ಯೆರೆಮೀಯ 16:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಈ ನಿಮಿತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು “ಯೆಹೋವ” ಎಂದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ : “ಆದುದರಿಂದ ಇಗೋ, ಇಂದೊಮ್ಮೆ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು. ಚೆನ್ನಾಗಿ ಗ್ರಹಿಸುವಂತೆ ಮಾಡುವೆನು. ನನ್ನ ನಾಮಧೇಯ ಸರ್ವೇಶ್ವರ ಎಂದೇ ಅವರು ಗುರುತು ಹಚ್ಚುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಈ ನಿವಿುತ್ತವಾಗಿ, ಇಗೋ, ಇದೊಂದೇ ಸಲ ನನ್ನ ಭುಜಬಲವನ್ನೂ ಪರಾಕ್ರಮವನ್ನೂ ಅವರಿಗೆ ತಿಳಿಯಪಡಿಸುವೆನು, ಹೌದು, ಗ್ರಹಿಸಮಾಡುವೆನು; ನನ್ನ ನಾಮಧೇಯವು ಯೆಹೋವನೆಂದೇ ಅವರಿಗೆ ಗೊತ್ತಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ವಿಗ್ರಹಗಳನ್ನು ಮಾಡುವ ಜನರಿಗೆ ನಾನು ಪಾಠ ಕಲಿಸುತ್ತೇನೆ. ಈಗಲೇ ನಾನು ಅವರಿಗೆ ನನ್ನ ಶಕ್ತಿಯ ಬಗ್ಗೆ ಮತ್ತು ನನ್ನ ಬಲದ ಬಗ್ಗೆ ಕಲಿಸುವೆನು. ಆಗ ನಾನು ದೇವರೆಂಬುದು ಅವರಿಗೆ ತಿಳಿಯುವುದು. ನಾನೇ ಯೆಹೋವನು ಎಂಬುದು ಅವರಿಗೆ ಗೊತ್ತಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಆದ್ದರಿಂದ ಇಗೋ, ನಾನು ಇದೊಂದು ಸಾರಿ ಅವರಿಗೆ ತಿಳಿಯುವಂತೆ ಮಾಡುವೆನು. ನನ್ನ ಕೈಯನ್ನೂ, ನನ್ನ ಪರಾಕ್ರಮವನ್ನೂ ಅವರಿಗೆ ತಿಳಿಸುವೆನು. ನನ್ನ ಹೆಸರು ಯೆಹೋವ ದೇವರೇ, ಎಂದು ಅವರು ತಿಳಿದುಕೊಳ್ಳುವರು. ಅಧ್ಯಾಯವನ್ನು ನೋಡಿ |