Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದೇಕೆ? ನೀನು ಅವರನ್ನು ನೆಟ್ಟಿದ್ದಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ. ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರನ್ನು ನಾಟಿಮಾಡಿದವರು ನೀವು ಬೇರೂರಿ ಬೆಳೆದು ಹಣ್ಣುಬಿಡುತ್ತಿದ್ದಾರೆ ಅವರು. ನೀವು ಅವರ ಅಧರಕ್ಕೆ ಹತ್ತಿರ, ಹೃದಯಕ್ಕೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನೀನು ಅವರನ್ನು ನಾಟಿದ್ದೀ, ಅವರು ಬೇರೂರಿ ಬೆಳೆದು ಹಣ್ಣುಬಿಟ್ಟಿದ್ದಾರೆ; ನೀನು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀನು ಆ ದುಷ್ಟರನ್ನು ಇಲ್ಲಿ ಇಟ್ಟಿರುವೆ. ಅವರು ಆಳವಾಗಿ ಬೇರುಬಿಟ್ಟ ಸಸಿಗಳಂತಿದ್ದಾರೆ, ಅವು ಬೆಳೆಯುತ್ತವೆ, ಹಣ್ಣು ಬಿಡುತ್ತವೆ. ನೀನು ಅವರಿಗೆ ತುಂಬ ಹತ್ತಿರದವನು ಮತ್ತು ಪ್ರೀತಿಪಾತ್ರನು ಎಂದು ಅವರು ಬಾಯಿಂದ ಹೇಳುತ್ತಾರೆ. ಆದರೆ ಹೃದಯದಲ್ಲಿ ಅವರು ನಿನ್ನಿದ ತುಂಬಾ ದೂರದಲ್ಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ, ಅವರು ಬೇರೂರಿ ಬೆಳೆದು ಹಣ್ಣು ಬಿಟ್ಟಿದ್ದಾರೆ, ನೀವು ಅವರ ಬಾಯಿಗೆ ಸಮೀಪ, ಅಂತರಿಂದ್ರಿಯಕ್ಕೆ ದೂರ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:2
15 ತಿಳಿವುಗಳ ಹೋಲಿಕೆ  

ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.


ಅವರು ತಾವು ದೇವರನ್ನು ಅರಿತವರೆಂದು ಹೇಳಿಕೊಳ್ಳುತ್ತಾರೆ; ಆದರೆ ಅವರ ನಡತೆ ತದ್ವಿರುದ್ಧವಾಗಿರುತ್ತದೆ. ಅವರು ಅಸಹ್ಯ ಕೃತ್ಯಗಳಲ್ಲಿ ಭಾಗವಹಿಸುವವರೂ, ದೇವರಿಗೆ ಅವಿಧೇಯರೂ ಆಗಿರುವುದರಿಂದ ದೇವರನ್ನು ತಮ್ಮ ಕೃತ್ಯಗಳಿಂದಲೇ ಅಲ್ಲಗಳೆಯುತ್ತಾರೆ ಹಾಗು ಸತ್ಕಾರ್ಯವನ್ನು ಮಾಡಲು ಅಯೋಗ್ಯರಾಗಿದ್ದಾರೆಂದು ಸಾಬಿತುಪಡಿಸುತ್ತಾರೆ.


“ಈ ಜನರು ತಮ್ಮ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ ಆದರೆ ಅವರ ಹೃದಯವು ನನ್ನಿಂದ ದೂರವಾಗಿದೆ.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.


ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.


ಅದಕ್ಕೆ ಆತನು, “ಕಪಟಿಗಳಾದ ನಿಮ್ಮ ವಿಷಯದಲ್ಲಿ ಯೆಶಾಯನು ಸರಿಯಾಗಿ ಪ್ರವಾದಿಸಿದ್ದಾನೆ; ಅವನು ಬರೆದಿರುವಂತೆ: “‘ಈ ಜನರು ಮಾತಿನಿಂದ ನನ್ನನ್ನು ಗೌರವಿಸುತ್ತಾರೆ, ಆದರೆ ಅವರ ಹೃದಯ ನನ್ನಿಂದ ದೂರವಾಗಿದೆ.


ಇಸ್ರಾಯೇಲಿಗೆ ಇಷ್ಟು ದಂಡನೆಯಾದರೂ ಯೆಹೂದವೆಂಬ ದ್ರೋಹಿಯಾದ ಅವಳ ತಂಗಿಯು ನನ್ನ ಕಡೆಗೆ ಪೂರ್ಣಮನದಿಂದಲ್ಲ, ಕಪಟದಿಂದಲೇ ನನ್ನ ಕಡೆ ತಿರುಗಿಕೊಂಡಿದ್ದಾಳೆ” ಎಂಬುದೇ ಯೆಹೋವನಾದ ನನ್ನ ನುಡಿ.


ಮೂರ್ಖನು ಬೇರೂರುವುದನ್ನು ನಾನು ನೋಡಿದೆನು. ಕೂಡಲೆ ಅವನ ನಿವಾಸವು ಶಾಪಗ್ರಸ್ತವೆನ್ನುವುದಕ್ಕೆ ಆಸ್ಪದವಾಯಿತು.


ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.


ನೀನು ಕೇಡನ್ನು ಬಯಸುವಂತಹ ದೇವರಲ್ಲ, ಪವಿತ್ರ ದೃಷ್ಟಿಯಿಂದ ನೋಡುವ ನಿನ್ನ ಕಣ್ಣಿನ ರಕ್ಷಣೆ ನಮ್ಮೊಂದಿಗಿದೆ. ಆದರೆ ನಮಗಾಗುತ್ತಿರುವ ಕೇಡನ್ನು ನೋಡಿಯೂ ಏಕೆ ಸುಮ್ಮನಿರುವೆ? ದುಷ್ಟರು ತಮಗಿಂತ ಯೋಗ್ಯನನ್ನು ಕಬಳಿಸುತ್ತಿರುವುದನ್ನು ನೋಡಿ ಏಕೆ ಸುಮ್ಮನಿರುವೇ?


ತುಂಬಿದ ಪಟ್ಟಣದೊಳಗಿಂದ ಜನರು ನರಳುವರು, ಗಾಯಪಟ್ಟವರು ಮೊರೆಯಿಡುವರು, ಆದರೆ ದೇವರಾದರೋ ಅವರ ಮೊರೆಗೆ ಕಿವಿಗೊಡನು.


ಅವರು ಹಾಸಿಗೆಯ ಮೇಲೆ ಬಿದ್ದುಕೊಂಡು ಧಾನ್ಯ ದ್ರಾಕ್ಷಾರಸಗಳಿಗೆ ಅರಚಿಕೊಳ್ಳುತ್ತಾರೆಯೇ ಹೊರತು, ನನ್ನನ್ನು ಮನಃಪೂರ್ವಕವಾಗಿ ಎಂದೂ ಪ್ರಾರ್ಥಿಸಲಿಲ್ಲ; ನನ್ನನ್ನು ತೊರೆದುಬಿಟ್ಟು ತಮ್ಮ ದೇಹಗಳನ್ನು ಗಾಯಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು