Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 14:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ಜುದೇಯ ನಾಡು ದುಃಖಿಸುತ್ತಿದೆ ಅದರ ಪುರದ್ವಾರಗಳು ಬಹಳ ಕಪ್ಪಾಗಿವೆ. ಜೆರುಸಲೇಮಿನವರ ಗೋಳಾಟ ಕೇಳಿಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೂದವು ದುಃಖಿಸುತ್ತದೆ, ಅದರ ಊರುಗಳವರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ, ಯೆರೂಸಲೇವಿುನವರ ಗೋಳಾಟವು ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಯೆಹೂದ ಜನಾಂಗವು ಸತ್ತುಹೋದವರಿಗಾಗಿ ಗೋಳಾಡುವುದು. ಯೆಹೂದದ ನಗರಗಳಲ್ಲಿದ್ದ ಜನರು ದಿನೇದಿನೇ ನಿಬರ್ಲರಾಗುತ್ತಾರೆ. ಆ ಜನರು ನೆಲದ ಮೇಲೆ ಬಿದ್ದು ಬಿಡುತ್ತಾರೆ. ಜೆರುಸಲೇಮ್ ನಗರದಿಂದ ಜನರು ಸಹಾಯಕ್ಕಾಗಿ ಯೆಹೋವನಿಗೆ ಮೊರೆಯಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ಯೆಹೂದವು ದುಃಖಪಡುತ್ತದೆ. ಅವಳ ನಗರಗಳು ಸೊರಗುತ್ತವೆ; ಅವರು ಭೂಮಿಗಾಗಿ ಗೋಳಾಡುತ್ತಾರೆ, ಯೆರೂಸಲೇಮಿನ ಕೂಗು ಏರಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 14:2
30 ತಿಳಿವುಗಳ ಹೋಲಿಕೆ  

ಅವಳ ಪುರದ್ವಾರಗಳಲ್ಲಿ ಪ್ರಲಾಪವೂ, ದುಃಖವೂ ತುಂಬಿರುವವು. ಅವಳು ಹಾಳಾಗಿ ನೆಲದ ಮೇಲೆ ಕುಳಿತುಕೊಳ್ಳುವಳು.


ನನ್ನ ಪ್ರಜೆಯೆಂಬಾಕೆಯ ವೇದನೆಯಿಂದ ನನಗೆ ಮನೋಯಾತನೆಯಾಯಿತು, ನಾನು ಶೋಕಿಸಿದೆನು, ಭಯವು ನನ್ನನ್ನು ಹಿಡಿದಿದೆ.


ಸಾಯದೆ ಉಳಿದ ಜನರಿಗೂ ಗಡ್ಡೆರೋಗ ಬಂದಿತ್ತು. ಪಟ್ಟಣದ ಗೋಳಾಟವು ಆಕಾಶವನ್ನು ಮುಟ್ಟಿತು.


“ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.


ಆದಕಾರಣ ಯೆಹೋವನೆಂಬ ನಾನು ಹೀಗೆನ್ನುತ್ತೇನೆ, ‘ಇಗೋ, ಅವರು ತಪ್ಪಿಸಿಕೊಳ್ಳಲಾರದ ಕೇಡನ್ನು ಅವರ ಮೇಲೆ ಬರಮಾಡುವೆನು; ನನಗೆ ಮೊರೆಯಿಟ್ಟರೂ ಕೇಳೆನು.


ಅವುಗಳ ದೆಸೆಯಿಂದ ರಾಷ್ಟ್ರಗಳಿಗೆ ಪ್ರಾಣ ಸಂಕಟ; ಎಲ್ಲರ ಮುಖಗಳು ಕಳೆಗುಂದುತ್ತವೆ.


ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.


ಹೀಗಿರಲು ದೇಶವು ನರಳುವುದು, ಅದರಲ್ಲಿ ವಾಸಿಸುವ ಸಕಲ ಭೂಜಂತುಗಳೂ ಮತ್ತು ಆಕಾಶದ ಪಕ್ಷಿಗಳೂ ಬಳಲಿ ಹೋಗುವವು; ಸಮುದ್ರದ ಮೀನುಗಳು ಸಹ ನಶಿಸಿ ಹೋಗುವವು.


ಕ್ಷಾಮಕಾಲದ ಭೀಕರ ಜ್ವರದಿಂದ ನಮ್ಮ ಚರ್ಮವು ಒಲೆಯಂತೆ ಸುಡುತ್ತದೆ.


ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ.


ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ. ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ.


ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲುಸೊಪ್ಪು ಒಣಗಿ ದೇಶವು ದುಃಖಿಸುತ್ತಿರುವುದು? ಅಲ್ಲಿನ ನಿವಾಸಿಗಳು ದುಷ್ಟರಾಗಿರುವುದರಿಂದ ಮೃಗ ಹಾಗು ಪಕ್ಷಿಗಳು ಬಡಿದುಕೊಂಡು ಹೋಗಿವೆ. “ಆಹಾ, ಅವನು ನಮ್ಮ ಅಂತ್ಯಗತಿಯನ್ನು ನೋಡುವುದೇ ಇಲ್ಲ” ಎಂದು ಹೇಳಿದ್ದಾರಷ್ಟೆ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವುದು, ಮೇಲೆ ಆಕಾಶವು ಕಪ್ಪಾಗುವುದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಇದರಿಂದ, ಹಿಂದೆಗೆಯನು” ಎಂದು ನುಡಿಯುತ್ತಾನೆ.


ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ.


ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ.


ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ.


ನನ್ನ ಹೃದಯವು ಮೋವಾಬಿನ ನಿಮಿತ್ತವಾಗಿ ಮೊರೆಯಿಡುತ್ತದೆ, ಅಲ್ಲಿಂದ ಪಲಾಯನವಾದವರು ಚೋಯರಿಗೂ, ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಧ್ವನಿಗೈಯುತ್ತಾರೆ.


ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, ಯೆಹೂದದ ಜನವೇ, ಆತನ ಇಷ್ಟದ ಗಿಡ. ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು.


ಹೀಗೆ ಬಡವರ ಗೋಳಾಟವು ದೇವರಿಗೆ ಮುಟ್ಟುವಂತೆ ಮಾಡಿದ್ದರು, ಆತನು ದಿಕ್ಕಿಲ್ಲದವರ ಮೊರೆಯನ್ನು ಆಲಿಸಿದನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನ್ ದೇಶದ ಒಬ್ಬನನ್ನು ನಿನ್ನ ಬಳಿಗೆ ಬರಮಾಡುವೆನು. ನೀನು ಅವನನ್ನು ಇಸ್ರಾಯೇಲರ ನಾಯಕನನ್ನಾಗಿ ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು. ಅವರ ಕೂಗು ನನಗೆ ಮುಟ್ಟಿತು; ಅವರನ್ನು ಕಟಾಕ್ಷಿಸಿದ್ದೇನೆ” ಎಂದು ತಿಳಿಸಿದ್ದನು.


ದೇವರು ಅವರ ನರಳಾಟವನ್ನು ಕೇಳಿ, ತಾನು ಅಬ್ರಹಾಮ, ಇಸಾಕ, ಯಾಕೋಬನ ಸಂಗಡ ಮಾಡಿದ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡನು.


ನಮ್ಮ ಪಶುಗಳು ಅಸಂಖ್ಯಾತವಾಗಲಿ, ವೈರಿಗಳು ಒಳಗೆ ನುಗ್ಗುವುದಾಗಲಿ, ನಮ್ಮವರನ್ನು ಸೆರೆ ಒಯ್ಯುವುದಾಗಲಿ ಇರುವುದಿಲ್ಲ, ಬೀದಿಗಳಲ್ಲಿ ಗೋಳಾಟವು ಕೇಳಿಸುವುದಿಲ್ಲ.


ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ.


ಹೌದು, ಹಾಳುಮಾಡಿದ್ದಾರೆ, ಅದು ಹಾಳಾಗಿ ನನಗೆ ಗೋಳಿಡುತ್ತದೆ; ಯಾರೂ ಗಮನಿಸದೆ ಇರುವುದರಿಂದ ದೇಶವೆಲ್ಲಾ ಹಾಳುಬಿದ್ದಿದೆ.


ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ; ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ.


ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.


ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.


ರೈತರೇ, ರೋದಿಸಿರಿ, ತೋಟಗಾರರೇ ಗೋಳಾಡಿರಿ, ಗೋದಿಯೂ ಮತ್ತು ಜವೆಗೋದಿಯೂ ಹಾಳಾಗಿವೆ. ಹೊಲದ ಬೆಳೆಯು ನಾಶವಾಗಿದೆ.


ಉಪವಾಸ ಪ್ರಾರ್ಥನೆಯ ದಿನವನ್ನು ಏರ್ಪಡಿಸಿರಿ, ಪವಿತ್ರ ಸಭೆಯನ್ನು ಸೇರಿಸಿರಿ. ಹಿರಿಯರನ್ನೂ ಮತ್ತು ಸಮಸ್ತ ದೇಶದ ನಿವಾಸಿಗಳನ್ನೂ ನಿಮ್ಮ ದೇವರಾದ ಯೆಹೋವನ ಆಲಯಕ್ಕೆ ಬರಮಾಡಿ, ಯೆಹೋವನಿಗೆ ಮೊರೆಯಿಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು