ಯೆರೆಮೀಯ 12:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ಈಗ ನನ್ನ ಹೆಸರನ್ನೆತ್ತಿ ‘ಯೆಹೋವನ ಜೀವದಾಣೆ’ ಎಂದು ಪ್ರಮಾಣಮಾಡುವ ನನ್ನ ಜನರ ಅಭ್ಯಾಸವನ್ನು ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನನ್ನ ಜನರಿಗೆ ಬಾಳ್‍ದೇವತೆಯ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ಮೊದಲು ಕಲಿಸಿಕೊಟ್ಟವರು ಇವರೇ. ಈಗ ನನ್ನ ಜನರ ಮಾರ್ಗವನ್ನು ಅವಲಂಬಿಸಿ ನನ್ನ ಹೆಸರೆತ್ತಿ, “ಸರ್ವೇಶ್ವರನ ಜೀವದಾಣೆ” ಎಂದು ಪ್ರಮಾಣ ಮಾಡುವುದನ್ನು ಕಲಿತರೆ ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ ಈಗ ನನ್ನ ಹೆಸರನ್ನೆತ್ತಿ ಯೆಹೋವನ ಜೀವದಾಣೆ ಎಂದು ಪ್ರಮಾಣ ಮಾಡುವ ನನ್ನ ಜನರ ಅಭ್ಯಾಸವನ್ನು ಚೆನ್ನಾಗಿ ಮಾಡಿಕೊಂಡರೆ ನನ್ನ ಜನರ ಮಧ್ಯದಲ್ಲಿ ನೆಲೆಗೊಂಡು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ಜನರು ತಮ್ಮ ಪಾಠಗಳನ್ನು ಸರಿಯಾಗಿ ಕಲಿತುಕೊಳ್ಳಬೇಕೆಂಬುದು ನನ್ನ ಅಪೇಕ್ಷೆ. ಮೊದಲು, ಆ ಜನರು ಬಾಳನ ಹೆಸರೆತ್ತಿ ಪ್ರಮಾಣ ಮಾಡುವುದನ್ನು ನನ್ನ ಜನರಿಗೆ ಕಲಿಸಿಕೊಟ್ಟರು. ಈಗ ಆ ಜನರು ಅದೇ ರೀತಿಯಲ್ಲಿ ತಮ್ಮ ಪಾಠವನ್ನು ಕಲಿತುಕೊಳ್ಳಬೇಕೆಂಬುದು ನನ್ನ ಇಚ್ಛೆ. ಅವರು, ‘ಯೆಹೋವನ ಜೀವದಾಣೆ’ ಎಂದು ಹೇಳಿದರೆ ಅವರನ್ನು ಅಭಿವೃದ್ಧಿಪಡಿಸಿ ಅವರನ್ನು ನಮ್ಮ ಜನರ ಮಧ್ಯದಲ್ಲಿ ನೆಲೆಗೊಳಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು. ಅಧ್ಯಾಯವನ್ನು ನೋಡಿ |