Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮ್ಮ ವಚನಗಳು ನನಗೆ ದೊರೆತವು. ಅವುಗಳನ್ನು ಹಾಗೆಯೆ ನುಂಗಿಬಿಟ್ಟೆನು. ನಿಮ್ಮ ನುಡಿಗಳು ನನಗೆ ಹರ್ಷವನ್ನೂ ಹೃದಯಾನಂದವನ್ನೂ ತಂದವು. ಸರ್ವಶಕ್ತರಾದ ದೇವರೇ, ಸರ್ವೇಶ್ವರಾ, ನಾನು ನಿಮ್ಮ ನಾಮಧಾರಿಯಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿನ್ನ ಸಂದೇಶ ನನಗೆ ಬಂದಿತು. ನಾನು ನಿನ್ನ ಮಾತುಗಳನ್ನು ಆಹಾರವನ್ನಾಗಿ ಮಾಡಿಕೊಂಡೆ. ನಿನ್ನ ಸಂದೇಶದಿಂದ ನನಗೆ ತುಂಬಾ ಸಂತೋಷವಾಯಿತು. ನಿನ್ನನ್ನು ಹೆಸರಿಡಿದು ಕರೆಯುವುದರಿಂದ ನನಗೆ ಹೆಚ್ಚಿನ ಸಂತೋಷವಾಗಿತ್ತು. ನಿನ್ನ ಹೆಸರು ಸರ್ವಶಕ್ತನಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:16
13 ತಿಳಿವುಗಳ ಹೋಲಿಕೆ  

ಆತನ ತುಟಿಗಳಿಂದ ಹೊರಟ ನಿಯಮಗಳಿಗೆ ನಾನು ಹಿಂದೆಗೆಯಲಿಲ್ಲ, ಆತನ ಬಾಯಿಂದ ಬಂದ ಮಾತುಗಳನ್ನು ಎದೆಯಲ್ಲಿ ನಿಧಿಯನ್ನಾಗಿ ಬಚ್ಚಿಟ್ಟುಕೊಂಡಿದ್ದೇನೆ.


ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ನಿನ್ನ ಕಟ್ಟಳೆಗಳನ್ನು ನನ್ನ ನಿತ್ಯಸ್ವತ್ತಾಗಿ ಆರಿಸಿಕೊಂಡಿದ್ದೇನೆ, ಅವು ನನ್ನ ಹೃದಯಕ್ಕೆ ಉಲ್ಲಾಸಕರವಾಗಿವೆ.


ನಿನ್ನ ಧರ್ಮಶಾಸ್ತ್ರವು ನನಗೆ ಎಷ್ಟೋ ಪ್ರಿಯವಾಗಿದೆ, ದಿನವೆಲ್ಲಾ ಅದೇ ನನ್ನ ಧ್ಯಾನ.


ನೀನು ಕೊಟ್ಟ ಧರ್ಮಶಾಸ್ತ್ರವು, ಸಾವಿರಾರು ಚಿನ್ನ, ಬೆಳ್ಳಿಯ ನಾಣ್ಯಗಳಿಗಿಂತಲೂ ನನಗೆ ಅತಿಪ್ರಿಯವಾಗಿದೆ. ಯೋದ್.


ಏಕೆ ಸ್ತಬ್ಧನಂತೆಯೂ, ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ಇದಲ್ಲದೆ ಆತನು, “ನರಪುತ್ರನೇ, ನಾನು ನಿನಗೆ ಹೇಳುವ ಮಾತನ್ನು ಕೇಳು; ಅವಿಧೇಯರಾದ ಆ ವಂಶದವರಂತೆ ನೀನು ಅವಿಧೇಯನಾಗಬೇಡ; ನಾನು ಕೊಡುವುದನ್ನು ಬಾಯಿದೆರೆದು ತಿಂದುಬಿಡು” ಅಂದನು.


ಯಾಕೋಬ ವಂಶವೇ, “ಯೆಹೋವನ ಆತ್ಮವು ತಾಳ್ಮೆಯಿಲ್ಲದ್ದೋ? ಇಂಥ ಕೃತ್ಯಗಳು ಆತನವೋ” ಎಂದು ಏಕೆ ಹೇಳುತ್ತೀ? ನನ್ನ ನುಡಿಗಳು ಸನ್ಮಾರ್ಗಿಗಳಿಗೆ ಹಿತಕರವಷ್ಟೇ.


ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗ್ರಹಿಸಿದ ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು, ಏನೂ ಇಲ್ಲದವರಿಗೆ ಪಾಲನ್ನು ಕಳುಹಿಸಿ ಬಹಳವಾಗಿ ಸಂತೋಷಪಟ್ಟರು.


ನಿನ್ನ ನಿಬಂಧನೆಗಳಲ್ಲಿ ಉಲ್ಲಾಸಪಡುವೆನು, ನಿನ್ನ ವಾಕ್ಯವನ್ನು ಮರೆಯುವುದಿಲ್ಲ. ಗಿಮೆಲ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು