ಯೆರೆಮೀಯ 11:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸರ್ವಶಕ್ತ ಸರ್ವೇಶ್ವರನಾದ ನಾನೇ ಈ ಇಸ್ರಯೇಲನ್ನೂ ಜುದೇಯವನ್ನೂ ನೆಟ್ಟಿ ಬೆಳೆಸಿದೆ. ಆದರೆ ಈಗ ‘ನಿನಗೆ ಕೇಡು,’ ಎಂದು ಶಪಿಸುತ್ತಿದ್ದೇನೆ. ಏಕೆಂದರೆ ಬಾಳನಿಗೆ ಧೂಪಾರತಿಯೆತ್ತಿ, ನನ್ನನ್ನು ಕೆಣಕಿ, ತಮಗೇ ಕೆಡುಕನ್ನು ಮಾಡಿಕೊಂಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲ್ ವಂಶವೂ ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡದ್ದರಿಂದ ನಿನ್ನನ್ನು ನಾಟಿದ ಸೇನಾಧೀಶ್ವರನಾದ ಯೆಹೋವನು ನಿನಗೆ ಕೆಡುಕಾಗಲಿ ಎಂದು ಶಪಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಸರ್ವಶಕ್ತನಾದ ಯೆಹೋವನು ನಿಮ್ಮನ್ನು ನೆಟ್ಟನು. ನಿಮಗೆ ಕೇಡು ಬರುವದೆಂದು ಆತನು ಸಾರಿರುವನು. ಏಕೆಂದರೆ ಇಸ್ರೇಲ್ ವಂಶವೂ ಯೆಹೂದ ವಂಶವೂ ದುಷ್ಕೃತ್ಯಗಳನ್ನು ಮಾಡಿವೆ. ಬಾಳನಿಗೆ ಹೋಮವನ್ನರ್ಪಿಸಿ ನನಗೆ ಕೋಪ ಬರುವಂತೆ ಮಾಡಿವೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇಸ್ರಾಯೇಲಿನ ವಂಶವೂ ಯೆಹೂದದ ವಂಶವೂ ನನಗೆ ಕೋಪವನ್ನೆಬ್ಬಿಸುವ ಹಾಗೆ ಬಾಳನಿಗೆ ಧೂಪವನ್ನರ್ಪಿಸಿ, ತಮಗೆ ವಿರೋಧವಾಗಿ ಮಾಡಿಕೊಂಡ ಕೇಡಿನ ನಿಮಿತ್ತ, ನಿನ್ನನ್ನು ನೆಟ್ಟ ಸೇನಾಧೀಶ್ವರ ಯೆಹೋವ ದೇವರು ನಿನ್ನ ಮೇಲೆ ಕೆಡುಕಾಗಲಿ ಎಂದು ಪ್ರಕಟಿಸಿದ್ದಾರೆ. ಅಧ್ಯಾಯವನ್ನು ನೋಡಿ |
ಯೆಹೂದದ ಅರಸನಾದ ಹಿಜ್ಕೀಯನೂ ಎಲ್ಲಾ ಯೆಹೂದ್ಯರೂ ಅವನನ್ನು ಕೊಂದುಹಾಕಿದರೋ? ಇಲ್ಲವೇ ಇಲ್ಲ. ಆ ಅರಸನು ಯೆಹೋವನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ದಯೆಯನ್ನು ಬೇಡಿಕೊಳ್ಳಲು ಯೆಹೋವನು ಅವರ ವಿಷಯವಾಗಿ ನುಡಿದಿದ್ದ ಕೇಡನ್ನು ಮನಮರುಗಿ ಮಾಡದೆ ಬಿಟ್ಟನಲ್ಲಾ. ನಾವಾದರೋ ಇವನನ್ನು ಕೊಂದು ಹಾಕಿ ನಮಗೆ ದೊಡ್ಡ ಕೇಡನ್ನು ಉಂಟು ಮಾಡಿಕೊಳ್ಳುವವರಾಗಿದ್ದೇವೆ” ಎಂಬುದಾಗಿ ಸಕಲಜನ ಸಮೂಹಕ್ಕೆ ಹೇಳಿದರು.