Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 12:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಬೇಟೆಯ ಹಕ್ಕಿಯಂತಿದೆ, ಹದ್ದುಗಳು ಅದರ ಸುತ್ತಲೂ ವಿರುದ್ಧವಾಗಿ ಕುಳಿತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವುದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರೆತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನ ಸೊತ್ತಾದ ಜನತೆ ನನ್ನ ದೃಷ್ಟಿಗೆ ಚಿತ್ರವರ್ಣದ ಪಕ್ಷಿಯಂತೆ ಅದರ ಸುತ್ತ ರಣಹದ್ದುಗಳ ಕೂಟ ಸೇರಿದೆ ಕಾಡುಮೃಗಗಳನ್ನೆಲ್ಲ ಕರೆದುತನ್ನಿ ಅದನ್ನು ತಿಂದುಬಿಡಲಿಕ್ಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನನ್ನ ಸ್ವಾಸ್ತ್ಯವಾದ ಜನವು ನನ್ನ ದೃಷ್ಟಿಗೆ ಚಿತ್ರವರ್ಣದ ಹದ್ದಿನಂತಿದೆಯೋ? ಹದ್ದುಗಳು ಅದರ ಸುತ್ತಲು ವಿರುದ್ಧವಾಗಿ ಕೂತಿವೆಯೋ? ಹೋಗಿರಿ, ಅದನ್ನು ತಿಂದುಬಿಡುವದಕ್ಕೆ ಎಲ್ಲಾ ಕಾಡುಮೃಗಗಳನ್ನು ಕರತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ‘ಸ್ವಾಸ್ತ್ಯವಾದ ಜನರು’ ಹದ್ದುಗಳಿಂದ ಸುತ್ತುವರಿಯಲ್ಪಟ್ಟು ಸಾಯುತ್ತಿರುವ ಪ್ರಾಣಿಯಂತಾಗಿದ್ದಾರೆ. ಆ ಪಕ್ಷಿಗಳು ಅವರ ಸುತ್ತಲೂ ಹಾರಾಡುತ್ತವೆ. ಕಾಡುಪ್ರಾಣಿಗಳೇ, ಬನ್ನಿ, ಬನ್ನಿ, ಬಂದು ನಿಮ್ಮ ಆಹಾರವನ್ನು ತೆಗೆದುಕೊಳ್ಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು. ಸುತ್ತಲಾಗಿ ಹದ್ದುಗಳು ಅದಕ್ಕೆ ವಿರೋಧವಾಗಿವೆ. ಬನ್ನಿ, ಕಾಡುಮೃಗಗಳನ್ನೆಲ್ಲಾ ಕೂಡಿಸಿರಿ, ನುಂಗುವುದಕ್ಕೆ ಅವುಗಳನ್ನು ತನ್ನಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 12:9
15 ತಿಳಿವುಗಳ ಹೋಲಿಕೆ  

ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ!


ಈ ಜನರ ಹೆಣಗಳು ಆಕಾಶದ ಪಕ್ಷಿಗಳಿಗೂ ಹಾಗು ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವುದಿಲ್ಲ.


ಯೆಹೋವನು ತನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ಮುಂತಿಳಿಸಿದ ಯೆಹೋವನ ವಾಕ್ಯದ ಪ್ರಕಾರ ಯೆಹೂದ ರಾಜ್ಯವನ್ನು ಹಾಳುಮಾಡುವುದಕ್ಕೋಸ್ಕರ ಕಸ್ದೀಯರ, ಅರಾಮ್ಯರ, ಮೋವಾಬ್ಯರ, ಅಮ್ಮೋನಿಯರ ಸುಲಿಗೆಯ ಗುಂಪುಗಳನ್ನು ಅಲ್ಲಿಗೆ ಕಳುಹಿಸಿದನು.


ಇದಲ್ಲದೆ ನೀನು ನೋಡಿದ ಹತ್ತು ಕೊಂಬುಗಳು ಮತ್ತು ಮೃಗವನ್ನು ಕಂಡೆಯಲ್ಲ? ಅವುಗಳು ಜಾರಸ್ತ್ರೀಯನ್ನು ದ್ವೇಷಿಸಿ, ಅವಳನ್ನು ಗತಿಯಿಲ್ಲದವಳನ್ನಾಗಿಯೂ ಬಟ್ಟೆ ಇಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು, ಅವಳನ್ನು ಬೆಂಕಿಯಲ್ಲಿ ಸುಟ್ಟುಬಿಡುವರು.


“ನಾನು ಅವರಿಗೆ ನಾಲ್ಕು ವಿಧವಾದ ಬಾಧಕರನ್ನು, ಅಂದರೆ ಕಡಿಯುವುದಕ್ಕೆ ಖಡ್ಗವನ್ನು, ಸೀಳುವುದಕ್ಕೆ ನಾಯಿಗಳನ್ನು, ನುಂಗಿ ಹಾಳುಮಾಡುವುದಕ್ಕೆ ಆಕಾಶದ ಪಕ್ಷಿಗಳನ್ನೂ ಮತ್ತು ಭೂಜಂತುಗಳನ್ನೂ ನೇಮಿಸುವೆನು” ಎಂಬುದು ಯೆಹೋವನಾದ ನನ್ನ ಮಾತು.


ಏಕೆ ಸೂರೆಯಾದನು? ಪ್ರಾಯದ ಸಿಂಹಗಳು ಅವನ ಮೇಲೆ ಗರ್ಜಿಸಿ ಆರ್ಭಟಿಸುತ್ತಿವೆ, ಅವನ ದೇಶವನ್ನು ಹಾಳುಮಾಡಿವೆ, ಅವನ ಊರುಗಳು ಸುಟ್ಟು ನಿರ್ಜನವಾಗಿವೆ.


ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.


ಚೀಯೋನ್ ನಗರಿಯು ಕೈಚಾಚಿ ಅಂಗಲಾಚಿದರೂ ಯಾರೂ ಸಂತೈಸರು; ಯಾಕೋಬಿನ ನೆರೆಹೊರೆಯವರು ಅದಕ್ಕೆ ವಿರೋಧಿಗಳಾಗಿರಲಿ ಎಂದು ಯೆಹೋವನು ತೀರ್ಮಾನಿಸಿದ್ದಾನೆ; ಯೆರೂಸಲೇಮು ಅವರ ನಡುವೆ ಹೊಲೆಯಾಗಿ ಬಿದ್ದಿದೆ.


ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.


ಸೇನಾಧೀಶ್ವರನಾದ ಯೆಹೋವನ ನ್ಯಾಯನಿರ್ಣಯದ ದಿನವು ಗರ್ವದಿಂದ ಹೆಚ್ಚಿಕೊಂಡಿರುವ ಪ್ರತಿಯೊಬ್ಬನ ಮೇಲೆ ಬರುವುದು. ಆಗ ಅವನು ತಗ್ಗಿಸಲ್ಪಡುವನು.


ಕುರುಬರು ಇಲ್ಲವಾದುದರಿಂದ ಅವು ಚದುರಿ ಹೋದವು; ಚದುರಿ ಹೋಗಿ, ಕಾಡಿನ ಸಕಲ ಮೃಗಗಳಿಗೆ ತುತ್ತಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು