Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಆಗ ನಾನು, “ಸೇನಾಧೀಶ್ವರರಾದ ಸರ್ವೇಶ್ವರಾ, ನೀವು ಹೃನ್ಮನಗಳನ್ನು ಪರೀಕ್ಷಿಸಿ ನ್ಯಾಯವಾದ ತೀರ್ಪನ್ನು ನೀಡುವವರು. ನೀವು ಅವರಿಗೆ ಮಾಡುವ ಪ್ರತೀಕಾರವನ್ನು ನಾನು ಕಾಣುವೆನು. ನನ್ನ ವ್ಯಾಜ್ಯವನ್ನು ನಿಮ್ಮ ಕೈಗೊಪ್ಪಿಸಿದ್ದೇನೆ,” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಹೃದಯವನ್ನೂ ಅಂತರಿಂದ್ರಿಯವನ್ನೂ ಪರೀಕ್ಷಿಸಿ ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆ ಮಾಡಿದ್ದೇನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆದರೆ ಯೆಹೋವನೇ, ನೀನು ನ್ಯಾಯಪರನಾದ ತೀರ್ಪುಗಾರ. ಜನರ ಹೃದಯವನ್ನು ಮತ್ತು ಬುದ್ಧಿಯನ್ನು ಹೇಗೆ ಪರೀಕ್ಷಿಸಬೇಕೆಂದು ನಿನಗೆ ಗೊತ್ತು. ನಾನು ನನ್ನ ವಾದವನ್ನು ನಿನ್ನ ಮುಂದೆ ಮಂಡಿಸುತ್ತೇನೆ ಮತ್ತು ನೀನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡು ಎಂದು ಅರಿಕೆ ಮಾಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆದರೆ ನೀತಿಯಾಗಿ ನ್ಯಾಯತೀರಿಸುವಂಥ ಅಂತರಿಂದ್ರಿಯಗಳನ್ನೂ, ಹೃದಯವನ್ನೂ ಶೋಧಿಸುವಂಥ ಸೇನಾಧೀಶ್ವರ ಯೆಹೋವ ದೇವರೇ, ನೀನು ಅವರಿಗೆ ಕೊಡುವ ಪ್ರತಿದಂಡನೆಯನ್ನು ನಾನು ಕಾಣುವೆನು. ಏಕೆಂದರೆ ನಿನಗೆ ನನ್ನ ವ್ಯಾಜ್ಯವನ್ನು ಒಪ್ಪಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:20
35 ತಿಳಿವುಗಳ ಹೋಲಿಕೆ  

ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರೀಕ್ಷಿಸಿ ಶಿಷ್ಟರನ್ನು ಶೋಧಿಸುವ ಸೇನಾಧೀಶ್ವರನಾದ ಯೆಹೋವನೇ, ನೀನು ನನ್ನ ಹಿಂಸಕರಿಗೆ ಕೊಡುವ ಪ್ರತಿಫಲವನ್ನು ನನ್ನ ಕಣ್ಣು ನೋಡಲಿ; ನಿನಗೇ ನನ್ನ ವ್ಯಾಜ್ಯವನ್ನು ಅರಿಕೆಮಾಡಿದ್ದೇನಷ್ಟೆ.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು, ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಮನುಷ್ಯರ ಹೃದಯವನ್ನೂ ಮತ್ತು ಅಂತರಿಂದ್ರಿಯವನ್ನೂ ಪರಿಶೋಧಿಸುವ ನೀತಿಸ್ವರೂಪನಾದ ದೇವರೇ, ದುಷ್ಟರ ಕೆಟ್ಟತನವು ಇಲ್ಲದೆ ಹೋಗುವಂತೆ ಮಾಡು; ನೀತಿವಂತರನ್ನು ದೃಢಪಡಿಸು.


ಆದರೆ ಯೆಹೋವನು ಸಮುವೇಲನಿಗೆ, “ನೀನು ಅವನ ಸೌಂದರ್ಯವನ್ನೂ, ಎತ್ತರವನ್ನೂ ನೋಡಬೇಡ; ನಾನು ಅವನನ್ನು ನಿರಾಕರಿಸಿದ್ದೇನೆ. ಯೆಹೋವನು ಮನುಷ್ಯರಂತೆ ಹೊರಗಿನ ತೋರಿಕೆಯನ್ನು ನೋಡದೆ ಹೃದಯದ ಮತ್ತು ಅಂತರಂಗದ ಸೌಂದರ್ಯ ನೋಡುವವನಾಗಿದ್ದಾನೆ” ಅಂದನು.


ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು. ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.


ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.


ಅದಕ್ಕೆ ನಾನು, “ಯೆಹೋವನೇ, ನೀನೇ ಬಲ್ಲೆ, ನನ್ನನ್ನು ಜ್ಞಾಪಕಕ್ಕೆ ತಂದು ಕಟಾಕ್ಷಿಸು; ನನಗಾಗಿ ನನ್ನ ಹಿಂಸಕರಿಗೆ ಮುಯ್ಯಿತೀರಿಸು. ಅವರಿಗೆ ಹೆಚ್ಚು ತಾಳ್ಮೆಯನ್ನು ತೋರಿಸಬೇಡ, ನನ್ನನ್ನು ನಿರ್ಮೂಲ ಮಾಡಬೇಡ. ನಿನ್ನ ನಿಮಿತ್ತವೇ ನಾನು ನಿಂದೆಗೆ ಗುರಿಯಾದೆನೆಂದು ಜ್ಞಾಪಕಕ್ಕೆ ತಂದುಕೋ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಆ ರೀತಿಯಾಗಿ ದುಷ್ಟರಿಗೂ ಶಿಷ್ಟರಿಗೂ ಭೇದ ಮಾಡದೆ ದುಷ್ಟರ ಸಂಗಡ ನೀತಿವಂತರನ್ನೂ ಸಂಹರಿಸುವುದು ನಿನ್ನಿಂದ ಎಂದಿಗೂ ಆಗಬಾರದು; ಸರ್ವಲೋಕಕ್ಕೆ ನ್ಯಾಯತೀರಿಸುವವನು ನ್ಯಾಯವನ್ನೇ ನಡಿಸುವನಲ್ಲವೇ” ಎಂದು ಹೇಳಲು.


ಪರಲೋಕವೇ, ದೇವಜನರೇ, ಅಪೊಸ್ತಲರೇ, ಪ್ರವಾದಿಗಳೇ ಅವಳ ನಿಮಿತ್ತ ಜಯಘೋಷಮಾಡಿರಿ. ಏಕೆಂದರೆ ಇವಳು ನಿಮಗೆ ಮಾಡಿದ ಅನ್ಯಾಯಕ್ಕೆ ಸರಿಯಾಗಿ ದೇವರು ಇವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.


ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.


ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.


ಏಕೆಂದರೆ, ಆತನು ನಿಷ್ಕರ್ಷೆಮಾಡಿದ ಪುರುಷನ ಕೈಯಿಂದ ನೀತಿಗನುಸಾರವಾಗಿ ಭೂಲೋಕದ ನ್ಯಾಯವಿಚಾರಣೆ ಮಾಡುವುದಕ್ಕೆ ಒಂದು ದಿನವನ್ನು ಗೊತ್ತು ಮಾಡಿದ್ದಾನೆ. ಅವನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ ಇದನ್ನು ನಂಬುವುದಕ್ಕೆ ಎಲ್ಲರಿಗೂ ದೃಷ್ಟಾಂತವನ್ನು ಕೊಟ್ಟಿದ್ದಾನೆ” ಅಂದನು.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ಆತನು ಭೂನಿವಾಸಿಗಳಿಗೆ ನ್ಯಾಯತೀರಿಸಲಿಕ್ಕೆ ಬರುತ್ತಾನೆ; ಆತನು ಲೋಕಕ್ಕೆ ನೀತಿಗನುಸಾರವಾಗಿಯೂ, ಜನಾಂಗಗಳಿಗೆ ಯಥಾರ್ಥವಾಗಿಯೂ ತೀರ್ಪುಕೊಡುವನು.


ದೇವರೇ, ಕರುಣಿಸು, ನನ್ನನ್ನು ಕರುಣಿಸು. ನೀನೇ ನನ್ನ ಆಶ್ರಯಸ್ಥಾನವಲ್ಲವೇ! ಆಪತ್ತುಗಳು ಕಳೆದುಹೋಗುವ ತನಕ ನಿನ್ನ ರೆಕ್ಕೆಗಳ ಮರೆಯನ್ನು ಆಶ್ರಯಿಸಿಕೊಳ್ಳುವೆನು.


ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.


ಖೇಡ್ಯ ಮತ್ತು ಗುರಾಣಿಯನ್ನು ಹಿಡಿದುಕೊಂಡು, ನನಗೆ ಸಹಾಯಕನಾಗಿ ನಿಲ್ಲು.


(ಈ ಸಂದರ್ಭದಲ್ಲಿ) ನಾನಾದರೋ ದೇವರನ್ನೇ ಆಶ್ರಯಿಸುತ್ತಿದ್ದೆನು; ನನ್ನ ಸಂಗತಿಯನ್ನು ದೇವರಿಗೇ ಅರಿಕೆಮಾಡಿಕೊಳ್ಳುತ್ತಿದ್ದೆನು.


ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.


ಯೆಹೋವನು ನ್ಯಾಯಾಧಿಪತಿಯಾಗಿ ನಮ್ಮಿಬ್ಬರ ವ್ಯಾಜ್ಯವನ್ನು ತೀರಿಸಲಿ. ಆತನೇ ನೋಡಿ ನನಗೋಸ್ಕರ ವಾದಿಸಿ ನನ್ನನ್ನು ನಿನ್ನ ಕೈಯಿಂದ ತಪ್ಪಿಸಲಿ” ಎಂದು ಹೇಳಿದನು.


ಯೆಹೋವನು ಎಲ್ಲಾ ಜನಾಂಗಳಿಗೂ ನ್ಯಾಯತೀರಿಸುವವನಾಗಿದ್ದಾನೆ. ಯೆಹೋವನೇ, ನಿರಪರಾಧಿಯೂ, ನೀತಿವಂತನೂ ಆಗಿರುವ ನನಗೋಸ್ಕರ ನ್ಯಾಯತೀರಿಸು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.


ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ, ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ತಿಳಿದುಕೋ.


ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.


ಆಗ ಯೆಹೋವನ ಆತ್ಮವು ನನ್ನಲ್ಲಿ ಆವೇಶ ಉಂಟುಮಾಡಿ, ಹೀಗೆ ಸಾರಬೇಕೆಂದು ಅಪ್ಪಣೆಯಾಯಿತು. ಯೆಹೋವನು ಇಂತೆನ್ನುತ್ತಾನೆ, “ಇಸ್ರಾಯೇಲ್ ವಂಶದವರೇ, ನೀವು ಹೀಗೆ ಮಾತನಾಡುತ್ತಿದ್ದೀರಿ, ಸರಿ; ನಿಮ್ಮ ಮನಸ್ಸಿನಲ್ಲಿ ಹುಟ್ಟಿರುವ ಆಲೋಚನೆಗಳು ನನಗೆ ಗೊತ್ತೇ ಇವೆ.


ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟನು.


ನನ್ನನ್ನು ರಕ್ಷಿಸುವ ಗುರಾಣಿಯು ದೇವರೇ; ಆತನು ಯಥಾರ್ಥರನ್ನು ಕಾಪಾಡುತ್ತಾನೆ.


ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ, ನನ್ನ ಪ್ರಾಣವನ್ನು ಉಳಿಸಿದ್ದೀ.


ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.


ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು