Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 15:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯೆಹೋವನ ಈ ಮಾತನ್ನು ಕೇಳು, ‘ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದಿ. ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಸರ್ವೇಶ್ವರನಾದ ನನ್ನ ಈ ಮಾತುಗಳನ್ನು ಕೇಳು : ನೀನು ನನ್ನನ್ನು ಅಲ್ಲಗಳೆದು ನನಗೆ ವಿಮುಖಳಾಗಿರುವೆ. ಆದಕಾರಣ ನಿನ್ನನ್ನು ನಾಶಮಾಡಲು ಕೈಯೆತ್ತಿರುವೆ ನಿನ್ನನ್ನು ಕ್ಷಮಿಸಿ ಕ್ಷಮಿಸಿ ಸಾಕಾಗಿದೆ ನನಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯೆಹೋವನ ಈ ಮಾತನ್ನು ಕೇಳು - ನೀನು ನನ್ನನ್ನು ಅಲ್ಲಗಳೆದು ಹಿಂದಿರುಗಿದ್ದೀ; ಆದಕಾರಣ ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ನಾಶಮಾಡುವೆನು; ಕ್ಷವಿುಸಿ ಕ್ಷವಿುಸಿ ಸಾಕಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಜೆರುಸಲೇಮೇ, ನೀನು ನನ್ನನ್ನು ತ್ಯಜಿಸಿದೆ” ಇದು ಯೆಹೋವನ ನುಡಿ. “ಮತ್ತೆಮತ್ತೆ ನೀನು ನನ್ನನ್ನು ತ್ಯಜಿಸಿದೆ. ಆದ್ದರಿಂದ ನಾನು ನಿನ್ನನ್ನು ದಂಡಿಸುತ್ತೇನೆ ಮತ್ತು ನಾಶಮಾಡುತ್ತೇನೆ. ನಿನಗೆ ಸಲ್ಲಬೇಕಾದ ಶಿಕ್ಷೆಯನ್ನು ಪುನಃ ತಡೆಹಿಡಿದು ನಾನು ದಣಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,” ಎಂದು ಯೆಹೋವ ದೇವರು ಹೇಳುತ್ತಾರೆ. “ನೀನು ಹಿಂಜಾರಿದೆ. ಆದ್ದರಿಂದ ನನ್ನ ಕೈಯನ್ನು ನಿನಗೆ ವಿರೋಧವಾಗಿ ಚಾಚಿ, ನಿನ್ನನ್ನು ನಾಶಮಾಡುವೆನು. ನಿನಗೆ ಅನುಕಂಪ ತೋರಿಸುವುದರಲ್ಲಿ ದಣಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 15:6
28 ತಿಳಿವುಗಳ ಹೋಲಿಕೆ  

ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಸ್ವಂತ ಆಲೋಚನೆಗಳನ್ನು ಅನುಸರಿಸಿ ತಮ್ಮ ದುಷ್ಟಹೃದಯದ ಹಟದಂತೆ ನಡೆದು ಹಿಂದಿರುಗಿಯೇ ಹೋದರು, ಮುಂದುವರಿಯಲಿಲ್ಲ.


“ನಾನು ಯೆಹೂದದ ಮೇಲೂ ಮತ್ತು ಯೆರೂಸಲೇಮಿನವರೆಲ್ಲರ ಮೇಲೂ ಕೈಯೆತ್ತಿ, ಈ ಸ್ಥಳದಿಂದ ಬಾಳನ ಪೂಜೆಯನ್ನು ನಿಶ್ಶೇಷಗೊಳಿಸಿ, ಕೆಮಾರ್ಯ ಮೊದಲಾದ ಪೂಜಾರಿಗಳನ್ನು ನಿರ್ನಾಮ ಮಾಡುವೆನು,


“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.


ನನ್ನ ಕಡೆಯಿಂದ ತಿರಿಗಿಕೊಳ್ಳುವುದು ನನ್ನ ಜನರ ಗುಣವೇ; ಅವರನ್ನು ಮೇಲಕ್ಕೆ ಕರೆಯುವವರು ಇದ್ದರೂ, ಮೇಲಕ್ಕೆತ್ತುವವರು ಯಾರೂ ಇಲ್ಲ.


ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಆದುದರಿಂದ ಇಗೋ, ನಾನು ನಿನ್ನ ಮೇಲೆ ಕೈಯೆತ್ತಿ ನಿನ್ನನ್ನು ಸುಲಿಗೆಗಾಗಿ ಮ್ಲೇಚ್ಛರಿಗೆ ವಶಪಡಿಸಿ, ಜನಾಂಗಗಳೊಳಗಿಂದ ಕಿತ್ತುಬಿಟ್ಟು, ದೇಶಗಳೊಳಗಿಂದ ನಿನ್ನ ಹೆಸರನ್ನು ಅಳಿಸಿ, ನಿನ್ನನ್ನು ಹಾಳುಮಾಡುವೆನು; ಆಗ ನಾನೇ ಯೆಹೋವನು ಎಂದು ನಿನಗೆ ಗೊತ್ತಾಗುವುದು.”


ಭೂಲೋಕವೇ, ಕೇಳು! ಆಹಾ, ಈ ಜನರು ನನ್ನ ಮಾತುಗಳನ್ನು ಕೇಳದೆ, ನನ್ನ ಧರ್ಮಬೋಧನೆಯನ್ನು ಅಸಡ್ಡೆಮಾಡಿದ್ದರಿಂದ ಇವರ ಆಲೋಚನೆಗಳ ಫಲವಾದ ಕೇಡನ್ನು ಇವರ ಮೇಲೆ ಬರಮಾಡುವೆನು.


ಆದಕಾರಣ ಯೆಹೋವನ ರೋಷವು ನನ್ನಲ್ಲಿ ತುಂಬಿ ತುಳುಕುತ್ತದೆ; ತಡೆದು ತಡೆದು ನನಗೆ ಸಾಕಾಯಿತು. ಬೀದಿಯಲ್ಲಿನ ಮಕ್ಕಳ ಮೇಲೂ, ಯುವಕರ ಸಂಘದ ಮೇಲೂ ಅದನ್ನು ಹೊಯ್ದು ಬಿಡಬೇಕು. ಗಂಡನೂ, ಹೆಂಡತಿಯೂ, ಮುದುಕನೂ, ಮುಪ್ಪಿನ ಮುದುಕನೂ ಅಂತು ಎಲ್ಲರೂ ಅಪಹರಿಸಲ್ಪಡುವರು.


ನಿನ್ನನ್ನು ಮಾರ್ಗದರ್ಶಿಯಾಗಿ ನಡೆಸುತ್ತಿದ್ದ ನಿನ್ನ ದೇವರಾದ ಯೆಹೋವನನ್ನು ತೊರೆದುಬಿಟ್ಟು ಇದನ್ನೆಲ್ಲಾ ನೀನೇ ನಿನ್ನ ಮೇಲೆ ಬರಮಾಡಿಕೊಂಡೆಯಲ್ಲಾ.


ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.


ಇಸ್ರಾಯೇಲು ಮೊಂಡ ಹಸುವಿನಂತೆ ಮೊಂಡುತನದಿಂದ ನಡೆದಿದೆ; ಈಗ ಯೆಹೋವನು ಅದನ್ನು ಕುರಿಯಂತೆ ವಿಶಾಲ ಸ್ಥಳದಲ್ಲಿ ಮೇಯಿಸುವನೋ?


“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.


“ನಾನು ಯೆಹೋವನ ವಿಷಯವನ್ನು ಪ್ರಕಟಿಸುವುದಿಲ್ಲ, ಆತನ ಹೆಸರಿನಲ್ಲಿ ಇನ್ನು ಮಾತನಾಡುವುದಿಲ್ಲ” ಎಂದುಕೊಂಡರೆ, ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ, ಸಹಿಸಿ ಸಹಿಸಿ ಆಯಾಸಗೊಂಡಿದ್ದೇನೆ, ಇನ್ನು ಸಹಿಸಲಾರೆ.


ಈ ಜನರು, ಯೆರೂಸಲೇಮ್ ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರುಗಿ ಬರುವುದಿಲ್ಲ.


ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.


“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.


ಹೀಗಿರಲು ಯೆಹೋವನ ಮಾತು ಆಜ್ಞೆಯ ಮೇಲೆ ಆಜ್ಞೆ, ಆಜ್ಞೆಯ ಮೇಲೆ ಆಜ್ಞೆ, ಸೂತ್ರದ ಮೇಲೆ ಸೂತ್ರ, ಸೂತ್ರದ ಮೇಲೆ ಸೂತ್ರ, ಇಲ್ಲಿ ಸ್ವಲ್ಪ, ಅಲ್ಲಿ ಸ್ವಲ್ಪ ಎಂಬುದಾಗಿ ಇವರಿಗೆ ಪರಿಣಮಿಸುವುದು; ಇವರು ನಡೆದು ಹಿಂದೆ ಬಿದ್ದು ಭಂಗಪಡುವರು, ಬೋನಿಗೆ ಸಿಕ್ಕಿ ವಶವಾಗುವರು.


ಐಗುಪ್ತ್ಯರು ಮನುಷ್ಯ ಮಾತ್ರದವರೇ, ದೇವರಲ್ಲ. ಅವರ ಅಶ್ವಗಳು ಆತ್ಮವಲ್ಲ, ಮಾಂಸಮಯವಾದವುಗಳು. ಯೆಹೋವನು ತನ್ನ ಕೈ ಚಾಚುವಾಗ ಸಹಾಯ ಮಾಡಿದವನು ಮತ್ತು ಸಹಾಯಪಡೆದವನು ಬಿದ್ದುಹೋಗುವನು. ಅಂತೂ ಎಲ್ಲರೂ ಒಟ್ಟಿಗೆ ಲಯವಾಗುವರು.


ಅವರ ಹೆಂಡತಿ, ಮನೆ, ಹೊಲ ಮತ್ತು ಗದ್ದೆ ಇವೆಲ್ಲವುಗಳು ಅನ್ಯರ ಪಾಲಾಗುವವು. ದೇಶದ ನಿವಾಸಿಗಳ ಮೇಲೆ ಕೈಮಾಡುವೆನಷ್ಟೆ ಎಂದು ಯೆಹೋವನು ಹೇಳಿದ್ದಾನೆ.


“ನೀನಂತು ಈ ಜನರಿಗೋಸ್ಕರ ಬೇಡಿಕೊಳ್ಳಬೇಡ, ಇವರಿಗಾಗಿ ಮೊರೆಯಿಡಬೇಡ, ಪ್ರಾರ್ಥಿಸಬೇಡ, ನನಗೆ ವಿಜ್ಞಾಪಿಸಲೂ ಬೇಡ, ನಾನು ಕೇಳೆನು.


ಜ್ಞಾನಿಗಳು ಆಶಾಭಂಗಪಟ್ಟು ಬೆಚ್ಚಿಬಿದ್ದು ಸಿಕ್ಕಿಕೊಂಡಿದ್ದಾರೆ. ಇಗೋ, ಯೆಹೋವನ ಮಾತನ್ನು ನಿರಾಕರಿಸಿದರು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಸೇಯೀರ್ ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧವಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳು ಮಾಡುವೆನು.


ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.


ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು