ಯೆರೆಮೀಯ 14:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು. ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಇವರು ಉಪವಾಸ ಕೈಗೊಂಡರೂ ಇವರ ಮೊರೆಯನ್ನು ನಾನು ಕೇಳುವುದಿಲ್ಲ. ದಹನಬಲಿಗಳನ್ನೂ ಧಾನ್ಯನೈವೇದ್ಯಗಳನ್ನೂ ಅರ್ಪಿಸಿದರೂ ಸ್ವೀಕರಿಸುವುದಿಲ್ಲ. ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಇವರನ್ನು ಮುಗಿಸಿಬಿಡುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಇವರು ಉಪವಾಸ ಮಾಡುವಾಗ ಇವರ ಮೊರೆಯನ್ನು ಕೇಳೆನು; ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು; ಖಡ್ಗ ಕ್ಷಾಮ ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೂದದ ಜನರು ಉಪವಾಸ ವ್ರತವನ್ನು ಕೈಕೊಳ್ಳಬಹುದು ಮತ್ತು ನನಗೆ ಪ್ರಾರ್ಥನೆ ಮಾಡಬಹುದು. ಆದರೆ ನಾನು ಅವರ ಪ್ರಾರ್ಥನೆಗಳನ್ನು ಕೇಳುವದಿಲ್ಲ. ಅವರು ನನಗೆ ಸರ್ವಾಂಗಹೋಮಗಳನ್ನು ಮತ್ತು ಧಾನ್ಯನೈವೇದ್ಯಗಳನ್ನು ಅರ್ಪಿಸಿದರೂ ಸಹ ನಾನು ಅವರನ್ನು ಸ್ವಿಕರಿಸುವದಿಲ್ಲ. ನಾನು ಯುದ್ಧದಿಂದ ಯೆಹೂದದ ಜನರನ್ನು ನಾಶಮಾಡುತ್ತೇನೆ. ನಾನು ಅವರ ಆಹಾರವನ್ನು ಕಿತ್ತುಕೊಳ್ಳುತ್ತೇನೆ; ಯೆಹೂದದ ಜನರು ಉಪವಾಸದಿಂದ ಸಾಯುವಂತೆ ಮಾಡುತ್ತೇನೆ. ನಾನು ಅವರನ್ನು ಭಯಂಕರವಾದ ವ್ಯಾಧಿಗಳಿಂದ ನಾಶಮಾಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅವರು ಉಪವಾಸ ಮಾಡಿದರೂ, ನಾನು ಅವರ ಮೊರೆಯನ್ನು ಕೇಳುವುದಿಲ್ಲ. ಅವರು ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವರನ್ನು ಅಂಗೀಕರಿಸುವುದಿಲ್ಲ. ಆದರೆ ನಾನು ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಅವರನ್ನು ನಿರ್ಮೂಲ ಮಾಡಿಬಿಡುತ್ತೇನೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |