Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದದೆ ಇರುವುದು ಏಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ?” ಎಂದು ಅರಿಕೆಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನಗೇಕೆ ನಿರಂತರವಾದ ವೇದನೆ? ಗುಣವಾಗದ ಗಡಸು ಗಾಯ? ನೀರು ಇರುವುದಾಗಿ ತೋರಿಸಿಕೊಳ್ಳುವ ಕಳ್ಳ ತೊರೆಯಾಗಬೇಕೆ ನೀವು ನನಗೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣಹೊಂದಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ [ಎಂದು ಅರಿಕೆಮಾಡಿಕೊಂಡೆನು.]

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಹೀಗಿದ್ದರೂ ನನಗೇಕೆ ವ್ಯಥೆ ಉಂಟಾಗುತ್ತಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ನನ್ನ ಗಾಯ ಏಕೆ ಗುಣವಾಗುತ್ತಿಲ್ಲ? ಏಕೆ ವಾಸಿಯಾಗುತ್ತಿಲ್ಲ ಎಂಬುದು ನನಗೆ ತಿಳಿಯದು. ಯೆಹೋವನೇ, ನಿನ್ನಲ್ಲಿ ಬದಲಾವಣೆಯಾಗಿದೆ ಎಂದು ನನಗೆ ಅನಿಸುತ್ತಿದೆ. ನೀನು ಪ್ರವಾಹ ನಿಂತುಹೋದ ನೀರಿನ ಬುಗ್ಗೆಯಂತಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? ಎಂದು ಅರಿಕೆಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:18
15 ತಿಳಿವುಗಳ ಹೋಲಿಕೆ  

ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ? ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು.


ನನ್ನಲ್ಲಿ ನ್ಯಾಯವಿದ್ದರೂ ಸುಳ್ಳುಗಾರ ಎಂದು ಎನ್ನಿಸಿಕೊಂಡಿದ್ದೇನೆ. ನಾನು ನಿರ್ದೋಷಿಯಾಗಿದ್ದರೂ ಆತನ ಬಾಣದ ಪೆಟ್ಟು ವಿಪರೀತವಾಗಿದೆ’ ಎಂದು ಹೇಳಿಕೊಂಡಿದ್ದಾನೆ.


ಸಮಾರ್ಯಕ್ಕೆ ಬಿದ್ದ ಪೆಟ್ಟು ಗುಣಪಡಿಸಲಾಗದು. ಅದು ಯೆಹೂದಕ್ಕೂ ತಾಕಿದೆ. ನನ್ನ ಜನರ ಆಲೋಚನಾಸ್ಥಾನವಾದ ಯೆರೂಸಲೇಮಿಗೆ ಮುಟ್ಟಿದೆ.


ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.


ಯೆಹೋವನೇ, ನೀನು ನನ್ನನ್ನು ಮರುಳುಗೊಳಿಸಿದಿ, ನಾನು ಮರುಳಾದೆನು; ನೀನು ನನಗಿಂತ ಬಲಿಷ್ಠನಾಗಿ ಗೆದ್ದುಕೊಂಡಿ; ನಾನು ಹಗಲೆಲ್ಲಾ ಗೇಲಿಗೆ ಗುರಿಯಾಗಿದ್ದೇನೆ, ಎಲ್ಲರೂ ನನ್ನನ್ನು ಅಣಕಿಸುತ್ತಾರೆ.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ!


ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.


ನನ್ನ ಪ್ರಾಣವು ಸಹ ಬಹಳವಾಗಿ ತತ್ತರಿಸುತ್ತದೆ. ಯೆಹೋವನೇ, ಎಷ್ಟರ ವರೆಗೆ ನನ್ನನ್ನು ಕೈಬಿಟ್ಟಿರುವಿ?


ಆದಕಾರಣ ನೀವು ಮೋರೆಷತ್ ಗತ್ ಊರಿಗೆ ಬಳುವಳಿ ಕೊಡಬೇಕಾಗುವುದು. ಅಕ್ಜೀಬಿನ ಮನೆಗಳಿಂದ ಇಸ್ರಾಯೇಲಿನ ಅರಸರಿಗೆ ಮೋಸವಾಗುವುದು.


ಸರೋವರದ ನೀರು ಬತ್ತುವಂತೆ, ನದಿಯ ನೀರು ಆವಿಯಾಗಿ ಒಣಗುವ ಹಾಗೆ,


ನಾನು ಶ್ರಮದುಃಖಗಳನ್ನು ನೋಡುವುದಕ್ಕೂ, ನನ್ನ ಆಯುಸ್ಸು ಅವಮಾನದಿಂದ ಕ್ಷಯಿಸುವುದಕ್ಕೂ ಗರ್ಭದಿಂದ ಏಕೆ ಹೊರಟು ಬಂದೆನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು