ಯೆರೆಮೀಯ 15:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ನಾನು ನಿನ್ನನ್ನು ಆ ಜನರಿಗೆ ದುರ್ಗಮವಾದ ಕಂಚಿನ ಪೌಳಿಗೋಡೆಯನ್ನಾಗಿಸುವೆನು. ನಿನಗೆ ವಿರುದ್ಧ ಅವರು ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗದು. ನಿನ್ನ ನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು; ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ನಾನು ನಿನ್ನನ್ನು ಬಲಶಾಲಿಯನ್ನಾಗಿ ಮಾಡುತ್ತೇನೆ. ನೀನು ತಾಮ್ರದ ಗೋಡೆಯಂತೆ ಗಟ್ಟಿಯಾಗಿರುವೆ ಎಂದು ಆ ಜನರು ತಿಳಿದುಕೊಳ್ಳುವರು. ಯೆಹೂದದ ಜನರು ನಿನ್ನ ವಿರುದ್ಧ ಹೋರಾಡುವರು. ಆದರೆ ಅವರು ನಿನ್ನನ್ನು ಸೋಲಿಸಲಾರರು. ಏಕೆಂದರೆ ನಾನೇ ನಿನ್ನ ಜೊತೆಯಲ್ಲಿ ಇದ್ದೇನೆ. ನಾನು ನಿನಗೆ ಸಹಾಯಮಾಡುತ್ತೇನೆ ಮತ್ತು ನಾನು ನಿನ್ನನ್ನು ರಕ್ಷಿಸುತ್ತೇನೆ.” ಇದು ಯೆಹೋವನಿಂದ ಬಂದ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ ಬಲವಾದ ಕಂಚಿನ ಗೋಡೆಯಾಗಿ ಮಾಡುತ್ತೇನೆ. ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಜಯಿಸಲಾರರು. ಏಕೆಂದರೆ ನಾನೇ ನಿನ್ನನ್ನು ರಕ್ಷಿಸುವುದಕ್ಕೂ, ನಿನ್ನನ್ನು ತಪ್ಪಿಸುವುದಕ್ಕೂ ನಿನ್ನ ಸಂಗಡ ಇದ್ದೇನೆ, ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |