Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಇಸ್ರಯೇಲ್ ವಂಶವೆಲ್ಲವು ಹಾಗು ಜುದೇಯ ವಂಶವೆಲ್ಲವು ನನಗೆ ಪ್ರಜೆಯಾಗಿರಲಿ; ನನಗೆ ಕೀರ್ತಿ, ಗೌರವ ತರಲಿ, ನನಗೆ ಆಭರಣವಾಗಿರಲಿ ಎಂದುಕೊಂಡೆ. ನಡುಕ್ಟಟನ್ನು ಸೊಂಟಕ್ಕೆ ಬಿಗಿದುಕೊಳ್ಳುವಂತೆ ಇವರನ್ನು ಬಿಗಿದುಕೊಂಡಿದ್ದೆ. ಆದರೂ ಇವರು ನನಗೆ ಕಿವಿಗೊಡದೆಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಸಮಸ್ತ ಇಸ್ರಾಯೇಲ್ ವಂಶವೂ ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರುವಾಸಿಯೂ ಸ್ತೋತ್ರವೂ ಮಹಿಮೆಯೂ ಆಗಿರಲೆಂದು ನಡುಕಟ್ಟು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳಲೊಲ್ಲದೆ ಹೋದರು ಎಂದು ಯೆಹೋವನು ಅನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪುರುಷನೊಬ್ಬನು ನಡುಪಟ್ಟಿಯನ್ನು ಬಿಗಿಯಾಗಿ ಸೊಂಟಕ್ಕೆ ಸುತ್ತಿಕೊಳ್ಳುವಂತೆ ನಾನು ಇಸ್ರೇಲಿನ ಎಲ್ಲಾ ವಂಶಗಳನ್ನು ಮತ್ತು ಯೆಹೂದದ ಎಲ್ಲಾ ವಂಶಗಳನ್ನು ನನ್ನ ಸುತ್ತಲೂ ಬಿಗಿದುಕೊಂಡೆನು.” ಇದು ಯೆಹೋವನಿಂದ ಬಂದ ಮಾತು. “ಅವರು ನನ್ನ ಜನರಾಗುವರು ಎಂದುಕೊಂಡು ನಾನು ಹಾಗೆ ಮಾಡಿದೆ. ನನ್ನ ಜನರು ನನಗೆ ಕೀರ್ತಿ, ಸ್ತುತಿ, ಗೌರವ ತರುವರೆಂದು ತಿಳಿದಿದ್ದೆ. ಆದರೆ ನನ್ನ ಜನರು ನನ್ನ ಮಾತನ್ನು ಕೇಳದೆಹೋದರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾವ ಪ್ರಕಾರ ಇದು ಮನುಷ್ಯನ ನಡುವಿಗೆ ಹತ್ತಿಕೊಳ್ಳುವುದೋ, ಅದೇ ಪ್ರಕಾರ ನಾನು ಇಸ್ರಾಯೇಲಿನ ಮನೆತನವನ್ನೆಲ್ಲವನ್ನೂ, ಯೆಹೂದದ ಮನೆತನವನ್ನೆಲ್ಲವನ್ನೂ ನನಗೆ ಜನರೂ ಹೆಸರೂ ಸ್ತೋತ್ರವೂ ಮಹಿಮೆಯೂ ಆಗುವ ಹಾಗೆ ನನಗೆ ಹತ್ತಿಕೊಳ್ಳುವಂತೆ ಮಾಡಿದೆನು, ಆದರೆ ಅವರು ಕೇಳದೇ ಹೋದರು ಎಂದು ಯೆಹೋವ ದೇವರ ಅನ್ನುತ್ತಾರೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:11
25 ತಿಳಿವುಗಳ ಹೋಲಿಕೆ  

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖ ಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ, ಮಹಿಮೆಯೂ ಮತ್ತು ಆನಂದದ ಬಿರುದು ಆಗುವುದು.’”


ನನ್ನ ಸ್ತೋತ್ರವನ್ನು ಪ್ರಚುರಪಡಿಸಲಿ ಎಂದು ನಾನು ಈ ಜನರನ್ನು ಸೃಷ್ಟಿಸಿಕೊಂಡಿದ್ದೇನೆ.


ಆದರೆ ನನ್ನ ಜನರು ನನ್ನ ಮಾತು ಕೇಳಲಿಲ್ಲ; ಇಸ್ರಾಯೇಲರು ನನಗೆ ಸಮ್ಮತಿಸಲಿಲ್ಲ.


ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ.


ನೀನು ಐಗುಪ್ತದೇಶದಲ್ಲಿ ಮಹತ್ಕಾರ್ಯಗಳನ್ನೂ, ಅದ್ಭುತಗಳನ್ನೂ ನಡೆಸಿ ಈ ದಿನದವರೆಗೆ ಇಸ್ರಾಯೇಲರಲ್ಲಿಯೂ ಮತ್ತು ಇತರ ಜನರಲ್ಲಿಯೂ ಅವುಗಳನ್ನು ಮಾಡುತ್ತಾ ಬಂದು ಹೆಸರನ್ನು ಪಡೆದುಕೊಂಡಿದ್ದಿ.


ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪೂರ್ವಿಕರಿಗಿಂತಲೂ ಕೆಟ್ಟವರಾಗಿ ನಡೆದರು.


‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.


ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು.


ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ!


ಯೆಹೋವನು ಯಾಕೋಬನ ವಂಶದವರನ್ನು ತನಗಾಗಿಯೂ, ಇಸ್ರಾಯೇಲರನ್ನು ಸ್ವಕೀಯ ಜನರನ್ನಾಗಿಯೂ ಆರಿಸಿಕೊಂಡನಲ್ಲಾ.


ಯೆಹೋವನೋ ನಿಮ್ಮ ವಿಷಯದಲ್ಲಿ, “ಇವರು ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸುವ ಪಕ್ಷಕ್ಕೆ ನನ್ನ ವಾಗ್ದಾನಕ್ಕೆ ಅನುಸಾರವಾಗಿ ನನಗೆ


ನಾವು ನಮ್ಮ ದೇವರಾದ ಯೆಹೋವನಿಗೆ ಮೊರೆಯಿಡುವಾಗೆಲ್ಲಾ ಆತನು ಸಮೀಪವಾಗಿಯೇ ಇದ್ದಾನಲ್ಲಾ; ಬೇರೆ ಎಷ್ಟು ದೊಡ್ಡ ಜನಾಂಗಕ್ಕಾದರೂ ಯಾವ ದೇವರು ಹೀಗೆ ಸಮೀಪವಾಗಿರುವನು?


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.


ನಾನು ಸಾವಕಾಶ ಮಾಡದೆ ನಿಮಗೆ ನುಡಿದ ಮಾತುಗಳನ್ನು ನೀವು ಕೇಳದೆ, ನಿಮ್ಮನ್ನು ಕರೆದ ನನಗೆ ಉತ್ತರ ಕೊಡದೆ ಈ ಕೃತ್ಯಗಳನ್ನೆಲ್ಲಾ ನಡೆಸಿದಿರಿ.


ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.


ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.


“ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು.


ಇಸ್ರಾಯೇಲರೇ ಯೆಹೋವನು ನಿಮಗೆ ವಿರುದ್ಧವಾಗಿ, ತಾನು ಐಗುಪ್ತ ದೇಶದೊಳಗಿಂದ ಪಾರು ಮಾಡಿದ ಪೂರ್ಣಕುಲಕ್ಕೆ ವಿರುದ್ಧವಾಗಿ ನುಡಿದಿರುವ ಈ ಮಾತನ್ನು ಕೇಳಿರಿ,


ಸ್ವಕೀಯಜನರಾಗಿ ಇರುವರೆಂದೂ, ನಾನು ನಿರ್ಮಿಸಿದ ಬೇರೆ ಎಲ್ಲಾ ಜನಾಂಗಗಳಿಗಿಂತಲೂ ಇವರಿಗೆ ಹೆಚ್ಚಾದ ಕೀರ್ತಿ ಮತ್ತು ಘನಮಾನಗಳನ್ನು ಉಂಟುಮಾಡುವೆನೆಂದೂ ಇವರು ನನ್ನ ಮಾತಿನ ಮೇರೆಗೆ ತಮ್ಮ ದೇವರಾದ ಯೆಹೋವನಿಗೋಸ್ಕರ ಮೀಸಲಾದ ಜನರಾಗುವರು” ಎಂದು ಒಪ್ಪಿಕೊಂಡಿದ್ದಾನೆ.


“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ಈ ಪಟ್ಟಣದವರೂ ಮತ್ತು ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನೂ ಕೇಳದೆ, ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ, ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು” ಎಂದು ಸಮಸ್ತ ಜನರಿಗೆ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು