ಯೆರೆಮೀಯ 11:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು. ಯೆರೂಸಲೇಮಿನ ಬೀದಿಗಳೆಷ್ಟೋ ತುಚ್ಛ ದೇವತೆಯಾದ ಬಾಳನಿಗೆ ಹೋಮ ಮಾಡುವುದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಎಲೈ ಯೆಹೂದ ಜನರೇ, ನಿಮಗೆ ಎಷ್ಟು ನಗರಗಳಿವೆಯೋ ಅಷ್ಟೂ ದೇವರುಗಳಿದ್ದಾರೆ. ಜೆರುಸಲೇಮಿನಲ್ಲಿ ಹಾದಿಬೀದಿಗಳು ಎಷ್ಟಿವೆಯೋ ಅಷ್ಟೂ ಬಲಿಪೀಠಗಳಿವೆ, ಆ ತುಚ್ಛ ದೇವತೆ ಬಾಳನಿಗೆ ಧೂಪಾರತಿಯೆತ್ತಲು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೂದದವರೇ, ನಿಮ್ಮ ಪಟ್ಟಣಗಳೆಷ್ಟೋ ನಿಮ್ಮ ದೇವರುಗಳೂ ಅಷ್ಟು; ಯೆರೂಸಲೇವಿುನ ಬೀದಿಗಳೆಷ್ಟೋ ತುಚ್ಫದೇವತೆಯಾದ ಬಾಳನಿಗೆ ಹೋಮಮಾಡುವದಕ್ಕಾಗಿ ನೀವು ಮಾಡಿಕೊಂಡಿರುವ ಬಲಿಪೀಠಗಳೂ ಅಷ್ಟು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಯೆಹೂದದ ಜನರೇ, ನೀವು ಅನೇಕ ವಿಗ್ರಹಗಳನ್ನು ಇಟ್ಟುಕೊಂಡಿದ್ದೀರಿ. ಯೆಹೂದದಲ್ಲಿ ಎಷ್ಟು ಪಟ್ಟಣಗಳಿವೆಯೋ, ಅಷ್ಟು ವಿಗ್ರಹಗಳಿವೆ. ತುಚ್ಛ ದೇವರಾದ ಬಾಳನನ್ನು ಪೂಜಿಸಲು ನೀವು ಅನೇಕ ಬಲಿಪೀಠಗಳನ್ನು ಕಟ್ಟಿಕೊಂಡಿದ್ದೀರಿ. ಜೆರುಸಲೇಮಿನಲ್ಲಿ ಎಷ್ಟು ಬೀದಿಗಳಿವೆಯೋ ಅಷ್ಟು ಬಲಿಪೀಠಗಳಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’ ಅಧ್ಯಾಯವನ್ನು ನೋಡಿ |