ಯೆರೆಮೀಯ 13:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು; ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೂದದ ಜನರು ಎಡವಿ, ಒಬ್ಬರಮೇಲೊಬ್ಬರು ಬೀಳುವಂತೆ ನಾನು ಮಾಡುವೆನು. ತಂದೆ ಮತ್ತು ಮಕ್ಕಳು ಒಬ್ಬರಮೇಲೊಬ್ಬರು ಬೀಳುವರು.’” ಇದು ಯೆಹೋವನ ನುಡಿ. “‘ನಾನು ಅವರಿಗಾಗಿ ಕನಿಕರಪಡುವದಿಲ್ಲ ಅಥವಾ ಕರುಣೆ ತೋರಿಸುವದಿಲ್ಲ. ಯೆಹೂದದ ಜನರ ವಿನಾಶವನ್ನು ಕರುಣೆಯು ತಡೆಯದಂತೆ ನೋಡಿಕೊಳ್ಳುತ್ತೇನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು ಹಾಗೂ ನಾಶಮಾಡದೆ ಬಿಡೆನು,’ ಇದು ಯೆಹೋವ ದೇವರಾದ ನನ್ನ ನುಡಿ.” ಅಧ್ಯಾಯವನ್ನು ನೋಡಿ |