Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 16:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ದೇಶದಲ್ಲಿನ ದೊಡ್ಡವರೂ. ಅಲ್ಪರೂ ಸಾಯುವರು. ಅವರನ್ನು ಯಾರೂ ಹೂಣಿಡುವುದಿಲ್ಲ, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಗಾಯಮಾಡಿಕೊಳ್ಳುವುದಿಲ್ಲ, ತಲೆಬೋಳಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ನಾಡಿನಲ್ಲಿ ದೊಡ್ಡವರು ಹಾಗುಚಿಕ್ಕವರು ಸಾಯುವರು. ಅವರನ್ನು ಯಾರು ಹೂಣಿಡುವುದಿಲ್ಲ. ಅವರಿಗಾಗಿ ಯಾರೂ ಗೋಳಾಡುವುದಿಲ್ಲ. ದೇಹವನ್ನು ಹುಣ್ಣಾಗಿಸಿಕೊಳ್ಳುವುದಿಲ್ಲ. ತಲೆ ಬೋಳಿಸಿಕೊಳ್ಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಯೆಹೂದದ ಪ್ರಮುಖರು ಮತ್ತು ಜನಸಾಮಾನ್ಯರು ಸತ್ತುಹೋಗುವರು. ಯಾರೂ ಅವರನ್ನು ಹೂಳುವದಿಲ್ಲ. ಅವರಿಗೋಸ್ಕರ ಗೋಳಾಡುವದಿಲ್ಲ. ಅವರ ಬಗ್ಗೆ ದುಃಖ ಸೂಚಿಸಲು ಯಾರೂ ತಮಗೆ ಗಾಯಗಳನ್ನು ಮಾಡಿಕೊಳ್ಳುವದಿಲ್ಲ; ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು. ಅವರಿಗೆ ಸಮಾಧಿಯಾಗುವುದಿಲ್ಲ, ಅವರಿಗೋಸ್ಕರ ಯಾರೂ ತಮ್ಮನ್ನು ಕೊಯ್ದುಕೊಳ್ಳುವುದಿಲ್ಲ, ತಮ್ಮ ತಲೆ ಬೋಳಿಸಿಕೊಳ್ಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 16:6
20 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವುದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು ಮತ್ತು ತಲೆಯ ಮುಂದಿನಭಾಗವನ್ನು ಬೋಳಿಸಿಕೊಳ್ಳಲೂ ಬಾರದು.


“ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?


ಗಡ್ಡಬೋಳಿಸಿ, ಬಟ್ಟೆಹರಿದು ಗಾಯ ಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಬಂದು ಕೈಯಲ್ಲಿ ಧೂಪ ಮತ್ತು ನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


“‘ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವುದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಹಾಕಿಸಿಕೊಳ್ಳಬಾರದು. ನಾನು ಯೆಹೋವನು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು, ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು. ಕಣ್ಣೀರು ಸುರಿಸಿ, ಗೋಳಾಡಿರಿ, ತಲೆಬೋಳಿಸಿಕೊಳ್ಳಿರಿ, ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂಬುದೇ.


ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.


ಅವರು ಘೋರವಾದ ಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡುವುದಿಲ್ಲ, ಅವರನ್ನು ಯಾರೂ ಹೂಣಿಡುವುದಿಲ್ಲ; ಅವರು ಭೂಮಿಯ ಮೇಲೆ ಗೊಬ್ಬರವಾಗುವರು. ಖಡ್ಗವೂ, ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಮತ್ತು ಭೂಜಂತುಗಳಿಗೂ ಆಹಾರವಾಗುವವು” ಎಂಬುದೇ.


ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,


ಯೆರೂಸಲೇಮೇ, ತಲೆಯನ್ನು ಬೋಳಿಸಿಕೊಂಡು ಕೂದಲನ್ನು ಬಿಸಾಡಿಬಿಟ್ಟು, ಬೋಳುಗುಡ್ಡಗಳಲ್ಲಿ ಶೋಕಗೀತವನ್ನು ಹಾಡು; ಯೆಹೋವನು ತನ್ನ ಕೋಪಕ್ಕೆ ಗುರಿಯಾದ ಈ ವಂಶವನ್ನು ನಿರಾಕರಿಸಿ ತ್ಯಜಿಸಿದ್ದಾನೆ.


ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು.


ಇದಲ್ಲದೆ ಸತ್ತವರಾದ, ಶ್ರೇಷ್ಠರು ಮತ್ತು ಕನಿಷ್ಠರೆಲ್ಲರು ಸಿಂಹಾಸನದ ಮುಂದೆ ನಿಂತಿರುವುದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು. ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು. ಆ ಪುಸ್ತಕಗಳಲ್ಲಿ ಬರೆದಿರುವ ಪ್ರಕಾರ, ಅವರವರ ಕೃತ್ಯಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಇಗೋ, ನೋಡಿರಿ, ಯೆಹೋವನು ಆಜ್ಞಾಪಿಸಲು, ದೊಡ್ಡ ಮನೆಯು ಕೆಡವಲ್ಪಟ್ಟು ಚೂರುಚೂರಾಯಿತು, ಚಿಕ್ಕ ಮನೆಯೂ ಮುರಿದುಹೋಗುವುದು.


ಯೇಸು ಆ ಅಧಿಕಾರಿಯ ಮನೆಗೆ ಬಂದಾಗ ಕೊಳಲು ಊದುವವರನ್ನೂ ಗದ್ದಲ ಮಾಡುವ ಜನರ ಗುಂಪನ್ನೂ ಕಂಡು ಅವರಿಗೆ,


ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.


“‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.


ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು