ಯೆರೆಮೀಯ 13:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇವು ನನಗೆ ಏಕೆ ಸಂಭವಿಸಿದವು ಎಂದು ನೀನು ಮನದೊಳಗೆ ಅಂದುಕೊಂಡರೆ ನಿನ್ನ ನೆರಿಗೆಯು ಕೀಳಲ್ಪಟ್ಟು ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 “ಇಂಥ ಕೇಡು ನನಗೆ ಏಕೆ ಉಂಟಾಯಿತು?” ಎಂದು ನಿನ್ನನ್ನು ನೀನೇ ಕೇಳಿಕೊಳ್ಳಬಹುದು. ನೀನು ಮಾಡಿದ ಅನೇಕ ಪಾಪಗಳ ಫಲದಿಂದಲೇ ಆಯಿತು. ನಿನ್ನ ಪಾಪಗಳ ಫಲವಾಗಿ ನಿನ್ನ ಲಂಗವನ್ನು ಹರಿಯಲಾಯಿತು. ನಿನ್ನ ಪಾದರಕ್ಷೆಯನ್ನು ಕಿತ್ತುಕೊಳ್ಳಲಾಯಿತು. ನಿನ್ನನ್ನು ಕಂಗೆಡಿಸುವದಕ್ಕಾಗಿ ಅವರು ಹೀಗೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಒಂದು ವೇಳೆ, “ಇವು ನನಗೆ ಏಕೆ ಸಂಭವಿಸಿದವು?” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ನೆರಿಗೆಯು ಕೀಳಲಾಗುವುದು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿ |