ಯೆರೆಮೀಯ 14:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’” ಎಂಬುದಾಗಿ ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ಈ ಜನರಿಗೆ, ‘ಖಡ್ಗ ನಿಮ್ಮ ಕಣ್ಣಿಗೂ ಕಾಣಿಸದು, ಕ್ಷಾಮ ನಿಮಗೆಂದಿಗೂ ಬಂದೊದಗದು. ಸರ್ವೇಶ್ವರ ಈ ನಾಡಿನಲ್ಲೆ ನಿಮಗೆ ಚಿರಶಾಂತಿ ಸಮಾಧಾನವನ್ನು ಕೊಡುವರು’ ಎಂದು ಪ್ರವಾದಿಗಳೇ ನುಡಿಯುತ್ತಿದ್ದಾರೆ,” ಎಂದು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ - ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ಸ್ಥಿರಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ ಎಂಬದಾಗಿ ಹೇಳಿದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆಗ ನಾನು ಯೆಹೋವನಿಗೆ, “ನನ್ನ ಒಡೆಯನಾದ ಯೆಹೋವನೇ, ಪ್ರವಾದಿಗಳು ಜನರಿಗೆ ಬೇರೆಯದನ್ನೇ ಹೇಳಿದರು. ಅವರು ಯೆಹೂದದ ಜನರಿಗೆ, ‘ನೀವು ಶತ್ರುವಿನ ಖಡ್ಗಕ್ಕೆ ತುತ್ತಾಗುವದಿಲ್ಲ. ನೀವೆಂದಿಗೂ ಹಸಿವಿನಿಂದ ಬಳಲುವದಿಲ್ಲ, ಯೆಹೋವನು ಈ ದೇಶದಲ್ಲಿ ನಿಮಗೆ ನೆಮ್ಮದಿಯನ್ನು ದಯಪಾಲಿಸುವನು’ ಎಂದು ಹೇಳುತ್ತಿದ್ದರು” ಎಂದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ನಾನು, “ಹಾ, ಸಾರ್ವಭೌಮ ಯೆಹೋವ ದೇವರೇ, ಇಗೋ, ಪ್ರವಾದಿಗಳು ಅವರಿಗೆ: ‘ನೀವು ಖಡ್ಗವನ್ನು ನೋಡುವುದಿಲ್ಲ. ನಿಮಗೆ ಕ್ಷಾಮವು ಬಾರದು. ಆದರೆ ಯೆಹೋವ ದೇವರು ನಿಮಗೆ ಈ ಸ್ಥಳದಲ್ಲಿ ಸ್ಥಿರಸಮಾಧಾನ ಕೊಡುತ್ತಾರೆ,’ ಎಂದು ಹೇಳುತ್ತಾರೆ,” ಎಂದೆನು. ಅಧ್ಯಾಯವನ್ನು ನೋಡಿ |