ಯೆರೆಮೀಯ 11:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು; ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಜನರು ನನ್ನ ವಿರುದ್ಧ ಕೆಲಸ ಮಾಡುತ್ತಿದ್ದಾರೆಂಬುದನ್ನು ಯೆಹೋವನು ನನಗೆ ತೋರಿಸುವ ಮುಂಚೆ ನಾನು ವಧೆಗಾಗಿ ತೆಗೆದುಕೊಂಡು ಹೋದ ಸಾಧುಕುರಿಯಂತೆ ಇದ್ದೆನು. ಅವರು ನನ್ನ ವಿರೋಧಿಗಳೆಂದು ನಾನು ತಿಳಿದುಕೊಂಡಿರಲಿಲ್ಲ. ಅವರು ನನ್ನ ಬಗ್ಗೆ ಹೀಗೆ ಹೇಳುತ್ತಿದ್ದರು: “ಮರವನ್ನು ಮತ್ತು ಅದರ ಫಲಗಳನ್ನು ನಾಶಮಾಡೋಣ; ಅವನನ್ನು ಕೊಂದುಬಿಡೋಣ; ಜನರು ಅವನನ್ನು ಮರೆತುಬಿಡುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. ಆದರೆ ನನ್ನ ವಿರುದ್ಧ ಸಂಚು ಹೂಡುತ್ತಿದ್ದಾರೆಂದು ನನಗೆ ತಿಳಿದಿರಲಿಲ್ಲ. “ಮರವನ್ನು ಫಲ ಸಹಿತ ನಾಶ ಪಡಿಸೋಣ, ಜೀವ ಲೋಕದಿಂದ ಇವನನ್ನು ನಿರ್ಮೂಲ ಮಾಡೋಣ, ಅವನ ಹೆಸರೇ ಇಲ್ಲದಂತಾಗಲಿ.” ಅಧ್ಯಾಯವನ್ನು ನೋಡಿ |