ಯೆರೆಮೀಯ 11:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ನನ್ನ ಮಾತುಗಳನ್ನು ಕೇಳದಿದ್ದ ತಮ್ಮ ಪೂರ್ವಿಕರ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು, ಅನ್ಯದೇವತೆಗಳನ್ನು ಹಿಂಬಾಲಿಸಿ ಪೂಜಿಸಿದ್ದಾರೆ. ಇಸ್ರಾಯೇಲ್ ವಂಶದವರೂ ಮತ್ತು ಯೆಹೂದ ವಂಶದವರೂ ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ನನ್ನ ಮಾತನ್ನು ಕೇಳದೆಹೋದ ತಮ್ಮ ಮೂಲಪಿತೃಗಳ ದುಷ್ಕೃತ್ಯಗಳ ಕಡೆ ಈ ಜನರು ತಿರುಗಿಕೊಂಡಿದ್ದಾರೆ. ಅನ್ಯದೇವತೆಗಳನ್ನು ಹಿಂಬಾಲಿಸುತ್ತಿದ್ದಾರೆ. ಅವುಗಳನ್ನು ಪೂಜಿಸುತ್ತಿದ್ದಾರೆ. ನಾನು ಅವರ ಪೂರ್ವಜರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಇಸ್ರಯೇಲ್ ವಂಶದವರೂ ಜುದೇಯ ವಂಶದವರೂ ಮೀರಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನನ್ನ ಮಾತುಗಳನ್ನು ಕೇಳಲೊಲ್ಲದಿದ್ದ ತಮ್ಮ ಮೂಲ ಪಿತೃಗಳ ದುಷ್ಕೃತ್ಯಗಳ ಕಡೆಗೆ ತಿರುಗಿಕೊಂಡು ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸಿದ್ದಾರೆ; ಇಸ್ರಾಯೇಲ್ ವಂಶದವರೂ ಯೆಹೂದ ವಂಶದವರೂ ನಾನು ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಮೀರಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರು ತಮ್ಮ ಪೂರ್ವಿಕರು ಮಾಡಿದ ಪಾಪಗಳನ್ನೇ ಮಾಡುತ್ತಿದ್ದಾರೆ. ಅವರ ಪೂರ್ವಿಕರು ನನ್ನ ಸಂದೇಶವನ್ನು ಕೇಳಲು ಒಪ್ಪಲಿಲ್ಲ. ಅವರು ಬೇರೆ ದೇವರುಗಳನ್ನು ಅನುಸರಿಸಿ ಪೂಜಿಸಿದರು. ನಾನು ಅವರ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ಯೆಹೂದ ಮತ್ತು ಇಸ್ರೇಲ್ ವಂಶದವರು ಮೀರಿದ್ದಾರೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ. ಅಧ್ಯಾಯವನ್ನು ನೋಡಿ |