Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3-4 ನೀನು ಅವರಿಗೆ ಹೇಳಬೇಕಾದುದು - ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ ಅವರಿಗೆ ‘ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ; ನಾನು ನಿಮ್ಮ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3-4 ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ನಿಮ್ಮ ಪಿತೃಗಳನ್ನು ಬರಮಾಡಿದಾಗ - ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಸ್ರೇಲಿನ ದೇವರಾದ ಯೆಹೋವನು ಹೀಗೆ ಹೇಳುತ್ತಾನೆ, ‘ಈ ಒಡಂಬಡಿಕೆಯನ್ನು ಪಾಲಿಸದೆ ಇದ್ದವರಿಗೆ ಕೇಡಾಗುತ್ತದೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀನು ಅವರಿಗೆ ಹೇಳಬೇಕಾದುದು: ಇಸ್ರಾಯೇಲ್ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:3
8 ತಿಳಿವುಗಳ ಹೋಲಿಕೆ  

“ಅವರು, ಈ ಧರ್ಮಶಾಸ್ತ್ರವಾಕ್ಯಗಳಿಗೆ ಒಡಂಬಟ್ಟು ಕೈಕೊಳ್ಳದೆ ಇರುವವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.


ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.


‘ಈ ಪಟ್ಟಣದವರು ತಮ್ಮ ದೇವರಾದ ಯೆಹೋವನ ಒಡಂಬಡಿಕೆಯನ್ನು ನಿರಾಕರಿಸಿ, ಅನ್ಯದೇವತೆಗಳನ್ನು ಪೂಜಿಸಿ ಸೇವಿಸಿದ್ದರಿಂದಲೇ ಇದಕ್ಕೆ ಈ ಗತಿಯಾಯಿತು’ ಎಂದು ಅಂದುಕೊಳ್ಳುವರು.”


ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.


ಈ ಒಡಂಬಡಿಕೆಯು ನಾನು ಇವರ ಪೂರ್ವಿಕರನ್ನು ಕೈ ಹಿಡಿದು ಐಗುಪ್ತ ದೇಶದೊಳಗಿಂದ ಕರೆದುಕೊಂಡು ಬಂದಾಗ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ನಾನು ಅವರಿಗೆ ಪತಿಯಾಗಿದ್ದರೂ ಆ ನನ್ನ ಒಡಂಬಡಿಕೆಯನ್ನು ಅವರು ಮೀರಿದರಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು