Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ನನಗೆ ಆಪ್ತವಾದ ಜನತೆಯು, ನನಗೆ ಅಸಹ್ಯಕಾರ್ಯಗಳನ್ನು ಮಾಡಿದ್ದೇಕೆ? ನನ್ನ ಆಲಯದಲ್ಲಿ ಅದಕ್ಕಿರುವ ಹಕ್ಕಾದರೂ ಏನು? ವ್ರತಗಳ ಮೂಲಕ, ಪಶುಬಲಿ ಮಾಂಸದ ಮೂಲಕ ಅದು ಬರಲಿರುವ ದಂಡನೆಯನ್ನು ತಡೆಗಟ್ಟಬಲ್ಲದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸಿಯಾವೇ? ಇಂಥವುಗಳ ಮೂಲಕ ತಪ್ಪಿಸಿಕೊಂಡೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ನನ್ನ ಪ್ರೇಯಸಿ (ಯೆಹೂದ) ನನ್ನ ಪವಿತ್ರ ಆಲಯದಲ್ಲಿ ಏಕೆ ಇದ್ದಾಳೆ? ಇಲ್ಲಿ ಇರಲು ಅವಳಿಗೆ ಅಧಿಕಾರವಿಲ್ಲ. ಅವಳು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದಾಳೆ. ಯೆಹೂದವೇ, ಹರಕೆಗಳಿಂದ ಮತ್ತು ಪ್ರಾಣಿಗಳ ಬಲಿಯಿಂದ ನಿನ್ನ ವಿನಾಶವನ್ನು ತಡೆಯಬಹುದೆಂದು ತಿಳಿದುಕೊಂಡಿರುವಿಯಾ? ನನಗೆ ಹೋಮವನ್ನು ಅರ್ಪಿಸಿ ಶಿಕ್ಷೆಯಿಂದ ತಪ್ಪಿಸಿಕೊಳ್ಳಬಹುದೆಂದು ತಿಳಿದುಕೊಂಡಿರುವಿಯಾ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 “ನನ್ನ ಪ್ರಿಯಳಿಗೆ ನನ್ನ ಆಲಯದಲ್ಲಿ ಏನು ಕೆಲಸ, ಅವಳು ಬಹಳ ಮಂದಿಯ ಸಂಗಡ ಕುಯುಕ್ತಿಯನ್ನು ನಡೆಸಿದ್ದಾಳೆ. ನೀನು ಸಮರ್ಪಿಸಿದ ಮಾಂಸದ ಬಲಿಯು ನಿನ್ನ ಶಿಕ್ಷೆಯನ್ನು ರದ್ದುಗೊಳಿಸುವುದೋ? ನೀನು ಕೆಟ್ಟತನ ಮಾಡುವಾಗ ಉಲ್ಲಾಸಪಡುತ್ತೀ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:15
29 ತಿಳಿವುಗಳ ಹೋಲಿಕೆ  

ಅವರು ಕೆಟ್ಟದ್ದನ್ನು ಮಾಡುವುದರಲ್ಲಿ ಸಂತೋಷಿಸಿ, ಕೆಟ್ಟವರ ದುಷ್ಟತನದಲ್ಲಿ ಆನಂದಿಸುವರು.


ಶುದ್ಧರಿಗೆ ಎಲ್ಲವೂ ಶುದ್ಧವೇ; ಆದರೆ ಅಶುದ್ಧರಿಗೂ, ನಂಬಿಕೆಯಿಲ್ಲದವರಿಗೂ ಯಾವುದೂ ಶುದ್ಧವಲ್ಲ; ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಎರಡೂ ಅಶುದ್ಧವಾಗಿವೆ.


ಆದರೆ ನೀವು ನಿಮ್ಮ ಅಹಂನಿಂದ ಹೊಗಳಿಕೊಳ್ಳುತ್ತೀರಿ. ಅಂಥ ಹೊಗಳಿಕೆಯೆಲ್ಲಾ ಕೆಟ್ಟದ್ದೇ.


ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ.


ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಅಡ್ಡಬಿದ್ದು ಮಹಾಶಬ್ದದಿಂದ, “ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ” ಅಂದನು.


ಆಮೇಲೆ ಅರಸನು ಅತಿಥಿಗಳನ್ನು ನೋಡುವುದಕ್ಕಾಗಿ ಒಳಗೆ ಬಂದನು, ಮದುವೆಯ ಔತಣಕ್ಕೆ ತಕ್ಕ ವಸ್ತ್ರವನ್ನು ಹಾಕಿಕೊಳ್ಳದ ಒಬ್ಬನನ್ನು ಕಂಡು ಅರಸನು,


ಯೆಹೋವನು ನನಗೆ, “ನೀನು ಅನ್ಯದೇವತೆಗಳ ಕಡೆಗೆ ತಿರುಗಿಕೊಂಡು, ದೀಪದ್ರಾಕ್ಷೆಯ ಅಡೆಗಳನ್ನು ಪ್ರೀತಿಸುವ ಇಸ್ರಾಯೇಲರನ್ನು ಯೆಹೋವನು ಪ್ರೀತಿಸುವ ಪ್ರಕಾರ, ನೀನು ಜಾರನಿಗೆ ಪ್ರಿಯಳೂ, ವ್ಯಭಿಚಾರಾಸಕ್ತಳೂ ಆದ ಹೆಂಗಸನ್ನು ಪ್ರೀತಿಸುತ್ತಾ ಬಾ” ಎಂದು ಅಪ್ಪಣೆ ಕೊಟ್ಟನು.


ಯೆಹೋವನು ನನಗೆ ಹೀಗೆ ಹೇಳಿದನು, “ಮೋಶೆಯು ಮತ್ತು ಸಮುವೇಲನು ನನಗೆ ವಿಜ್ಞಾಪಿಸಿದರೂ ನನ್ನ ಮನಸ್ಸು ಈ ಜನರ ಕಡೆಗೆ ತಿರುಗುವುದಿಲ್ಲ. ನನ್ನ ಕಣ್ಣೆದುರಿನಿಂದ ಇವರನ್ನು ನೂಕಿಬಿಡು, ತೊಲಗಿ ಹೋಗಲಿ!


ನಾನು ನನ್ನ ಮನೆಯನ್ನು ತೊರೆದು ನನ್ನ ಸ್ವತ್ತನ್ನು ನಿರಾಕರಿಸಿದ್ದೇನೆ; ನನ್ನ ಪ್ರಾಣಪ್ರಿಯಳನ್ನು ಅವಳ ಶತ್ರುಗಳ ಕೈಗೆ ಒಪ್ಪಿಸಿದ್ದೇನೆ.


ಭ್ರಷ್ಟರಾದ ಮಕ್ಕಳೇ, ತಿರುಗಿಕೊಳ್ಳಿರಿ, ನಾನು ನಿಮಗೆ ಪತಿ. ಒಂದು ಪಟ್ಟಣಕ್ಕೆ ಒಬ್ಬನಂತೆಯೂ, ಗೋತ್ರಕ್ಕೆ ಇಬ್ಬರಂತೆಯೂ ಆರಿಸಿ ಚೀಯೋನಿಗೆ ಕರೆತರುವೆನು.


ಭ್ರಷ್ಟಳಾದ ಇಸ್ರಾಯೇಲ್ ನನಗೆ ವಿಮುಖಳಾಗಿ ವ್ಯಭಿಚಾರ ಮಾಡಿದ ಕಾರಣದಿಂದಲೇ ನಾನು ಅವಳನ್ನು ನಿರಾಕರಿಸಿ, ತ್ಯಾಗಪತ್ರ ಕೊಟ್ಟದ್ದನ್ನು ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನೋಡಿಯೂ, ಅಂಜದೆಯೂ ತಾನೂ ಹೋಗಿ ವ್ಯಭಿಚಾರವನ್ನು ನಡೆಸಿದಳು.


“ನೀನು ಹೋಗಿ ಯೆರೂಸಲೇಮಿನ ಕಿವಿಗೆ ಮುಟ್ಟುವಂತೆ ಈ ಮಾತುಗಳನ್ನು ಸಾರು, ‘ಯೆಹೋವನು ಹೀಗೆನ್ನುತ್ತಾನೆ, ನೀನು ಯೌವನದಲ್ಲಿ ನನ್ನ ಮೇಲೆ ಇಟ್ಟಿದ್ದ ಪ್ರೀತಿಯನ್ನೂ, ವಿವಾಹಕಾಲದ ನಿನ್ನ ಪ್ರೇಮವನ್ನೂ, ನೀನು ಬಿತ್ತನೆ ಮಾಡದ ಅರಣ್ಯದಲ್ಲಿ ನನ್ನನ್ನು ಹಿಂಬಾಲಿಸಿದ ನಿನ್ನ ಪಾತಿವ್ರತ್ಯವನ್ನೂ ನಿನ್ನ ಹಿತಕ್ಕಾಗಿ ಜ್ಞಾಪಕದಲ್ಲಿಟ್ಟಿದ್ದೇನೆ.


ಯೆಹೋವನು ಹೀಗೆನ್ನುತ್ತಾನೆ, “ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು.


ಧರ್ಮೋಪದೇಶಕ್ಕೆ ಕಿವಿಗೊಡದವನು ಮಾಡುವ ದೇವಪ್ರಾರ್ಥನೆಯೂ ಅಸಹ್ಯ.


ನೆರೆಯವನನ್ನು ಮೋಸಗೊಳಿಸಿ, “ತಮಾಷೆಗೋಸ್ಕರ, ಮಾಡಿದೆನಲ್ಲಾ” ಎನ್ನುವವನು,


ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.


ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.


ಅವಿವೇಕಿಗೆ ಕುಯುಕ್ತಿ ವಿನೋದ ವಿವೇಕಿಗೆ ಜ್ಞಾನ ವಿನೋದ.


ದುಷ್ಟರಿಗಾದರೋ ದೇವರು ಹೇಳುವುದು ಏನೆಂದರೆ, “ನನ್ನ ವಿಧಿಗಳನ್ನು ಹೇಳುವುದಕ್ಕೆ ನಿಮಗೇನು ಬಾಧ್ಯತೆ ಉಂಟು? ನನ್ನ ಒಡಂಬಡಿಕೆಯನ್ನು ನಿಮ್ಮ ಬಾಯಲ್ಲಿ ಉಚ್ಚರಿಸುವುದೇಕೆ?


ನಿನ್ನ ಪ್ರಿಯರಾದ ನಮ್ಮ ಮೊರೆಯನ್ನು ಲಾಲಿಸಿ ರಕ್ಷಿಸು. ನಿನ್ನ ಭುಜಬಲದಿಂದ ನಮ್ಮನ್ನು ಜಯಗೊಳಿಸು.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?


ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು. ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು