ಯೆರೆಮೀಯ 11:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನು ತಿಳಿಸಿದ್ದರಿಂದ ಅವರ ಕುತಂತ್ರವು ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಸರ್ವೇಶ್ವರ ಸ್ವಾಮಿ ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನು ತಿಳಿಸಿದ್ದರಿಂದ [ಅವರ ಕುತಂತ್ರವು] ನನಗೆ ಗೊತ್ತಾಯಿತು; ಆಗಲೇ ಅವರ ಕೃತ್ಯಗಳನ್ನು ನನಗೆ ತೋರಿಸಿದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅನಾತೋತಿನ ಜನರು ನನ್ನ ವಿರುದ್ಧ ಮಾಡುತ್ತಿರುವ ಕುತಂತ್ರವನ್ನೂ ಮಾಡುವ ಕೃತ್ಯಗಳನ್ನೂ ಯೆಹೋವನು ನನಗೆ ತೋರಿಸಿದನು. ಆದ್ದರಿಂದ ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರು ತಿಳಿಸಿದ್ದರಿಂದಲೇ ಶತ್ರುಗಳು ನನಗೆ ವಿರುದ್ಧ ಹೂಡಿದ್ದ ಕುತಂತ್ರವು ನನಗೆ ಗೊತ್ತಾಯಿತು. ಅವರ ಕೃತ್ಯಗಳನ್ನು ನನಗೆ ತೋರಿಸಲಾಯಿತು. ಅಧ್ಯಾಯವನ್ನು ನೋಡಿ |
ಎಲೀಷನು ಊರಿನ ಹಿರಿಯರೊಡನೆ ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಅರಸನು ತನ್ನ ಹತ್ತಿರವಿದ್ದ ಒಬ್ಬ ಆಳನ್ನು ಕಳುಹಿಸಿದನು. ಅವನು ಇನ್ನೂ ದೂರದಲ್ಲಿರುವಾಗಲೇ ಎಲೀಷನು ಹಿರಿಯರಿಗೆ, “ನೋಡಿರಿ, ಆ ಕೊಲೆಗಾರನ ಮಗನು ನನ್ನ ತಲೆಯನ್ನು ಹಾರಿಸುವುದಕ್ಕೆ ಆಳನ್ನು ಕಳುಹಿಸಿದ್ದಾನೆ. ಆಳು ಇಲ್ಲಿಗೆ ಬಂದ ಕೂಡಲೆ ನೀವು ಬಾಗಿಲನ್ನು ಮುಚ್ಚಿ ಅವನು ಒಳಗೆ ಬಾರದಂತೆ ಅದನ್ನು ಒತ್ತಿ ಹಿಡಿಯಿರಿ. ಅವನ ಹಿಂದೆಯೇ ಬರುತ್ತಿರುವ ಅವನ ಒಡೆಯನ ಕಾಲಿನ ಸಪ್ಪಳವು ಕೇಳಿಸುತ್ತಿದೆಯಲ್ಲಾ” ಎಂದು ಹೇಳಿದನು.