Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ. ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನಗಲ್ಲ, ನನ್ನ ಹಿಂಸಕರಿಗೆ ಅವಮಾನವಾಗಲಿ. ಭಯಭ್ರಾಂತಿ ನನ್ನನ್ನಲ್ಲ, ಅವರನ್ನು ಅಪಹರಿಸಲಿ. ಅವರಿಗೆ ಕೇಡುಗಾಲವನ್ನು ಬರಮಾಡಿ ಬೇರುಸಹಿತ ಅವರನ್ನು ನಾಶಪಡಿಸಿರಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ; ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನು ಬೇಡ; ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತಭಂಗದಿಂದ ಅವರನ್ನು ನಾಶಪಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜನರು ನನ್ನನ್ನು ಹಿಂಸಿಸುತ್ತಿದ್ದಾರೆ. ಆ ಜನರು ಲಜ್ಜೆಪಡುವಂತೆ ಮಾಡು. ನನ್ನನ್ನು ನಿರಾಶೆಗೊಳಿಸಬೇಡ. ಆ ಜನರಿಗೆ ಭೀತಿಯುಂಟಾಗಲಿ, ಆದರೆ ನನಗೆ ಭಯವಾಗುವಂತೆ ಮಾಡಬೇಡ. ನನ್ನ ವೈರಿಗಳಿಗೆ ಭಯಂಕರವಾದ ವಿನಾಶದ ದಿನವು ಬರುವಂತೆ ಮಾಡು. ಅವರನ್ನು ಮುರಿದುಬಿಡು, ಮತ್ತೆಮತ್ತೆ ಮುರಿದುಬಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ; ಆದರೆ ನನಗೆ ನಾಚಿಕೆಯಾಗದಿರಲಿ. ಅವರು ದಿಗಿಲು ಪಡಲಿ; ಆದರೆ ನಾನು ದಿಗಿಲು ಪಡದಿರಲಿ. ಆದರೆ ನಾನು ದಿಗಿಲು ಪಡದಂತೆ ಮಾಡುವ ಕೆಟ್ಟದಿನವನ್ನು ಅವರ ಮೇಲೆ ಬರಮಾಡಿ. ಎರಡರಷ್ಟಾದ ನಾಶದಿಂದ ಅವರನ್ನು ನಾಶಪಡಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:18
21 ತಿಳಿವುಗಳ ಹೋಲಿಕೆ  

ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವವರು ಆಶಾಭಂಗಪಟ್ಟು ಅವಮಾನಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.


ಯೆಹೋವನಾದರೋ ಭಯಂಕರಶೂರನಾಗಿ ನನ್ನ ಸಂಗಡ ಇದ್ದಾನೆ. ಆದುದರಿಂದ ನನ್ನ ಹಿಂಸಕರು ಗೆಲ್ಲದೆ ಮುಗ್ಗರಿಸುವರು. ತಮ್ಮ ಇಷ್ಟಾರ್ಥವು ನೆರವೇರದ ಕಾರಣ ದೊಡ್ಡ ನಾಚಿಕೆಗೆ ಈಡಾಗುವರು, ಎಂದಿಗೂ ಮರೆಯದ ಶಾಶ್ವತ ಅವಮಾನಕ್ಕೆ ಒಳಗಾಗುವರು.


ಹೃದಯವನ್ನೂ, ಅಂತರಿಂದ್ರಿಯವನ್ನೂ ಪರೀಕ್ಷಿಸಿ, ನ್ಯಾಯವಾಗಿ ತೀರ್ಪುಮಾಡುವ ಸೇನಾಧೀಶ್ವರನಾದ ಯೆಹೋವನೇ, ನೀನು ಅವರಿಗೆ ಕೊಡುವ ಪ್ರತಿಫಲವನ್ನು ನಾನು ಕಾಣುವೆನು; ನನ್ನ ವ್ಯಾಜ್ಯವನ್ನು ನಿನಗೇ ಅರಿಕೆಮಾಡಿದ್ದೇನಷ್ಟೆ ಎಂದು ಹೇಳಿದೆನು.


ನನ್ನ ಪ್ರಾಣವನ್ನು ತೆಗೆಯುವುದಕ್ಕೆ ಸಮಯನೋಡುವವರು, ಆಶಾಭಂಗಪಟ್ಟು ಅವಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಅಪಮಾನದಿಂದ ಹಿಂದಿರುಗಿ ಓಡಲಿ.


ಅವನಿಗೆ ನಾಶನವು ಆಕಸ್ಮಾತ್ತಾಗಿ ಬರಲಿ; ತಾನು ಹಾಸಿದ ಬಲೆಯಲ್ಲಿ ತಾನೇ ಸಿಕ್ಕಿಬೀಳಲಿ. ತಾನು ತೋಡಿದ ಕುಣಿಯಲ್ಲಿ ತಾನೇ ಬಿದ್ದುಹೋಗಲಿ.


ಇತರರಿಗೆ ಅವಳು ಕೊಟ್ಟಿದ್ದಕ್ಕೆ ಸರಿಯಾಗಿ ಅವಳಿಗೆ ಹಿಂದಕ್ಕೆ ಕೊಡಿರಿ. ಅವಳ ಕೃತ್ಯಗಳಿಗೆ ಪ್ರತಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ. ಅವಳು ಕಲಸಿಕೊಟ್ಟ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿ ಕೊಡಿರಿ.


ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ. ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು.


ಅವರ ಅಧರ್ಮಕ್ಕೂ, ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯವಿಗ್ರಹಗಳಿಂದ ನನ್ನ ದೇಶವನ್ನು ಹೊಲಸುಮಾಡಿ, ನನ್ನ ಸ್ವತ್ತನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.”


ಯೆಹೋವನೇ, ನಿನ್ನನ್ನು ಮೊರೆಹೊಕ್ಕಿದ್ದೇನೆ; ಎಂದಿಗೂ ಅವಮಾನಕ್ಕೆ ಗುರಿಮಾಡಬೇಡ.


ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.


ಮೇಲಿಂದ ಮೇಲೆ ನನಗೆ ಪೆಟ್ಟುಕೊಟ್ಟು ನನ್ನನ್ನು ಶಕ್ತಿಹೀನನಾಗಿ ಮಾಡಿದ್ದಾನೆ ಶೂರನ ಹಾಗೆ ನನ್ನ ಮೇಲೆ ಎರಗುತ್ತಾನೆ.


ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.


ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.


ಯೆಹೋವನೇ, ನೀನು ನನ್ನನ್ನು ತಿಳಿದಿದ್ದಿ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತಿ. ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,


ಯೆಹೋವನೇ, ಅವರ ಆಸ್ತಿಯನ್ನು ವೃದ್ಧಿಪಡಿಸು; ಅವರ ಸೇವೆಯು ನಿನಗೆ ಸಮರ್ಪಕವಾಗಿರಲಿ; ಅವರಿಗೆ ವಿರುದ್ಧವಾಗಿ ಬರುವವರ ನಡುವನ್ನು ಮುರಿದು ಅವರ ವೈರಿಗಳು ಪುನಃ ಎದ್ದು ಬಾರದಂತೆ ಮಾಡು” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು