Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:20 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ‘ಈ ಬಾಗಿಲುಗಳಲ್ಲಿ ಸೇರುವ ಜುದೇಯದ ಅರಸರೇ, ಎಲ್ಲ ಯೆಹೂದ್ಯರೇ, ಜೆರುಸಲೇಮಿನ ಸಕಲ ನಿವಾಸಿಗಳೇ, ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನ ಸಕಲ ನಿವಾಸಿಗಳೇ, ಯೆಹೋವನ ಈ ಮಾತನ್ನು ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಆ ಜನರಿಗೆ ಹೇಳು, ‘ಯೆಹೋವನ ಸಂದೇಶವನ್ನು ಕೇಳಿರಿ. ಯೆಹೂದದ ರಾಜರೇ, ಕೇಳಿರಿ. ಯೆಹೂದದ ಎಲ್ಲಾ ಜನರೇ ಕೇಳಿರಿ. ಈ ದ್ವಾರಗಳಿಂದ ಜೆರುಸಲೇಮಿಗೆ ಬರುವ ಜನರೇ, ನಾನು ಹೇಳುವದನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:20
13 ತಿಳಿವುಗಳ ಹೋಲಿಕೆ  

ನೀನು ಅವರಿಗೆ, ‘ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ! ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುವೆನು; ಅದರ ಸುದ್ದಿಯನ್ನು ಕೇಳುವವರ ಎರಡು ಕಿವಿಗಳೂ ಗಿರುಗುಟ್ಟುವವು.


ಅವರು ಕೇಳಿದರೂ, ಕೇಳದೆ ಹೋದರೂ ನೀನು ನನ್ನ ಮಾತುಗಳನ್ನು ಅವರಿಗೆ ಹೇಳಬೇಕು; ಅವರು ಖಂಡಿತವಾಗಿ ದ್ರೋಹಿಗಳೇ.”


ದಾವೀದನ ಸಿಂಹಾಸನರೂಢನಾದ ಯೆಹೂದದ ಅರಸನೇ, ಯೆಹೋವನ ಮಾತನ್ನು ಕೇಳು; ನಿನ್ನ ಸೇವಕರೂ ಮತ್ತು ಈ ಬಾಗಿಲುಗಳಲ್ಲಿ ಸೇರುವ ನಿನ್ನ ಪ್ರಜೆಗಳೂ ಕೇಳಲಿ.


ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.


ನಾನು ಹೀಗೆ ಸಾರಿದೆನು; “ಯಾಕೋಬಿನ ಮುಖಂಡರೇ, ಇಸ್ರಾಯೇಲ್ ವಂಶದ ಅಧಿಪತಿಗಳೇ ಕಿವಿಗೊಟ್ಟು ಕೇಳಿರಿ. ನ್ಯಾಯ ನೀತಿ ಪಾಲನೆ ನಿಮ್ಮ ಕರ್ತವ್ಯವಲ್ಲವೇ? ನಿಮ್ಮ ಧರ್ಮವಲ್ಲವೇ?


ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.


ಯಾಜಕರೇ, ಇದನ್ನು ಕೇಳಿರಿ, ಇಸ್ರಾಯೇಲ್ ಕುಲದವರೇ, ಆಲಿಸಿರಿ; ರಾಜವಂಶದವರೇ, ಕಿವಿಗೊಡಿರಿ; ನೀವು ಮಿಚ್ಪದಲ್ಲಿ ಉರುಲಾಗಿಯೂ, ತಾಬೋರಿನಲ್ಲಿ ಬಲೆಯಾಗಿಯೂ ಇದ್ದ ಕಾರಣ ನಿಮಗೆ ನ್ಯಾಯತೀರ್ಪು ಬಂದಿದೆ.


“ನರಪುತ್ರನೇ, ನಾನು ನಿನ್ನನ್ನು ಇಸ್ರಾಯೇಲ್ ವಂಶದವರ ಮೇಲೆ ಕಾವಲುಗಾರನನ್ನಾಗಿ ನೇಮಿಸಿದ್ದೇನೆ. ಹೀಗಿರಲು ನನ್ನ ಬಾಯಿಂದ ಹೊರಡುವ ಮಾತನ್ನು ಕೇಳಿ, ನನ್ನ ಪರವಾಗಿ ಅವರನ್ನು ಎಚ್ಚರಿಸು.


ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.


ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,


“‘ಈ ಜನರು ನನ್ನನ್ನು ತೊರೆದು ತಮಗಾಗಲಿ, ತಮ್ಮ ಪೂರ್ವಿಕರಿಗಾಗಲಿ ಅಥವಾ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ, ಈ ಸ್ಥಳವನ್ನು ಅನ್ಯಸ್ಥಾನವನ್ನಾಗಿ ಮಾಡಿದ್ದಾರೆ.


ಯೆಹೂದದ ಅರಸನ ಮನೆತನದ ವಿಷಯವಾಗಿ ಯೆಹೋವನು ಹೇಳಿರುವ ಈ ಮಾತನ್ನು ಕೇಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು