ಯೆರೆಮೀಯ 14:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಗ ಯೆಹೋವನು ನನಗೆ ಹೀಗೆ ನುಡಿದನು - ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ; ಅವರು ಸುಳ್ಳಾದ ದಿವ್ಯದರ್ಶನವನ್ನೂ ಕಣಿಯನ್ನೂ ಮಾಯಾತಂತ್ರವನ್ನೂ ಸ್ವಕಲ್ಪಿತಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ಯೆಹೋವನು ನನಗೆ, “ಯೆರೆಮೀಯನೇ, ಆ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳುಬೋಧನೆ ಮಾಡುತ್ತಾರೆ. ನಾನು ಆ ಪ್ರವಾದಿಗಳನ್ನು ಕಳುಹಿಸಲಿಲ್ಲ. ಅವರಿಗೆ ನಾನು ಯಾವ ಅಪ್ಪಣೆಯನ್ನೂ ಕೊಟ್ಟಿಲ್ಲ, ಅವರೊಂದಿಗೆ ನಾನು ಮಾತನ್ನೂ ಆಡಿಲ್ಲ. ಆ ಪ್ರವಾದಿಗಳು ಸುಳ್ಳುದರ್ಶನಗಳನ್ನು ನಿಷ್ಪ್ರಯೋಜಕವಾದ ಮಾಟಮಂತ್ರಗಳನ್ನು ಸ್ವಕಲ್ಪಿತ ವಿಚಾರಗಳನ್ನೂ ಬೋಧಿಸುತ್ತಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳುಗಳನ್ನು ಪ್ರವಾದಿಸುತ್ತಾರೆ. ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಆಜ್ಞೆಕೊಡಲಿಲ್ಲ. ಅವರ ಸಂಗಡ ಮಾತಾಡಲಿಲ್ಲ. ಸುಳ್ಳಿನ ದರ್ಶನವನ್ನೂ, ಶಕುನವನ್ನೂ, ಮಾಯ ಮಂತ್ರವನ್ನೂ, ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಅಧ್ಯಾಯವನ್ನು ನೋಡಿ |