Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಕೇಳುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 “ಇದನ್ನೆಲ್ಲ ನೀನು ಆ ಜನರಿಗೆ ತಿಳಿಸುವಾಗ ಅವರು, ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಸರ್ವೇಶ್ವರ ವಿಧಿಸಿದ್ದೇಕೆ? ನಾವು ಮಾಡಿದ ಅಪರಾಧವಾದರೂ ಏನು? ನಮ್ಮ ದೇವರಾದ ಸರ್ವೇಶ್ವರನಿಗೆ ವಿರುದ್ಧ ನಾವು ಕಟ್ಟಿಕೊಂಡ ಪಾಪವೇನು?’ ಎಂದು ಕೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಈ ಮಾತುಗಳನ್ನೆಲ್ಲಾ ಈ ಜನರಿಗೆ ತಿಳಿಸುತ್ತಿರುವ ನಿನಗೆ ಪ್ರತ್ಯುತ್ತರವಾಗಿ ಅವರು - ಈ ಮಹಾ ವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ವಿಧಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪವೇನು ಎಂದು ಕೇಳುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 “ಯೆರೆಮೀಯನೇ, ನೀನು ಈ ವಿಷಯವನ್ನು ಯೆಹೂದದ ಜನರಿಗೆ ಹೇಳಿದಾಗ ‘ಈ ಮಹಾವಿಪತ್ತು ನಮಗೆ ಸಂಭವಿಸಬೇಕೆಂದು ಯೆಹೋವನು ಏಕೆ ನಿರ್ಣಯಿಸಿದ್ದಾನೆ? ನಮ್ಮ ಅಪರಾಧವೇನು? ನಮ್ಮ ದೇವರಾದ ಯೆಹೋವನ ವಿರುದ್ಧವಾಗಿ ನಾವು ಮಾಡಿದ ಪಾಪವೇನು?’ ಎಂದು ಅವರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ, ‘ಏಕೆ ಯೆಹೋವ ದೇವರು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಮಾತಾಡಿದ್ದಾರೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಮಾಡಿರುವ ಪಾಪವೇನು?’ ಎಂದು ಹೇಳಿದರೆ, ನೀನು ಅವರಿಗೆ ಹೀಗೆ ಹೇಳಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:10
11 ತಿಳಿವುಗಳ ಹೋಲಿಕೆ  

“ನಮ್ಮ ದೇವರಾದ ಯೆಹೋವನು ಇವುಗಳನ್ನೆಲ್ಲಾ ನಮಗೆ ಏಕೆ ಮಾಡಿದ್ದಾನೆ?” ಎಂದು ನಿನ್ನ ಜನರು ಅನ್ನುವಾಗ ನೀನು ಅವರಿಗೆ, “ನೀವು ಯೆಹೋವನನ್ನು ತೊರೆದು, ಸ್ವದೇಶದಲ್ಲಿ ಅನ್ಯದೇವತೆಗಳನ್ನು ಆರಾಧಿಸಿದ ಹಾಗೆ ಪರದೇಶದಲ್ಲಿ ಅನ್ಯರನ್ನು ಆರಾಧಿಸುವಿರಿ” ಎಂದು ಹೇಳು.


“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.


ಎಫ್ರಾಯೀಮು, “ನಾನು ಐಶ್ವರ್ಯವಂತನೇ ಹೌದು, ಆಸ್ತಿಯನ್ನು ಪಡೆದಿದ್ದೇನೆ; ನನ್ನ ದುಡಿತದಲ್ಲೆಲ್ಲಾ ಪಾಪವೆನಿಸಿಕೊಳ್ಳುವ ದೋಷವೇನೂ ತೋರಲಿಲ್ಲ” ಎಂದು ಅಂದುಕೊಳ್ಳುತ್ತದೋ?


ನೀನಾದರೋ, “ನಾನು ನಿರ್ದೋಷಿ, ಆತನ ಕೋಪವು ನನ್ನ ಮೇಲಿಂದ ನಿಶ್ಚಯವಾಗಿ ತೊಲಗಿಹೋಗಿದೆ” ಎಂದುಕೊಂಡಿದ್ದಿ; “ನಾನು ಪಾಪಮಾಡಲಿಲ್ಲ” ಎಂದು ನೀನು ಹೇಳಿದ ಕಾರಣ, ಇಗೋ, ನಾನು ನಿನಗೆ ನ್ಯಾಯ ತೀರಿಸುವೆನು.


ಇಸ್ರಾಯೇಲ್ ವಂಶವೂ ಮತ್ತು ಯೆಹೂದ ವಂಶವೂ ಬಾಳನಿಗೆ ಹೋಮವನ್ನರ್ಪಿಸಿ, ನನ್ನನ್ನು ಕೆಣಕಿ ತಮಗೆ ಕೆಡುಕನ್ನು ಮಾಡಿಕೊಂಡಿದ್ದರಿಂದ ನಿನ್ನನ್ನು ನೆಟ್ಟ ಸೇನಾಧೀಶ್ವರನಾದ ಯೆಹೋವನು, “ನಿನಗೆ ಕೆಡುಕಾಗಲಿ” ಎಂದು ಶಪಿಸಿದ್ದಾನೆ.


“ನಾನು ಅಶುದ್ಧವಾಗಲಿಲ್ಲ, ಬಾಳ್ ದೇವತೆಗಳನ್ನು ನಾನು ಹಿಂಬಾಲಿಸಲಿಲ್ಲ” ಎಂದು ಹೇಗೆ ಹೇಳುತ್ತಿ? ಆ ತಗ್ಗಿನಲ್ಲಿನ ನಿನ್ನ ನಡತೆಯನ್ನು ನೋಡು, ನೀನು ಮಾಡಿದ ದುಷ್ಟ ಕೆಲಸವನ್ನು ಮನಸ್ಸಿಗೆ ತಂದುಕೋ. ಅತ್ತಿತ್ತ ನೆಗೆದಾಡುವ ಬೆದೆಗೆ ಬಂದ ಹೆಣ್ಣು ಒಂಟೆಯಂತಿರುವೆ.


ನಾನು ಯೆರೂಸಲೇಮನ್ನು ಹಾಳು ದಿಬ್ಬವನ್ನಾಗಿಯೂ, ನರಿಗಳ ಹಕ್ಕೆಯನ್ನಾಗಿಯೂ ಮಾಡುವೆನು ಮತ್ತು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ಯೆಹೋವನು ಹೇಳಿದ್ದಾನಲ್ಲಾ.


ಆಹಾ, ಅಲ್ಲಿನವರು ತಮಗೂ, ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕಿ ಸೇವೆಮಾಡುವುದಕ್ಕೆ ಆತುರಪಟ್ಟು ನನ್ನನ್ನು ಕೆಣಕಬೇಕೆಂದೇ ಈ ದುರಾಚಾರವನ್ನು ನಡೆಸಿದ್ದರಿಂದ ಆ ಸ್ಥಳಗಳು ಹಾಳಾದವು, ಅಲ್ಲಿ ಯಾರೂ ವಾಸಿಸರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು