ಯೆರೆಮೀಯ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇನ್ನೆಷ್ಟರವರೆಗೆ ನಾಡು ದುಃಖಿಸುತ್ತಿರಬೇಕು? ಅದರ ಎಲ್ಲೆಎಲ್ಲೆಗಳಲ್ಲಿ ಹುಲ್ಲು ಸೊಪ್ಪು ಒಣಗಿರಬೇಕು? ನಾಡಜನರ ನೀಚತನದ ನಿಮಿತ್ತ ಮಾಯವಾಗಿವೆ ಪ್ರಾಣಪಕ್ಷಿಗಳು ಕೂಡ. ‘ನಮ್ಮ ನಡತೆಯನ್ನು ಗಮನಿಸರು ದೇವರು’ ಎಂದುಕೊಳ್ಳುತ್ತಿರುವರು ಆ ಜನರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವದರಿಂದ ಮೃಗಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವದೇ ಇಲ್ಲ ಎಂದು ಹೇಳಿದ್ದಾರಷ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಎಷ್ಟು ಕಾಲದವರೆಗೆ ಭೂಮಿಯು ಒಣಗಿರಬೇಕು? ಎಷ್ಟು ಕಾಲದವರೆಗೆ ಹುಲ್ಲು ಒಣಗಿ ನಿರ್ಜೀವವಾಗಿರಬೇಕು? ದೇಶದಲ್ಲಿ ಪಶುಪಕ್ಷಿಗಳು ಸತ್ತುಹೋಗಿವೆ. ಇದು ದುಷ್ಟರ ತಪ್ಪಾದರೂ ಆ ದುಷ್ಟರು, “ನಮಗೆ ಏನಾಗುವದೆಂದು ನೋಡಲು ಯೆರೆಮೀಯನು ಬಹಳ ದಿವಸ ಬದುಕಿರಲಾರ” ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು, ಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಪಕ್ಷಿಗಳು ಬಡಿದುಕೊಂಡು ಹೋಗಿವೆ; ಆಹಾ, ಅವನು ನಮ್ಮ ಅಂತ್ಯ ಗತಿಯನ್ನು ನೋಡುವುದೇ ಇಲ್ಲ, ಎಂದು ಹೇಳಿದ್ದಾರಷ್ಟೆ. ಅಧ್ಯಾಯವನ್ನು ನೋಡಿ |