Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 13:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ಕೆಟ್ಟ ಸೂಳೆಗಾರಿಕೆಯನ್ನು, ಅಂತು ಗುಡ್ಡಗಳಲ್ಲಿಯೂ ಬೈಲಿನಲ್ಲಿಯೂ ನೀನು ನಡಿಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನೀನು ಮಾಡಿದ ಭಯಾನಕ ಕೃತ್ಯಗಳನ್ನು ನಾನು ನೋಡಿದ್ದೇನೆ. ನಿನ್ನ ಪ್ರಿಯತಮರ ಜೊತೆಗೆ ನಗುವದನ್ನೂ ಕಾಮದಾಟವಾಡುವದನ್ನೂ ನಾನು ನೋಡಿದ್ದೇನೆ. ನೀನು ವೇಶ್ಯೆಯಂತೆ ನಡೆದುಕೊಳ್ಳಬೇಕೆಂದು ಯೋಚನೆ ಮಾಡಿದ್ದು ನನಗೆ ಗೊತ್ತು. ನೀನು ಹೊಲಗಳಲ್ಲಿಯೂ ಬೆಟ್ಟಗಳಲ್ಲಿಯೂ ಮಾಡಿದ ಅಸಹ್ಯಕೃತ್ಯಗಳನ್ನು ನಾನು ನೋಡಿದ್ದೇನೆ. ಜೆರುಸಲೇಮೇ, ಇದರಿಂದ ನಿನಗೆ ತುಂಬಾ ಕೇಡಾಗುವದು. ನೀನು ಎಷ್ಟು ದಿನ ಹೀಗೆಯೇ ನಿನ್ನ ಪಾಪಕೃತ್ಯಗಳನ್ನು ಮುಂದುವರಿಸುವೆ ಎಂದು ನಾನು ಯೋಚಿಸುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ನಿನ್ನ ಕೀಳಾದ ವೇಶ್ಯತನವನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯ ಕಾರ್ಯಗಳನ್ನು ಕಂಡಿದ್ದೇನೆ. ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ಇನ್ನೆಷ್ಟು ಕಾಲ ನೀನು ಅಶುದ್ಧಳಾಗಿರುವೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 13:27
32 ತಿಳಿವುಗಳ ಹೋಲಿಕೆ  

ಸಮಾರ್ಯವೇ, ನಾನು ನಿನ್ನ ಬಸವನನ್ನು ತಳ್ಳಿಬಿಟ್ಟಿದ್ದೇನೆ; ನನ್ನ ರೋಷಾಗ್ನಿಯು ನಿನ್ನವರ ಮೇಲೆ ಉರಿಯುತ್ತದೆ; ಅವರು ನಿರ್ಮಲರಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುವುದೋ?


“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”


ಆ ವಂಶದವರು ಎತ್ತರವಾದ ಎಲ್ಲಾ ಗುಡ್ಡಗಳ ಮೇಲೂ, ಎಲ್ಲಾ ಬೆಟ್ಟಗಳ ತುದಿಗಳಲ್ಲಿಯೂ, ಸೊಂಪಾದ ಎಲ್ಲಾ ಮರಗಳ ಕೆಳಗೂ ತಮ್ಮ ಸಮಸ್ತ ವಿಗ್ರಹಗಳಿಗೆ ಸುಗಂಧಹೋಮ ಮಾಡುತ್ತಿದ್ದ ದಟ್ಟವಾದ ಎಲ್ಲಾ ಏಲಾ ಮರಗಳ ಕೆಳಗೂ ಹತರಾಗಿ ತಮ್ಮ ಯಜ್ಞವೇದಿಗಳ ಸುತ್ತಲೂ ತಮ್ಮ ವಿಗ್ರಹಗಳ ನಡುವೆ ಬಿದ್ದಿರುವಾಗ ನಾನೇ ಯೆಹೋವನು ಎಂದು ಗೊತ್ತಾಗುವುದು.


ಇವರೂ ಇವರ ಪೂರ್ವಿಕರೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ, ನನ್ನನ್ನು ಹೀನೈಸಿ ನಡೆಸಿದ ಅಪರಾಧ ಕಾರ್ಯದ ಫಲವನ್ನು ಅದರ ಅಳತೆಗೆ ಸರಿಯಾಗಿ ಇವರ ಮಡಿಲಿಗೆ ಸುರಿಯುವೆನು” ಎಂದು ಯೆಹೋವನು ಹೇಳುತ್ತಾನೆ.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಇನ್ನೊಂದು ವಿಷಯದಲ್ಲಿ ಇಸ್ರಾಯೇಲ್ ವಂಶದವರ ವಿಜ್ಞಾಪನೆಯನ್ನು ಲಾಲಿಸಿ ನೆರವೇರಿಸುವೆನು; ಅಂದರೆ ಅವರ ಜನಸಂಖ್ಯೆಯನ್ನು ಹಿಂಡಿನೋಪಾದಿಯಲ್ಲಿ ಹೆಚ್ಚಿಸುವೆನು.


“ಮೂಢರೇ, ಮೂಢತನವನ್ನು ಎಂದಿನ ತನಕ ಪ್ರೀತಿಸುವಿರಿ? ಧರ್ಮನಿಂದಕರು ನಿಂದಿಸುವುದಕ್ಕೆ ಎಷ್ಟುಕಾಲ ಇಷ್ಟಪಡುವರು? ಜ್ಞಾನಹೀನರು ತಿಳಿವಳಿಕೆಯನ್ನು ಎಷ್ಟರವರೆಗೆ ಹಗೆಮಾಡುವರು?


ಆ ಮೇಲೆ ನಾನು ನೋಡಲಾಗಿ ಇಗೋ ಒಂದು ಹದ್ದು ಆಕಾಶದ ಮಧ್ಯದಲ್ಲಿ ಹಾರಾಡುತ್ತಿತ್ತು, ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತ್ತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು” ಎಂದು ಮಹಾಶಬ್ದದಿಂದ ಕೂಗುವುದನ್ನು ಕೇಳಿಸಿಕೊಂಡೆನು.


ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.


ನಾನು ತಿರುಗಿ ಬಂದಾಗ ನನ್ನ ದೇವರು ನಿಮ್ಮ ವಿಷಯದಲ್ಲಿ ನನ್ನನ್ನು ತಗ್ಗಿಸಿಕೊಳ್ಳಲು ಗುರಿಮಾಡುವನೆಂತಲೂ, ಮೊದಲಿನಂತೆ ಪಾಪಮಾಡಿ, ಬಂಡುತನ ಹಾದರತನ, ಕೆಟ್ಟತನಗಳನ್ನು ನಡಿಸಿ ಪಶ್ಚಾತ್ತಾಪಡದಿರುವ ಅನೇಕರ ವಿಷಯವಾಗಿ ನಾನು ದುಃಖಪಡಬೇಕಾದೀತೆಂತಲೂ ನನಗೆ ಭಯವುಂಟು.


ಪ್ರಿಯರೇ, ಈ ವಾಗ್ದಾನಗಳು ನಮಗಿರುವುದರಿಂದ, ನಾವು ದೇಹಾತ್ಮಗಳ ಕಲ್ಮಷವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತೆಯ ಸಂಪೂರ್ಣತೆಗೆ ಪ್ರಯತ್ನಿಸೋಣ.


ಹೇಗೆಂದರೆ, “ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿನವರು ಎಂದೋ ಗೋಣಿತಟ್ಟು ಸುತ್ತಿಕೊಂಡು ಬೂದಿಯಲ್ಲಿ ಕುಳಿತುಕೊಂಡು ಮಾನಸಾಂತರಪಡುತ್ತಿದ್ದರು.


ಅಯ್ಯೋ, ಅವಿಧೇಯತೆ ಮಲಿನವೂ ಆದ ದಬ್ಬಾಳಿಕೆ ನಡೆಸುವ ನಗರದ ಗತಿಯನ್ನು ಏನು ಹೇಳಲಿ!


ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.


ಆಮೇಲೆ ನಾನು ನಿಮ್ಮ ಮೇಲೆ ಶುದ್ಧವಾದ ನೀರನ್ನು ಪ್ರೋಕ್ಷಿಸಲು ನೀವು ನಿರ್ಮಲರಾಗುವಿರಿ; ನಿಮ್ಮ ಸಮಸ್ತ ವಿಗ್ರಹಗಳಿಂದಲೂ, ಸಕಲ ವಿಧವಾದ ಹೊಲಸಿನಿಂದಲೂ ನಿಮ್ಮನ್ನು ಶುದ್ಧಿಮಾಡುವೆನು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ಆಹಾ, ರಕ್ತಮಯವಾದ ಪಟ್ಟಣವೇ ನಿನಗೆ ಧಿಕ್ಕಾರ, ಒಳಗೆ ಕಿಲುಬು ಹಿಡಿದಿರುವ, ಕಿಲುಬು ಬಿಟ್ಟುಹೋಗದಿರುವ ಹಂಡೆ! ಅದರಿಂದ ಮಾಂಸದ ತುಂಡುಗಳನ್ನು ಸಿಕ್ಕಿ ಸಿಕ್ಕಿದ ಹಾಗೆ ತೆಗೆದುಬಿಡು, ಅದಕ್ಕಾಗಿ ಚೀಟುಗಳನ್ನು ಹಾಕಬೇಡ.


ನಾನು ಪ್ರಮಾಣ ಪೂರ್ವಕವಾಗಿ ಅವರಿಗೆ ವಾಗ್ದಾನ ಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ, ನನ್ನನ್ನು ರೇಗಿಸುವ ನೈವೇದ್ಯವನ್ನರ್ಪಿಸಿ, ಸುಗಂಧ ಹೋಮಮಾಡಿ, ಪಾನದ್ರವ್ಯವನ್ನು ಸುರಿದು, ಬಲಿ ಅರ್ಪಿಸುತ್ತಿದ್ದರು.’


ಆತನು ಆ ಸುರುಳಿಯನ್ನು ನನ್ನೆದುರಿನಲ್ಲಿ ಬಿಚ್ಚಿದನು; ಅದರ ಎರಡು ಪಕ್ಕಗಳಲ್ಲಿಯೂ ಬರೆದಿತ್ತು; ಅದರಲ್ಲಿ ಬರೆದದ್ದು ಪ್ರಲಾಪ, ಗೋಳಾಟ, ಶೋಕ ಇವುಗಳೇ.


ಮಹೋನ್ನತ ಪರ್ವತದಲ್ಲಿ ನೀನು ಮಂಚವನ್ನು ಹಾಕಿಕೊಂಡಿದ್ದಿ, ಯಜ್ಞಮಾಡಲು ಆ ಬೆಟ್ಟವನ್ನೇರಿದ್ದಿ.


ಕೆಡುಕರೆಲ್ಲರು ಉಬ್ಬಿಕೊಂಡು, ಅಹಂಕಾರವನ್ನು ಕಕ್ಕುತ್ತಾರೆ.


ಅರಸನಾದ ಯೋಷೀಯನ ಕಾಲದಲ್ಲಿ ಯೆಹೋವನು ನನಗೆ ಹೀಗೆ ಹೇಳಿದನು, “ಭ್ರಷ್ಟಳಾದ ಇಸ್ರಾಯೇಲ್ ಮಾಡಿದ್ದನ್ನು ನೋಡಿದೆಯಾ? ಅವಳು ಎತ್ತರವಾದ ಎಲ್ಲಾ ಗುಡ್ಡಗಳನ್ನು ಹತ್ತಿ, ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳ ಕೆಳಗೆ ಹೋಗಿ ವ್ಯಭಿಚಾರಿಯಾಗಿ ನಡೆದಳಷ್ಟೆ.


ಪಶುಪ್ರಾಯರಾದ ಪ್ರಜೆಗಳಿರಾ, ಲಕ್ಷಿಸಿರಿ; ಮೂರ್ಖರೇ, ನಿಮಗೆ ಬುದ್ಧಿಬರುವುದು ಯಾವಾಗ?


ನನ್ನ ಆಪ್ತಜನವು ನನ್ನ ಮನೆಯಲ್ಲಿ ಅಸಹ್ಯ ಕಾರ್ಯವನ್ನು ಮಾಡಿದ್ದೇಕೆ? ವ್ರತಗಳೂ, ಮೀಸಲಿನ ಮಾಂಸವೂ ನಿನ್ನ ದುಷ್ಟತನವನ್ನು ಪರಿಹರಿಸುವುದೋ? ಇಂಥವುಗಳ ಮೂಲಕ ತಪ್ಪಿಸಿಕೊಂಡೆಯಾ?


ಅಯ್ಯೋ, ನಿನ್ನ ಗತಿಯನ್ನು ಏನು ಹೇಳಲಿ!” ಎಂಬುದು ಕರ್ತನಾದ ಯೆಹೋವನ ನುಡಿ.


ಅದರ ಕಲ್ಮಷವು ನನ್ನಲ್ಲಿ ಕೇವಲ ಪ್ರಯಾಸವನ್ನೂ, ಆಯಾಸವನ್ನೂ ಉಂಟುಮಾಡಿದೆ; ಆದರೂ ಅದಕ್ಕೆ ಹತ್ತಿದ ಕಿಲುಬು ಹೋಗಲಿಲ್ಲ, ಬೆಂಕಿಯಿಂದಲೂ ನೀಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು