ಯೆರೆಮೀಯ 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇದಕ್ಕೆ ಯೆಹೋವನು, “ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ಶತ್ರುವನ್ನು ನಿನಗೆ ಶರಣಾಗತನನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸರ್ವೇಶ್ವರಾ, ನಾನು ನಿಮಗೆ ಶ್ರೇಷ್ಠವಾದ ಸೇವೆಸಲ್ಲಿಸದೆ ಹೋಗಿದ್ದರೆ, ನನ್ನ ಶತ್ರುಗಳು ಕಷ್ಟಸಂಕಟಗಳಲ್ಲಿ ಸಿಕ್ಕಿಬಿದ್ದ ಕಾಲದಲ್ಲಿ ಅವರ ಪರವಾಗಿ ನಿನಗೆ ಮೊರೆಯಿಡದೆ ಇದ್ದಿದ್ದರೆ ನನಗೆ ಶಾಪ ತಗುಲಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಇದಕ್ಕೆ ಯೆಹೋವನು - ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು, ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರೇ, ನಿಜವಾಗಿಯೂ ನಾನು ನಿನ್ನ ಸೇವೆಯನ್ನು ಚೆನ್ನಾಗಿ ಮಾಡಿದ್ದೇನೆ. ಕಷ್ಟದ ಕಾಲದಲ್ಲಿ ನನ್ನ ವೈರಿಗಳ ಬಗ್ಗೆ ನಾನು ನಿನ್ನಲ್ಲಿ ಪ್ರಾರ್ಥಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಇದಕ್ಕೆ ಯೆಹೋವ ದೇವರು, ನಿನಗೆ ಮೇಲಾಗುವಂತೆ ನಿಶ್ಚಯವಾಗಿ ನಿನ್ನನ್ನು ಬಿಡುಗಡೆಮಾಡುವೆನು. ನಿಜನಿಜವಾಗಿ ನಿನ್ನ ಶತ್ರುವನ್ನು ಕೇಡಿನಲ್ಲಿಯೂ, ಇಕ್ಕಟ್ಟಿನಲ್ಲಿಯೂ ನಿನಗೆ ಶರಣಾಗತನನ್ನಾಗಿ ಮಾಡುವೆನು. ಅಧ್ಯಾಯವನ್ನು ನೋಡಿ |
“ದಯಮಾಡಿ ಯೆಹೋವನ ಚಿತ್ತವೇನೆಂದು ಆತನನ್ನು ನಮಗೋಸ್ಕರ ವಿಚಾರಿಸು; ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನಮ್ಮ ವಿರುದ್ಧವಾಗಿ ಯುದ್ಧ ಮಾಡುತ್ತಿದ್ದಾನಲ್ಲಾ; ಒಂದು ವೇಳೆ ಯೆಹೋವನು ತನ್ನ ಸಮಸ್ತ ಅದ್ಭುತಕಾರ್ಯಗಳಿಗೆ ಅನುಗುಣವಾಗಿ ನಮ್ಮ ಪಕ್ಷವನ್ನು ವಹಿಸಿ ಈ ಶತ್ರುವು ನಮ್ಮ ಕಡೆಯಿಂದ ತೊಲಗುವಂತೆ ಮಾಡಿಯಾನು” ಎಂದು ಅವರ ಮೂಲಕ ವಿಜ್ಞಾಪಿಸಿದಾಗ ಯೆಹೋವನಿಂದ ಯೆರೆಮೀಯನಿಗೆ ದೈವೋಕ್ತಿಯು ದೊರೆಯಿತು.