ಯೆರೆಮೀಯ 12:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ. ಯೆಹೋವನ ರೋಷಾಗ್ನಿಯ ನಿಮಿತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಜನರು ಗೋದಿಯನ್ನು ಬಿತ್ತಿದರು ಆದರೆ ಮುಳ್ಳುಗಿಡವನ್ನು ಕೊಯ್ದರು ! ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರು ಆದರೆ ಯಾವ ಲಾಭವೂ ಗಿಟ್ಟದೆಹೋಯಿತು. ತಮ್ಮ ಬೆಳೆಯ ವಿಷಯವಾಗಿ ಹೇಸಬೇಕಾಯಿತು ನನ್ನ ಕೋಪಾಗ್ನಿಯೆ ಇದಕ್ಕೆ ಕಾರಣವಾಯಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಗೋದಿಯನ್ನು ಬಿತ್ತಿ ಮುಳ್ಳನ್ನು ಕೊಯ್ದಿದ್ದಾರೆ; ಕ್ಷೇಮ ಕೆಡುವಷ್ಟು ಪ್ರಯಾಸಪಟ್ಟರೂ ಯಾವ ಲಾಭವನ್ನೂ ಹೊಂದಲಿಲ್ಲ; ಯೆಹೋವನ ರೋಷಾಗ್ನಿಯ ನಿವಿುತ್ತ ನಿಮ್ಮ ಬೆಳೆಯ ವಿಷಯವಾಗಿ ನಿಮಗೆ ನಾಚಿಕೆಯಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜನರು ಗೋಧಿಯನ್ನು ಬಿತ್ತುವರು; ಆದರೆ ಅವರು ಕೇವಲ ಮುಳ್ಳಿನ ರಾಶಿಯನ್ನು ಕೊಯ್ಯುವರು. ಅವರು ತುಂಬ ದಣಿಯುವವರೆಗೆ ಕಷ್ಟಪಟ್ಟು ಕೆಲಸ ಮಾಡುವರು. ಆದರೆ ಆ ಎಲ್ಲಾ ಕೆಲಸದ ಪ್ರತಿಫಲವಾಗಿ ಅವರಿಗೆ ಏನೂ ಸಿಗುವದಿಲ್ಲ. ಅವರು ತಮ್ಮ ಬೆಳೆಗಳಿಂದ ನಾಚಿಕೆಪಟ್ಟುಕೊಳ್ಳುವರು. ಯೆಹೋವನ ರೋಷವು ಹಾಗೆಲ್ಲ ಮಾಡುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.” ಅಧ್ಯಾಯವನ್ನು ನೋಡಿ |