Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಯೆರೆಮೀಯನೇ, ನೀನು ಅವರಿಗೆ ಹೀಗೆಂದು ಸಾರು : ಇಸ್ರಯೇಲಿನ ದೇವರಾದ ಸರ್ವೇಶ್ವರ ಸ್ವಾಮಿಯ ಸಂದೇಶವನ್ನು ಕೇಳಿ - ‘ಪ್ರತಿಯೊಂದು ಕುಡಿಕೆಯು ದ್ರಾಕ್ಷಾರಸದಿಂದ ತುಂಬಿರುವುದು.’ ಆಗ ಅವರು ನಿನಗೆ - ‘ಪ್ರತಿಯೊಂದು ಕುಡಿಕೆ ದ್ರಾಕ್ಷಾರಸದಿಂದ ತುಂಬಿರುವುದು ಎಂಬುದು ನಮಗೆ ಗೊತ್ತಿಲ್ಲವೆ?’ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವದು ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ - ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವದು ನಮಗೆ ಗೊತ್ತಿಲ್ಲವೋ ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಯೆರೆಮೀಯನೇ, ಯೆಹೂದದ ಜನರಿಗೆ, ‘ಇಸ್ರೇಲಿನ ದೇವರಾದ ಯೆಹೋವನು ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕು ಎಂದು ಹೇಳುತ್ತಾನೆ’ ಎಂದು ಹೇಳು. ಆಗ ಆ ಜನರು ನಕ್ಕು, ‘ಪ್ರತಿಯೊಂದು ಚರ್ಮದ ಬುದ್ದಲಿಯು ದ್ರಾಕ್ಷಾರಸದಿಂದ ತುಂಬಿರಬೇಕೆಂಬುದು ನಮಗೆ ಚೆನ್ನಾಗಿ ಗೊತ್ತು’ ಎಂದು ನಿನಗೆ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಆದ್ದರಿಂದ ನೀನು ಅವರಿಗೆ ಈ ಮಾತನ್ನು ಹೇಳಬೇಕು: ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವು. ಆಗ ಅವರು ನಿನಗೆ ಗಡಿಗೆಗಳೆಲ್ಲಾ ದ್ರಾಕ್ಷಾರಸದಿಂದ ತುಂಬಿರುವುವೆಂದು ನಮಗೆ ಚೆನ್ನಾಗಿ ತಿಳಿಯಿತಲ್ಲವೋ,’ ಎಂದು ನಿನಗೆ ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:12
4 ತಿಳಿವುಗಳ ಹೋಲಿಕೆ  

ಆಗ ಜನರು, “ನೀನು ಹೀಗೆ ಮಾಡುವುದರಿಂದ ಪ್ರಯೋಜನವೇನೆಂದು ತಿಳಿಸುವುದಿಲ್ಲವೇ?” ಎಂದು ನನ್ನನ್ನು ಕೇಳಲು,


ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ.


ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,


ನಾನು ಅವರಲ್ಲಿಗೆ ಖಡ್ಗವನ್ನು ಕಳುಹಿಸುವೆನು. ಆ ನನ್ನ ರೋಷವನ್ನು ಅವರು ಕುಡಿದು ಓಲಾಡುವರು, ಹುಚ್ಚುಚ್ಚಾಗುವರು” ಎಂದು ಅಪ್ಪಣೆಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು