Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಯೆಹೂದದ ಪಟ್ಟಣಗಳವರೂ ಹಾಗು ಯೆರೂಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮೊರೆಹೊಕ್ಕಿ ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ಜುದೇಯದ ನಗರದವರೂ ಜೆರುಸಲೇಮಿನ ನಿವಾಸಿಗಳೂ ಯಾವ ದೇವತೆಗಳಿಗೆ ಧೂಪಾರತಿಯೆತ್ತಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು. ಆದರೆ ಅಂಥ ಕೇಡಿನ ಕಾಲದಲ್ಲಿ ಆ ದೇವತೆಗಳಿಂದ ಅವರಿಗೆ ಯಾವ ರಕ್ಷಣೆಯೂ ದೊರಕದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆಗ ಯೆಹೂದದ ಪಟ್ಟಣಗಳವರೂ ಯೆರೂಸಲೇವಿುನ ನಿವಾಸಿಗಳೂ ಯಾವ ದೇವತೆಗಳಿಗೆ ಹೋಮಮಾಡಿದರೋ ಅವುಗಳನ್ನು ಮರೆಹೊಕ್ಕು ಕೂಗಿಕೊಳ್ಳುವರು, ಆದರೆ ಅಂಥ ಕೇಡಿನ ಕಾಲದಲ್ಲಿ ಅವುಗಳಿಂದ ಅವರಿಗೆ ಎಷ್ಟು ಮಾತ್ರವೂ ರಕ್ಷಣೆಯಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದದ ಪಟ್ಟಣಗಳ ಜನರು ಮತ್ತು ಜೆರುಸಲೇಮ್ ನಗರದ ಜನರು ತಮ್ಮ ವಿಗ್ರಹಗಳ ಹತ್ತಿರ ಹೋಗಿ ಸಹಾಯಕ್ಕಾಗಿ ಪ್ರಾರ್ಥಿಸುವರು. ಆ ವಿಗ್ರಹಗಳ ಮುಂದೆ ಅವರು ಧೂಪ ಹಾಕುವರು. ಆದರೆ ಕೇಡು ಬಂದಾಗ ಯೆಹೂದದ ಜನರಿಗೆ ಸಹಾಯಮಾಡಲು ಆ ವಿಗ್ರಹಗಳಿಗೆ ಸಾಧ್ಯವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:12
10 ತಿಳಿವುಗಳ ಹೋಲಿಕೆ  

ಯೆಹೂದವೇ, ನೀನು ನಿರ್ಮಿಸಿಕೊಂಡ ದೇವರುಗಳು ಎಲ್ಲಿ? ನಿನಗೆ ಕೇಡು ಸಂಭವಿಸಿದಾಗ ಅವು ನಿನ್ನನ್ನು ಉದ್ಧರಿಸಲು ಶಕ್ತವಾದರೆ ಏಳಲಿ! ನಿನ್ನ ಪಟ್ಟಣಗಳೆಷ್ಟೋ, ನಿನ್ನ ದೇವರುಗಳೂ ಅಷ್ಟು ಇವೆ.


ಯೆಹೋವನು ಅವರ ವಿಷಯದಲ್ಲಿ ಹೇಳುವುದು ಏನೆಂದರೆ, “ಅವರು ಪೂಜಿಸುತ್ತಿದ್ದ ದೇವರುಗಳು ಎಲ್ಲಿ ಹೋದರು? ಅವರು ಆಶ್ರಯಿಸಿಕೊಂಡಿದ್ದ ಆಶ್ರಯದುರ್ಗನು ಎಲ್ಲಿದ್ದಾನೆ?


ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಹೋಗಿ, ನೀವು ಆರಿಸಿಕೊಂಡ ದೇವತೆಗಳಿಗೆ ಮೊರೆಯಿಡಿರಿ; ಅವು ನಿಮ್ಮನ್ನು ಈ ಇಕ್ಕಟ್ಟಿನಿಂದ ಬಿಡಿಸಲಿ” ಅಂದನು.


ಅವರ ನೈವೇದ್ಯಗಳ ಕೊಬ್ಬನ್ನು ತಿಂದು ಮತ್ತು ಅವರು ಸಮರ್ಪಿಸಿದ ಪಾನದ್ರವ್ಯಗಳನ್ನು ಕುಡಿದ ದೇವತೆಗಳು ಎಲ್ಲಿ? ಅವರೇ ನಿಮ್ಮ ಸಹಾಯಕ್ಕೆ ಬರಲಿ; ಅವರೇ ನಿಮ್ಮನ್ನು ಕಾಯಲಿ.


ಪ್ರವಾಸಿಗಳಾಗಿ ನೀವು ಬಂದಿರುವ ಐಗುಪ್ತ ದೇಶದಲ್ಲಿ ಅನ್ಯದೇವತೆಗಳಿಗೆ ಧೂಪಹಾಕುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುವುದರಿಂದ ನೀವು ನಿರ್ಮೂಲರಾಗಿ ಸಕಲ ಭೂರಾಜ್ಯಗಳ ಶಾಪ ಮತ್ತು ದೂಷಣೆಗಳಿಗೆ ಗುರಿಯಾಗುವಿರಿ.


ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು.


ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ; ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು