Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ, “ನಮ್ಮ ಕೈಯಿಂದ ನೀನು ಸಾಯಬಾರದೆಂದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಹೀಗಿರಲು, “ಸರ್ವೇಶ್ವರನ ಹೆಸರೆತ್ತಿ ಪ್ರವಾದನೆ ಮಾಡಬೇಡ, ಮಾಡಿದರೆ ನಮ್ಮ ಕೈಯಿಂದಲೆ ನೀನು ಸಾಯುವೆ,” ಎಂದು ಅನಾತೋತಿನವರು ನನ್ನ ಪ್ರಾಣಕ್ಕೆ ಹೊಂಚುಹಾಕುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಹೀಗಿರಲು ಸೇನಾಧೀಶ್ವರನಾದ ಯೆಹೋವನು ನನಗೆ - ನಮ್ಮ ಕೈಯಿಂದ ನೀನು ಸಾಯಬಾರದಾಗಿದ್ದರೆ ಯೆಹೋವನ ಹೆಸರೆತ್ತಿ ಪ್ರವಾದಿಸಬೇಡ ಎಂದು ನಿನ್ನ ಪ್ರಾಣಕ್ಕೆ ಹೊಂಚುಹಾಕುತ್ತಿರುವ ಅನಾತೋತಿನವರ ವಿಷಯದಲ್ಲಿ ನನ್ನ ತೀರ್ಮಾನವು ಇದೇ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅನಾತೋತಿನ ಜನರು ಯೆರೆಮೀಯನನ್ನು ಕೊಲೆ ಮಾಡಬೇಕೆಂದು ಯೋಚಿಸುತ್ತಿದ್ದರು. ಆ ಜನರು ಯೆರೆಮೀಯನಿಗೆ, “ಯೆಹೋವನ ಹೆಸರಿನಿಂದ ನೀನು ಪ್ರವಾದಿಸಬೇಡ, ನೀನು ಹಾಗೆ ಮಾಡಿದರೆ ನಾವು ನಿನ್ನ ಕೊಲೆ ಮಾಡುವೆವು” ಎಂದರು. ಅನಾತೋತಿನ ಆ ಜನರ ಬಗ್ಗೆ ಯೆಹೋವನು ಒಂದು ನಿರ್ಣಯವನ್ನು ತೆಗೆದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:21
22 ತಿಳಿವುಗಳ ಹೋಲಿಕೆ  

“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.


“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.


ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.


ಯಾವ ಪ್ರವಾದಿಯೂ ತನ್ನ ಸ್ವದೇಶದಲ್ಲಿ ಅಂಗೀಕರಿಸಲ್ಪಡುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಉಳಿದವರು ಅವನ ಆಳುಗಳನ್ನು ಹಿಡಿದು ಅವಮಾನಮಾಡಿ ಕೊಂದು ಹಾಕಿದರು.


ತೋಟಗಾರರು ಅವನ ಆಳುಗಳನ್ನು ಹಿಡಿದು ಒಬ್ಬನನ್ನು ಹೊಡೆದರು, ಮತ್ತೊಬ್ಬನನ್ನು ಕಡಿದು ಹಾಕಿದರು, ಇನ್ನೊಬ್ಬನನ್ನು ಕಲ್ಲೆಸೆದು ಕೊಂದರು.


ಇದಲ್ಲದೆ ಸಹೋದರನು ಸಹೋದರನನ್ನು, ತಂದೆಯು ಮಗನನ್ನು, ಮರಣಕ್ಕೆ ಒಪ್ಪಿಸುವರು; ಮಕ್ಕಳು ತಂದೆತಾಯಿಗಳ ಮೇಲೆ ತಿರುಗಿಬಿದ್ದು ಅವರನ್ನು ಕೊಲ್ಲಿಸುವರು.


ಮಗನು ತಂದೆಯನ್ನು ತುಚ್ಛೀಕರಿಸುತ್ತಾನೆ. ಮಗಳು ತಾಯಿಗೆ ಎದುರೇಳುತ್ತಾಳೆ. ಸೊಸೆಯು ಅತ್ತೆಯನ್ನು ವಿರೋಧಿಸುತ್ತಾಳೆ. ಹೀಗೆ ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.


ಸಮಸ್ತಜನರಿಗೆ ಹೇಳಬೇಕೆಂದು ಯೆಹೋವನು ಆಜ್ಞಾಪಿಸಿದ್ದನ್ನೆಲ್ಲಾ ಯೆರೆಮೀಯನು ಹೇಳಿ ಮುಗಿಸಿದ ಮೇಲೆ ಯಾಜಕರೂ, ಪ್ರವಾದಿಗಳೂ ಎಲ್ಲಾ ಜನರೂ ಅವನನ್ನು ಹಿಡಿದು, “ನೀನು ಸಾಯಲೇಬೇಕು!


ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.


ಇಗೋ, ನಿನ್ನ ಚಿಕ್ಕಪ್ಪನಾದ ಶಲ್ಲೂಮನ ಮಗನಾಗಿರುವ ಹನಮೇಲನು ನಿನ್ನ ಬಳಿಗೆ ಬಂದು ‘ಅನಾತೋತಿನಲ್ಲಿರುವ ನನ್ನ ಹೊಲವನ್ನು ಕೊಂಡುಕೋ; ಪರಾಧೀನವಾಗದಂತೆ ಅದನ್ನು ಕೊಂಡುಕೊಳ್ಳುವ ಹಕ್ಕು ನಿನ್ನದೇ ಎಂದು ಹೇಳುವನು’” ಎಂದು ತಿಳಿಸಿದನು.


ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.


ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು