Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಎಥಿಯೋಪಿಯದವನು ತನ್ನ ಚರ್ಮದ ಬಣ್ಣವನ್ನು ಮಾರ್ಪಡಿಸಬಲ್ಲನೆ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೆ? ಅಂತೆಯೇ ದುಷ್ಟತನದಲ್ಲಿ ಅಷ್ಟಾಗಿ ನುರಿತ ನೀನು ಶಿಷ್ಟತನದಲ್ಲಿ ನಡೆಯಲಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸೀತೇ? ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಕಪ್ಪಗಿರುವವನು ತನ್ನ ಚರ್ಮದ ಬಣ್ಣವನ್ನು ಬದಲಿಸಲಾರನು. ಚಿರತೆಯು ತನ್ನ ಮೈಮೇಲಿನ ಚುಕ್ಕೆಗಳನ್ನು ಬದಲಾಯಿಸಲಾರದು. ಅದೇ ರೀತಿ, ಜೆರುಸಲೇಮ್ ನಗರವೇ, ನೀನು ಸಹ ಮಾರ್ಪಾಟು ಹೊಂದಿ ಒಳ್ಳೆಯದನ್ನು ಮಾಡಲಾರೆ. ನೀನು ಯಾವಾಗಲೂ ಕೆಟ್ಟದ್ದನ್ನೇ ಮಾಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಕೂಷ್ಯನು ತನ್ನ ಚರ್ಮವನ್ನೂ, ಚಿರತೆಯು ತನ್ನ ಮಚ್ಚೆಯನ್ನೂ ಮಾರ್ಪಡಿಸುವುದಕ್ಕಾಗುವುದೋ? ಹಾಗಾದರೆ ಕೆಟ್ಟತನದ ಅಭ್ಯಾಸವುಳ್ಳವರಾದ ನೀವೂ ಸಹ ಒಳ್ಳೆಯದನ್ನು ಮಾಡುವುದಕ್ಕಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:23
13 ತಿಳಿವುಗಳ ಹೋಲಿಕೆ  

ನೀನು ಬಹಳ ಸೌಳನ್ನು ಹಾಕಿಕೊಂಡು ಸಾಬೂನಿನಿಂದ ತೊಳೆದುಕೊಂಡರೂ ಶುದ್ಧವಾಗದೆ, ನಿನ್ನ ಅಧರ್ಮವು ನನ್ನ ಕಣ್ಣೆದುರಿಗೆ ಕೊಳಕಾಗಿ ನಿಂತಿದೆ” ಎಂದು ಕರ್ತನಾದ ಯೆಹೋವನು ನುಡಿಯುತ್ತಾನೆ.


ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವುದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ. ತಮಗೆ ಆಯಾಸವಾಗುವ ಮಟ್ಟಿಗೆ ಕೆಡುಕನ್ನು ಮಾಡುತ್ತಿದ್ದಾರೆ.


ಹೃದಯವು ಎಲ್ಲಾದಕ್ಕಿಂತಲೂ ವಂಚಕ; ಗುಣವಾಗದ ರೋಗಕ್ಕೆ ಒಳಗಾಗಿದೆ; ಅದನ್ನು ತಿಳಿದವರು ಯಾರು?


ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”


ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ, ಮೂರ್ಖತನವು ಅವನಿಂದ ತೊಲಗದು.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.


ಸೌಲನಿಗೆ ಈ ವರ್ತಮಾನವು ಮುಟ್ಟಿದಾಗ ಅವನು ಬೇರೆ ಆಳುಗಳನ್ನು ಕಳುಹಿಸಿದನು. ಇವರೂ ಪ್ರವಾದಿಸಿದರು. ಅವನು ಮೂರನೆಯ ಸಾರಿ ಇನ್ನೂ ಕೆಲವು ಮಂದಿ ಆಳುಗಳನ್ನು ಕಳುಹಿಸಿದನು. ಅವರೂ ಪ್ರವಾದಿಸಿದರು.


ಅವರು ಅದನ್ನು ಲಕ್ಷ್ಯಕ್ಕೆ ತಂದುಕೊಳ್ಳದೆ ತಮ್ಮ ಹಿಂದಿನ ಪದ್ಧತಿಗಳನ್ನೇ ಅನುಸರಿಸಿದರು.


ವಕ್ರವಾದದ್ದನ್ನು ಸರಿಮಾಡುವುದಕ್ಕೆ ಆಗುವುದಿಲ್ಲ! ಇಲ್ಲದ್ದನ್ನು ಲೆಕ್ಕಿಸುವುದಕ್ಕೆ ಅಸಾಧ್ಯ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು