ಯೆರೆಮೀಯ 16:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ, “ನಮ್ಮ ಪೂರ್ವಿಕರು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ” ಎಂದು ಅರಿಕೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ಹೇ ಸರ್ವೇಶ್ವರಾ, ನನ್ನ ಶಕ್ತಿಯೇ, ನನ್ನ ಕೋಟೆಯೇ, ಆಪತ್ತು ಕಾಲದಲ್ಲಿ ನನ್ನ ಆಶ್ರಯವೇ, ಜಗದ ಕಟ್ಟಕಡೆಯಿಂದ ಜನಾಂಗಗಳು ನಿಮ್ಮ ಸಮ್ಮುಖಕ್ಕೆ ಬರುವುವು. ‘ನಮ್ಮ ಪೂರ್ವಜರು ಪಾರಂಪರ್ಯವಾಗಿ ಪಡೆದವುಗಳು ನಿಶ್ಚಯವಾಗಿ ಅಬದ್ಧವಾದವುಗಳು, ಮಾಯರೂಪವಾದವುಗಳು ಹಾಗು ನಿಷ್ಪ್ರಯೋಜನವಾದವುಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 (ಯೆಹೋವನೇ, ನನ್ನ ಬಲವೇ, ಬಲವಾದ ನನ್ನ ದುರ್ಗವೇ, ಇಕ್ಕಟ್ಟಿನ ದಿನದಲ್ಲಿ ನನ್ನ ಆಶ್ರಯವೇ, ಲೋಕದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಸೇರಿ - ನಮ್ಮ ಪಿತೃಗಳು ಶುದ್ಧ ಸುಳ್ಳನ್ನು, ಮಾಯವನ್ನು, ಪ್ರಯೋಜನವಿಲ್ಲದವುಗಳನ್ನು ಪಾರಂಪರ್ಯವಾಗಿ ಹೊಂದಿದ್ದಾರೆ ಎಂದು ಅರಿಕೆ ಮಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಯೆಹೋವನೇ, ನೀನೇ ನನ್ನ ಬಲವಾಗಿರುವೆ. ನನ್ನ ರಕ್ಷಕನಾಗಿರುವೆ. ಕಷ್ಟ ಬಂದಾಗ ಓಡಿಬಂದು ಆಶ್ರಯ ಪಡೆಯಲು ಸುರಕ್ಷಿತ ಸ್ಥಳವಾಗಿರುವೆ. ಜಗತ್ತಿನ ಎಲ್ಲಾ ಭಾಗಗಳ ಜನಾಂಗದ ಜನರು ನಿನ್ನಲ್ಲಿಗೆ ಬರುವರು. ಅವರು, “ನಮ್ಮ ಪೂರ್ವಿಕರು ಸುಳ್ಳುದೇವರುಗಳನ್ನಿಟ್ಟುಕೊಂಡಿದ್ದರು. ಅವರು ಆ ನಿರರ್ಥಕವಾದ ವಿಗ್ರಹಗಳನ್ನು ಪೂಜಿಸಿದರು. ಆದರೆ ಆ ವಿಗ್ರಹಗಳು ಅವರಿಗೆ ಕೊಂಚವೂ ಸಹಾಯ ಮಾಡಲಿಲ್ಲ” ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಓ ಯೆಹೋವ ದೇವರೇ, ನನ್ನ ಬಲವೇ, ನನ್ನ ಕೋಟೆಯೇ, ಇಕ್ಕಟ್ಟಿನ ದಿವಸದಲ್ಲಿ ನನ್ನ ಆಶ್ರಯವೇ, ಭೂಮಿಯ ಅಂತ್ಯಗಳಿಂದ ಜಗದ ಕಟ್ಟಕಡೆಯಿಂದ ಜನಾಂಗಗಳು ನಿನ್ನ ಬಳಿಗೆ ಬರುವುವು. “ನಮ್ಮ ಪೂರ್ವಜರು ನಿಶ್ಚಯವಾಗಿ ಸುಳ್ಳಾದದ್ದನ್ನು ಪಾರಂಪರ್ಯವಾಗಿ ಹೊಂದಿದ್ದಾರೆ. ಅವು ವ್ಯರ್ಥವೇ. ಅವುಗಳಲ್ಲಿ ಏನೂ ಪ್ರಯೋಜನವಿಲ್ಲ. ಅಧ್ಯಾಯವನ್ನು ನೋಡಿ |