Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ದಕ್ಷಿಣ ಯೆಹೂದ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ದಕ್ಷಿಣ ನಾಡಿನ ನಗರಗಳು ಮುತ್ತಿಗೆಗೆ ತುತ್ತಾಗಿವೆ. ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಜುದೇಯವೆಲ್ಲ ಸೆರೆಹೋಗಿದೆ; ಸಂಪೂರ್ಣವಾಗಿ ಸೆರೆಯಾಗಿದೆ’.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ದಕ್ಷಿಣದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೆಗೆವ್ ಮರುಭೂಮಿಯ ಎಲ್ಲಾ ನಗರಗಳಿಗೆ ಬೀಗ ಹಾಕಲಾಗಿದೆ. ಅವುಗಳನ್ನು ತೆರೆಯುವುದು ಯಾರಿಂದಲೂ ಸಾಧ್ಯವಿಲ್ಲ. ಯೆಹೂದದ ಎಲ್ಲಾ ಜನರು ಸೆರೆ ಒಯ್ಯಲ್ಪಟ್ಟಿದ್ದಾರೆ. ಅವರೆಲ್ಲರನ್ನು ಸೆರೆಯಾಳುಗಳಾಗಿ ತೆಗೆದುಕೊಂಡು ಹೋಗಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದಕ್ಷಿಣ ದೇಶದ ಪಟ್ಟಣಗಳು ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ. ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:19
21 ತಿಳಿವುಗಳ ಹೋಲಿಕೆ  

ಬಾಬೆಲಿನ ಅರಸನು ಇವರನ್ನು ಅಲ್ಲಿಯೇ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟುಹೋಗಬೇಕಾಯಿತು.


ನೆಬೂಕದ್ನೆಚ್ಚರನ ಆಳ್ವಿಕೆಯ ಇಪ್ಪತ್ತ ಮೂರನೆಯ ವರ್ಷದಲ್ಲಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಏಳು ನೂರ ನಲ್ವತ್ತೈದು ಯೆಹೂದ್ಯರನ್ನು ಸೆರೆಯೊಯ್ದನು; ಸೆರೆಯಾದವರು ಒಟ್ಟಾಗಿ ನಾಲ್ಕು ಸಾವಿರದ ಆರುನೂರು ಜನ.


ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.


ಬಾಬೆಲಿನ ಅರಸನು ಹಮಾತ್ ಪ್ರದೇಶದ ಅವರನ್ನು ಕತ್ತಿಯಿಂದ ರಿಬ್ಲದಲ್ಲಿ ಕೊಲ್ಲಿಸಿದನು. ಹೀಗೆ ಯೆಹೂದ್ಯರು ಸೆರೆಯವರಾಗಿ ತಮ್ಮ ದೇಶವನ್ನು ಬಿಟ್ಟು ಹೋಗಬೇಕಾಯಿತು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣ ಪ್ರಾಂತ್ಯದ ಊರುಗಳು, ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಹಿಂಡುಗಳು ಎಣಿಸುವವನ ಕೈಗೆ ಲೆಕ್ಕವಾಗುವಂತೆ ಮತ್ತೆ ಹಾದುಹೋಗುವವು. ಇದು ಯೆಹೋವನ ನುಡಿ” ಎಂಬುದೇ.


ಏಕೆಂದರೆ, ಇಗೋ, ನಾನು ನಿನ್ನನ್ನು ನಿನಗೂ ಮತ್ತು ನಿನ್ನ ಎಲ್ಲಾ ಸ್ನೇಹಿತರಿಗೂ ದಿಗಿಲಿಗಿ ಆಸ್ಪದನನ್ನಾಗಿ ಮಾಡುವೆನು; ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು, ನೀನು ಅದನ್ನು ಕಣ್ಣಾರೆ ಕಾಣುವಿ. ನಾನು ಯೆಹೂದ್ಯರನ್ನೆಲ್ಲಾ ಬಾಬೆಲಿನ ಅರಸನ ಕೈಗೆ ಒಪ್ಪಿಸುವೆನು; ಅವನು ಅವರನ್ನು ಬಾಬಿಲೋನಿಗೆ ಸೆರೆಯಾಗಿ ಒಯ್ದು ಕತ್ತಿಯಿಂದ ಕಡಿಯುವನು.


ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.


ಇಗೋ, ಯಾರೂ ಕಟ್ಟದ ಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ತರುವಾಯ ಅವರು ಏಳು ಪಾಲುಗಳನ್ನು ಮಾಡಿ ತಮ್ಮತಮ್ಮೊಳಗೆ ಹಂಚಿಕೊಳ್ಳಲಿ. ದಕ್ಷಿಣದಲ್ಲಿ ಯೆಹೂದ ಕುಲದವರಿಗೂ ಉತ್ತರದಲ್ಲಿ ಯೋಸೇಫನ ಕುಲದವರಿಗೂ ಸ್ವತ್ತು ಸಿಕ್ಕುತ್ತದೆ. ಅದು ಅವರಿಗೇ ಇರಲಿ.


ಆದರೆ ನೀವು ನಿಮ್ಮ ದೇವರಾದ ಯೆಹೋವನ ಮಾತಿಗೆ ಕಿವಿಗೊಡದೆ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞಾವಿಧಿಗಳನ್ನು ಅನುಸರಿಸದೆ ಹೋದರೆ ಈ ಶಾಪಗಳು ನಿಮಗೆ ಪ್ರಾಪ್ತವಾಗುವವು:


ಬೆನ್ಯಾಮೀನ್ ಸೀಮೆ, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಯೆಹೂದದ ಊರುಗಳು, ಬೆಟ್ಟದ ಊರುಗಳು, ಇಳಕಲಿನ ಊರುಗಳು, ದಕ್ಷಿಣಪ್ರಾಂತ್ಯದ ಊರುಗಳು, ಈ ಎಲ್ಲಾ ಸ್ಥಳಗಳಲ್ಲಿ ಜನರು ಹೊಲ ಗದ್ದೆಗಳಿಗೆ ಕ್ರಯಕೊಟ್ಟು, ಪತ್ರಕ್ಕೆ ಸಹಿಹಾಕಿ ಮುಚ್ಚಿ, ಸಾಕ್ಷಿಗಳನ್ನು ಹಾಕಿಸಿ ಕೊಂಡುಕೊಳ್ಳುವರು; ನಾನು ನನ್ನ ಜನರ ಗುಲಾಮಗಿರಿಯ ದುರವಸ್ಥೆಯನ್ನು ತಪ್ಪಿಸಿ ಬರಮಾಡುವೆನು.” ಇದು ಯೆಹೋವನ ನುಡಿ.


ಯೆಹೂದವೆಂಬಾಕೆಯು ಘೋರವಾದ ಸೇವೆ ಮತ್ತು ಶ್ರಮೆಗಳಿಂದ ತಪ್ಪಿಸಿಕೊಳ್ಳಬೇಕೆಂದು ವಲಸೆಹೋಗಿದ್ದಾಳೆ; ಮ್ಲೇಚ್ಛರ ಮಧ್ಯದಲ್ಲಿ ನೆಮ್ಮದಿಯಿಲ್ಲದೆ ವಾಸಮಾಡುತ್ತಿದ್ದಾಳೆ; ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”


ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.


ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ, ಯೆಹೂದದ ಪ್ರಧಾನರನ್ನೂ, ಶಿಲ್ಪಿಗಳನ್ನೂ ಮತ್ತು ಕಮ್ಮಾರರನ್ನೂ ಯೆರೂಸಲೇಮಿನಿಂದ ಬಾಬಿಲೋನಿಗೆ ಸೆರೆ ಒಯ್ದ ಮೇಲೆ ಯೆಹೋವನ ಆಲಯದ ಮುಂದೆ ಇಟ್ಟಿರುವ ಅಂಜೂರದ ಹಣ್ಣು ತುಂಬಿದ ಎರಡು ಪುಟ್ಟಿಗಳನ್ನು ಯೆಹೋವನು ನನಗೆ ತೋರಿಸಿದನು.


“‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’”


ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು