುಳಗಳನ್ನಾಗಿಯೂ, ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರುದ್ಧವಾಗಿ ಜನಾಂಗವು ಕತ್ತಿಯನ್ನೆತ್ತದು. ಇನ್ನು ಮೇಲೆ ಯುದ್ಧಾಭ್ಯಾಸವು ನಡೆಯುವುದೇ ಇಲ್ಲ.


ಕರ್ತನೇ, ನಿನ್ನಿಂದುಂಟಾದ ಎಲ್ಲಾ ಜನಾಂಗಗಳು ಬಂದು, ನಿನಗೆ ಅಡ್ಡಬಿದ್ದು ನಿನ್ನ ನಾಮವನ್ನು ಘನಪಡಿಸುವವು.


ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ಎಲ್ಲಾ ಅರಸರೂ ಅವನಿಗೆ ಸಾಷ್ಟಾಂಗವೆರಗಲಿ; ಸರ್ವಜನಾಂಗಗಳು ಆತನನ್ನು ಸೇವಿಸಲಿ.


ಏಳನೆಯ ದೇವದೂತನು ತುತ್ತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾಶಬ್ದಗಳುಂಟಾಗಿ, “ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನ ಕ್ರಿಸ್ತನಿಗೂ ಬಂದಿದೆ, ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು” ಎಂಬ ಮಹಾಘೋಷಣೆಯಾಯಿತು.


“ನಮಗಾದರೋ ಒಬ್ಬನೇ ತಂದೆಯಾದ ದೇವರು; ಆತನೇ ಸಮಸ್ತಕ್ಕೂ ಮೂಲಕಾರಣನು; ನಾವು ಜೀವಿಸುವುದು ಆತನಿಗಾಗಿಯೇ, ಮತ್ತು ಒಬ್ಬನೇ ಕರ್ತನಾದ ಯೇಸು ಕ್ರಿಸ್ತನೆಂಬ ಏಕ ಕರ್ತನು ನಮಗಿದ್ದಾನೆ. ಆತನ ಮುಖಾಂತರವೇ ಸಮಸ್ತವೂ ಉಂಟಾಯಿತು. ನಾವೂ ಆತನ ಮುಖಾಂತರ ಉಂಟಾದೆವು.”


ಫರೋಹನು ಮೋಶೆಗೆ, “ನಾಳೆ” ಎಂದನು. ಆಗ ಮೋಶೆಯು, “ನಿನ್ನ ಮಾತಿನ ಪ್ರಕಾರವೇ ಆಗಲಿ, ಇದರಿಂದ ನಮ್ಮ ದೇವರಾಗಿರುವ ಯೆಹೋವನಿಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವಿ.


ಈ ಸಾರಿ ನಾನು ನನ್ನ ವಶದಲ್ಲಿರುವ ಈ ಬಾಧೆಗಳನ್ನು ನಿನ್ನ ಪ್ರಜಾಪರಿವಾರದವರಿಗೆ ಉಂಟಾಗುವಂತೆಯೂ, ನಿನ್ನ ಹೃದಯಕ್ಕೂ ತಗಲುವಂತೆಯೂ ಮಾಡುವೆನು. ಆದುದರಿಂದ ಸಮಸ್ತ ಲೋಕದಲ್ಲಿ ನನಗೆ ಸಮಾನರು ಬೇರೆ ಯಾರೂ ಇಲ್ಲವೆಂದು ನನ್ನ ವಿಷಯದಲ್ಲಿ ತಿಳಿದುಕೊಳ್ಳುವಿ.


ಇದರಿಂದ ಭೂನಿವಾಸಿಗಳೆಲ್ಲರೂ ಯೆಹೋವನ ಹಸ್ತವು ಪರಾಕ್ರಮವುಳ್ಳದ್ದೆಂದು ತಿಳಿದುಕೊಳ್ಳುವ ಹಾಗೆಯೂ ನಿಮ್ಮ ದೇವರಾದ ಯೆಹೋವನಿಗೆ ಯಾವಾಗಲೂ ಭಯಪಡುವವರಾಗಿರುವರು” ಎಂದನು.


ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.


ಅದಕ್ಕೆ ದಾನಿಯೇಲನು ರಾಜನನ್ನು ಕುರಿತು, “ರಾಜನು ಕೇಳುವ ರಹಸ್ಯವನ್ನು ವಿದ್ವಾಂಸರಾಗಲಿ, ಮಾಟಗಾರರಾಗಲಿ, ಜೋಯಿಸರಾಗಲಿ, ಶಕುನದವರಾಗಲಿ ಯಾರೂ ರಾಜನಿಗೆ ತಿಳಿಸಲಾರರು.


ಆದರೆ ರಹಸ್ಯಗಳನ್ನು ಪ್ರಕಟಗೊಳಿಸುವ ಒಬ್ಬನಿದ್ದಾನೆ, ಆತನು ದೇವರು, ಆತನು ಪರಲೋಕದಲ್ಲಿದ್ದಾನೆ. ಮುಂದೆ ನಡೆಯತಕ್ಕದ್ದನ್ನು ಆತನೇ ರಾಜನಾದ ನೆಬೂಕದ್ನೆಚ್ಚರನಿಗೆ ತಿಳಿಯಪಡಿಸಿದ್ದಾನೆ. ನಿನ್ನ ಕನಸು, ಹಾಸಿಗೆಯ ಮೇಲೆ ನಿನ್ನ ಮನಸ್ಸಿನಲ್ಲಿ ಬಿದ್ದ ಸ್ವಪ್ನಗಳು ಇವೇ.


ಯೆಹೋವನೇ, ನಾನು ನಿನ್ನ ಸುದ್ದಿಯನ್ನು ಕೇಳಿ ಹೆದರಿದ್ದೇನೆ; ಯೆಹೋವನೇ, ಯುಗದ ಮಧ್ಯದಲ್ಲಿ ನಿನ್ನ ರಕ್ಷಣಾಕಾರ್ಯವನ್ನು ಪುನಃ ಮಾಡು, ಯುಗದ ಮಧ್ಯದಲ್ಲಿ ಅದನ್ನು ಪ್ರಸಿದ್ಧಿಪಡಿಸು; ನೀನು ರೋಷಗೊಂಡಿದ್ದರೂ ಕರುಣೆಯನ್ನು ಚಿತ್ತಕ್ಕೆ ತಂದುಕೋ.


“ಸೂರ್ಯನು ಮೂಡುವ ದಿಕ್ಕಿನಿಂದ ಮುಳುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನು ಶುದ್ಧ ನೈವೇದ್ಯವನ್ನೂ ಅರ್ಪಿಸುತ್ತಾರೆ. ಹೌದು, ಅನ್ಯ ಜನಾಂಗಗಳಲ್ಲಿಯೇ ನನ್ನ ನಾಮವು ಬಹು ಮಾನ್ಯವಾಗಿದೆ.” ಇದು ಸೇನಾಧೀಶ್ವರನಾದ ಯೆಹೋವನ ನುಡಿ.


ಆದರೆ, ನಿಮ್ಮ ದೇವರಾದ ಯೆಹೋವನಲ್ಲಿ ನೀವು ಭಯಭಕ್ತಿಯುಳ್ಳವರಾಗಿರಬೇಕು. ಆಗ ಆತನು ನಿಮ್ಮನ್ನು ಎಲ್ಲಾ ಶತ್ರುಗಳ ಕೈಗೆ ಸಿಕ್ಕದಂತೆ ಕಾಪಾಡುವನು” ಎಂದು ಹೇಳಿದನು.


ಯೆಹೋವನು ದೊಡ್ಡವನು, ಬಹಳವಾಗಿ ಸ್ತುತಿಗೆ ಪಾತ್ರನು ಆಗಿದ್ದಾನೆ. ಎಲ್ಲಾ ದೇವತೆಗಳಲ್ಲಿ ಆತನೇ ಅದ್ಭುತನಾದವನು.


ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ.


ಕರ್ತನೇ, ದೇವರುಗಳಲ್ಲಿ ನಿನಗೆ ಸಮಾನನೇ ಇಲ್ಲ; ನಿನ್ನ ಕೃತ್ಯಗಳಿಗೆ ಸರಿಯಾದದ್ದು ಇನ್ನೊಂದಿಲ್ಲ.


ನಮ್ಮ ಕರ್ತನು ದೊಡ್ಡವನೂ, ಪರಾಕ್ರಮಿಯೂ ಆಗಿದ್ದಾನೆ, ಆತನ ಜ್ಞಾನವು ಅಪರಿಮಿತವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು