ಯೆರೆಮೀಯ 15:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಳುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ. ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು’” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಏಳು ಮಕ್ಕಳನ್ನು ಕಳೆದುಕೊಂಡ ತಾಯಿ ಪ್ರಾಣಬಿಟ್ಟಂತಿದ್ದಾಳೆ ದುಃಖದಿಂದ ಬಳಲಿ ಅವಳ ಪಾಲಿಗೆ ಸೂರ್ಯ ಮುಳುಗಿದ್ದಾನೆ ಹಾಡುಹಗಲಲ್ಲೆ. ಆಶಾಭಂಗಪಟ್ಟಿದ್ದಾಳೆ, ಅವಮಾನಕ್ಕೆ ಈಡಾಗಿದ್ದಾಳೆ. ಖಡ್ಗಕ್ಕೆ ಗುರಿಮಾಡುವೆ ಅವಳ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿಗೆ. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಏಳು ಮಂದಿ ಮಕ್ಕಳನ್ನು ಹೆತ್ತ ಭಾಗ್ಯವಂತಳೂ ಬಳಲಿ ಪ್ರಾಣಬಿಟ್ಟಂತಿದ್ದಾಳೆ, ಹಗಲಿನಲ್ಲಿಯೇ ಆಕೆಯ ಪಾಲಿಗೆ ಸೂರ್ಯನು ಮುಣುಗಿದ್ದಾನೆ, ಆಶಾಭಂಗಪಟ್ಟು ಅವಮಾನಕ್ಕೆ ಈಡಾಗಿದ್ದಾಳೆ; ಆಕೆಯ ಉಳಿದ ಸಂತಾನವನ್ನು ಶತ್ರುಗಳ ಕಣ್ಣೆದುರಿನಲ್ಲಿ ನಾನು ಖಡ್ಗಕ್ಕೆ ಗುರಿಮಾಡುವೆನು, ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಶತ್ರುಗಳು ಖಡ್ಗಧಾರಿಗಳಾಗಿ ಬಂದು ಜನರ ಮೇಲೆರಗಿ ಕೊಲೆಮಾಡುವರು. ಯೆಹೂದದಲ್ಲಿ ಜೀವಂತ ಉಳಿದವರನ್ನು ಅವರು ವಧಿಸುವರು. ಒಬ್ಬ ಸ್ತ್ರೀಗೆ ಏಳು ಜನ ಮಕ್ಕಳಿದ್ದರೂ ಅವರೆಲ್ಲ ಸತ್ತುಹೋಗುವರು. ಅವಳು ಅತ್ತೂಅತ್ತೂ ಬಳಲಿ ಉಸಿರಾಡದಂತಾಗುವಳು. ಅವಳು ಕಳವಳಪಡುವಳು ಮತ್ತು ಗಾಬರಿಗೊಳ್ಳುವಳು. ಪ್ರಕಾಶಮಯವಾದ ದಿನವು ದುಃಖದ ನಿಮಿತ್ತ ಅವಳಿಗೆ ಕತ್ತಲಾಗುವುದು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ. ತನ್ನ ಪ್ರಾಣವನ್ನು ಬಿಡುತ್ತಾಳೆ. ಹಗಲಿರುವಾಗಲೇ ಅವಳ ಸೂರ್ಯನು ಅಸ್ತಮಿಸುತ್ತಾನೆ. ಅವಳು ನಾಚಿಕೆಪಡುತ್ತಾಳೆ, ಅವಮಾನಗೊಳ್ಳುತ್ತಾಳೆ. ಇದಲ್ಲದೆ ಅವರ ಶೇಷವನ್ನು ಅವರ ಶತ್ರುಗಳ ಮುಂದೆ ಖಡ್ಗಕ್ಕೆ ಒಪ್ಪಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |