Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 11:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನಿಮ್ಮ ಪೂರ್ವಿಕರನ್ನು ಬರಮಾಡಿದಾಗ ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ, ನಾನು ನಿಮ್ಮ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ನಿಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಯ ಬಗ್ಗೆ ಮಾತನಾಡುತ್ತಿದ್ದೇನೆ. ನಾನು ಈಜಿಪ್ಟಿನಿಂದ ಅವರನ್ನು ಹೊರತಂದಾಗ ನಾನು ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಂಡೆ. ಈಜಿಪ್ಟು ಅನೇಕ ಕಷ್ಟಗಳ ನಾಡಾಗಿತ್ತು. ಅದು ಕಬ್ಬಿಣವನ್ನು ಕರಗಿಸುವ ಉರಿಯುವ ಕುಲುಮೆಯಂತಿತ್ತು. ನಾನು ಅವರಿಗೆ, ‘ನನ್ನ ಆಜ್ಞಾಪಾಲನೆಯನ್ನು ಮಾಡಿರಿ ಮತ್ತು ನಾನು ಹೇಳಿದಂತೆ ಎಲ್ಲವನ್ನು ಮಾಡಿರಿ. ಆಗ ನೀವು ನನ್ನ ಭಕ್ತರಾಗುವಿರಿ. ನಾನು ನಿಮ್ಮ ದೇವರಾಗುವೆನು’ ಎಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಕಬ್ಬಿಣ ಕರಗಿಸುವ ಕುಲುಮೆಯಂತಿದ್ದ ಈಜಿಪ್ಟ್ ದೇಶದಿಂದ ನಿಮ್ಮ ಪೂರ್ವಜರನ್ನು ನಾನು ಬರಮಾಡಿದಾಗ, ನೀವು ನನ್ನ ಮಾತನ್ನು ಕೇಳಿ, ನಾನು ನಿಮಗೆ ಆಜ್ಞಾಪಿಸಿರುವ ವಿಧಿಗಳನ್ನೆಲ್ಲಾ ಕೈಗೊಂಡರೆ, ನನ್ನ ಪ್ರಜೆಯಾಗುವಿರಿ; ನಾನು ನಿಮ್ಮ ದೇವರಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 11:4
39 ತಿಳಿವುಗಳ ಹೋಲಿಕೆ  

ನಿಮ್ಮನ್ನಾದರೋ ಯೆಹೋವನು ತನಗೆ ಸ್ವಂತ ಜನರನ್ನಾಗಿ ಮಾಡಿಕೊಳ್ಳಬೇಕೆಂದು ಸಂಕಲ್ಪಿಸಿ, ಕಬ್ಬಿಣವನ್ನು ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ತಪ್ಪಿಸಿದನು; ಆ ಸಂಕಲ್ಪವು ಈಗ ನೆರವೇರಿತು.


ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು, ನೀವು ನನಗೆ ಪ್ರಜೆಯಾಗಿರುವಿರಿ.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಅವರು ಯೆರೂಸಲೇಮಿನೊಳಗೆ ವಾಸಿಸುವರು; ಸತ್ಯಸಂಧತೆಯಿಂದಲೂ ಮತ್ತು ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.”


ಅವರು ನನ್ನನ್ನು ಯೆಹೋವನೆಂದು ಗ್ರಹಿಸತಕ್ಕ ಹೃದಯವನ್ನು ಅವರಿಗೆ ಅನುಗ್ರಹಿಸುವೆನು. ಅವರು ನನ್ನ ಜನರಾಗಿರುವರು, ನಾನು ಅವರ ದೇವರಾಗಿರುವೆನು; ಅವರು ನನ್ನ ಕಡೆಗೆ ಮನಃಪೂರ್ವಕವಾಗಿ ಹಿಂದಿರುಗಿ ಬರುವರು” ಎಂಬುದೇ.


ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.


“ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿ ಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು, ‘ಇವರು ನನ್ನ ಜನರು’ ಅಂದುಕೊಳ್ಳುವೆನು. ಅವರು, ‘ನಮ್ಮ ದೇವರಾದ ಯೆಹೋವನೇ’ ಅನ್ನುವರು.”


ತಮ್ಮ ವಿಗ್ರಹಗಳಿಂದಾಗಲಿ, ಅಸಹ್ಯವಸ್ತುಗಳಿಂದಾಗಲಿ, ಯಾವ ದುರಾಚಾರದಿಂದಲೇ ಆಗಲಿ ತಮ್ಮನ್ನು ಇನ್ನು ಮುಂದೆ ಅಶುದ್ಧ ಮಾಡಿಕೊಳ್ಳುವುದಿಲ್ಲ. ಅವರು ಪಾಪಮಾಡಿ ಸಿಕ್ಕಿಬಿದ್ದ ದೇವದ್ರೋಹದಿಂದ ನಾನು ಅವರನ್ನು ಉದ್ಧರಿಸಿ ಶುದ್ಧೀಕರಿಸುವೆನು. ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನಾನು ನಿಮ್ಮ ಪೂರ್ವಿಕರಿಗೆ ಅನುಗ್ರಹಿಸಿದ ದೇಶದಲ್ಲಿ ನೀವು ವಾಸಿಸುವಿರಿ. ನೀವು ನನಗೆ ಪ್ರಜೆಯಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಹೀಗಾದರೆ ಇಸ್ರಾಯೇಲ್ ವಂಶದವರು ಇನ್ನು ನನ್ನನ್ನು ತೊರೆಯುವುದಿಲ್ಲ, ತಮ್ಮ ಲೆಕ್ಕವಿಲ್ಲದ ದ್ರೋಹಗಳಿಂದ ತಮ್ಮನ್ನು ಹೊಲೆ ಮಾಡಿಕೊಳ್ಳುವುದಿಲ್ಲ; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು” ಇದು ಕರ್ತನಾದ ಯೆಹೋವನ ನುಡಿ.


ಕಲ್ಲಾದ ಹೃದಯವನ್ನು ಅವರೊಳಗಿಂದ ತೆಗೆದು ಮೃದುವಾದ ಹೃದಯವನ್ನು ಅವರಿಗೆ ಅನುಗ್ರಹಿಸುವೆನು; ಅವರು ನನಗೆ ಪ್ರಜೆಯಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ನೀವು ನನ್ನ ಜನರಾಗಿರುವಿರಿ, ನಾನು ನಿಮಗೆ ದೇವರಾಗಿರುವೆನು.


ಈಗಲೇ ನಿಮ್ಮ ಮಾರ್ಗಗಳನ್ನೂ ಕೃತ್ಯಗಳನ್ನೂ ತಿದ್ದಿಕೊಂಡು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡಿರಿ; ಹಾಗೆ ಮಾಡಿದರೆ ಯೆಹೋವನು ನಿಮ್ಮ ವಿಷಯವಾಗಿ ನುಡಿದಿರುವ ಕೇಡನ್ನು ಮನಮರುಗಿ ಮಾಡದಿರುವನು.


ನಾನು ಈಗ ನಿಮಗೆ ಬೋಧಿಸುವ ನಿಮ್ಮ ದೇವರಾದ ಯೆಹೋವನ ಆಜ್ಞೆಗಳಿಗೆ ನೀವು ವಿಧೇಯರಾಗಿ ನಡೆದರೆ ಆಶೀರ್ವಾದವೂ,


“ನೀವು ನನ್ನ ನಿಯಮಗಳನ್ನು ಕೈಕೊಂಡು, ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ,


ನೀನು ಪ್ರವಾಸಿಯಾಗಿರುವ ಕಾನಾನ್ ದೇಶವನ್ನೆಲ್ಲಾ ನಿನಗೂ ನಿನ್ನ ಸಂತತಿಗೂ ಶಾಶ್ವತ ಸ್ವತ್ತಾಗಿ ಕೊಟ್ಟು ಎಂದೆಂದಿಗೂ ಅವರಿಗೆ ದೇವರಾಗಿರುವೆನು” ಎಂದನು.


ಇದಲ್ಲದೆ ಆತನು ಪರಿಪೂರ್ಣನಾಗಿ, ತನಗೆ ವಿಧೇಯರಾಗಿರುವ ಎಲ್ಲರಿಗೂ ನಿತ್ಯ ರಕ್ಷಣೆಗೆ ಕಾರಣನಾದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ದೂರದಲ್ಲಿರುವವರು ಬಂದು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಕೈಹಾಕುವರು; ಆಗ ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದಾತನು ಸೇನಾಧೀಶ್ವರನಾದ ಯೆಹೋವನೇ ಎಂದು ನಿಮಗೆ ದೃಢವಾಗುವುದು. ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮನಃಪೂರ್ವಕವಾಗಿ ಕೇಳಿದರೆ ಇದೆಲ್ಲಾ ನೆರವೇರುವುದು.’”


ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವುದು; ನಾನು ಅವರಿಗೆ ದೇವರಾಗಿರುವೆನು. ಅವರು ನನಗೆ ಪ್ರಜೆಯಾಗಿರುವರು.


ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ಈ ಪಟ್ಟಣವನ್ನು ಕಸ್ದೀಯರ ವಶಕ್ಕೆ ಅಂದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಸಿಕ್ಕಿಸುವೆನು, ಅವನು ಇದನ್ನು ಆಕ್ರಮಿಸುವನು.


ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.


ಅದಕ್ಕೆ ಸಮುವೇಲನು, “ಯೆಹೋವನು ವಿಧೇಯತ್ವವನ್ನು ಮೆಚ್ಚುವಷ್ಟು ಯಜ್ಞಹೋಮಗಳಿಗೆ ಮೆಚ್ಚುತ್ತಾನೋ? ಯಜ್ಞವನ್ನರ್ಪಿಸುವುದಕ್ಕಿಂತ ಆತನ ಆಜ್ಞಾಪಾಲನೆ ಉತ್ತಮವಾಗಿದೆ; ಟಗರುಗಳ ಕೊಬ್ಬಿಗಿಂತ ವಿಧೇಯತೆ ವಿಶಿಷ್ಟವಾದುದು.


ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಗೊಳ್ಳುವವರಿಗಾದರೋ ಸಾವಿರ ತಲೆಗಳವರೆಗೆ ದಯೆತೋರಿಸುವೆನು.


ದಕ್ಷಿಣ ಸೀಮೆಯ ನೀರಾನೆಯ ವಿಷಯವಾದ ದೈವೋಕ್ತಿ. ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ.


ನಿಮ್ಮ ಪೂರ್ವಿಕರನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ದಿನದಿಂದ ಇಂದಿನವರೆಗೂ ನಾನು ಅವರಿಗೆ, ನನ್ನ ಮಾತನ್ನು ಕೇಳಿರಿ ಎಂದು ತಡ ಮಾಡದೆ ಖಂಡಿತವಾಗಿ ಆಜ್ಞಾಪಿಸುತ್ತಾ ಬಂದೆನಷ್ಟೆ.


ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.


ಆಗ ನೆಬೂಕದ್ನೆಚ್ಚರನು ಧಗಧಗನೆ ಉರಿಯುವ ಬೆಂಕಿಯ ಬಾಯಿಯ ಬಳಿಗೆ ಹೋಗಿ, “ಪರಾತ್ಪರದೇವರ ಸೇವಕರಾದ ಶದ್ರಕ್, ಮೇಶಕ್, ಅಬೇದ್ನೆಗೋ ಎಂಬುವವರೇ ಬನ್ನಿ, ಹೊರಗೆ ಬನ್ನಿ ಎಂದು ಕೂಗಲು, ಶದ್ರಕ್ ಮೇಶಕ್ ಅಬೇದ್ನೆಗೋ ಎಂಬುವವರು ಬೆಂಕಿಯೊಳಗಿಂದ ಹೊರಟು ಬಂದರು.


“ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ಇದಲ್ಲದೆ, ಇವನು ಯೆಹೋವನನ್ನೇ ಆಶ್ರಯಿಸಿಕೊಂಡು ಆತನನ್ನು ಬಿಡದೆ ಹಿಂಬಾಲಿಸಿ, ಮೋಶೆಯ ಮುಖಾಂತರವಾಗಿ ಅನುಗ್ರಹಿಸಿದ ಆಜ್ಞೆಗಳನ್ನು ಕೈಕೊಂಡು ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು