Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಆ ಸಬ್ಬತ್ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿ. ಯಾವ ಕೆಲಸವನ್ನೂ ಮಾಡದಿರಿ. ನಾನು ನಿಮ್ಮ ಪೂರ್ವಜರಿಗೆ ಆಜ್ಞೆಮಾಡಿದಂತೆ ಸಬ್ಬತ್ ದಿನವನ್ನು ಪವಿತ್ರ ದಿನವನ್ನಾಗಿ ಆಚರಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ; ಸಬ್ಬತ್ ದಿನವನ್ನು ನನ್ನ ದಿನವೆಂದು ಆಚರಿಸಿರಿ; ನಿಮ್ಮ ಪಿತೃಗಳಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಸಬ್ಬತ್‌ದಿನದಂದು ನಿಮ್ಮ ಮನೆಯಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ. ಆ ದಿನ ಯಾವ ಕೆಲಸವನ್ನೂ ಮಾಡಬೇಡಿರಿ. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ನಾನು ನಿಮ್ಮ ಪೂರ್ವಿಕರಿಗೆ ಇದೇ ಆದೇಶವನ್ನು ಕೊಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:22
19 ತಿಳಿವುಗಳ ಹೋಲಿಕೆ  

ಇದಲ್ಲದೆ ತಮ್ಮನ್ನು ಪರಿಶುದ್ಧ ಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳಿದುಕೊಳ್ಳುವಂತೆ ನನಗೂ, ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ಗುರುತಾಗಿ ನೇಮಿಸಿದೆನು.


ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ,


ಆರು ದಿನಗಳು ನಿಮ್ಮ ಕೆಲಸವನ್ನು ನಡಿಸಿ ಏಳನೆಯ ದಿನದಲ್ಲಿ ಯಾವ ಕೆಲಸವನ್ನು ಮಾಡದೇ ಇರಬೇಕು. ಆ ಹೊತ್ತು ನಿಮ್ಮ ಎತ್ತುಗಳು, ಕತ್ತೆಗಳು, ದಾಸ, ದಾಸಿಯರು, ಪರದೇಶಸ್ಥರು ವಿಶ್ರಮಿಸಿಕೊಳ್ಳಲಿ.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿರಲು, ನನ್ನ ಬೆನ್ನ ಹಿಂದೆ ಮಹಾಶಬ್ದವೊಂದು ಕೇಳಿಸಿತು. ಅದು ತುತ್ತೂರಿಯ ನಾದದಂತಿತ್ತು.


ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧ ತೈಲವನ್ನೂ ಸಿದ್ಧಮಾಡಿಕೊಂಡರು. ಆ ಸ್ತ್ರೀಯರು ಸಬ್ಬತ್ ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರಮಿಸಿಕೊಂಡರು.


“ಮನುಷ್ಯಕುಮಾರನು ಸಬ್ಬತ್ ದಿನಕ್ಕೆ ಒಡೆಯನಾಗಿದ್ದಾನೆ” ಎಂದು ಅವರಿಗೆ ಹೇಳಿದನು.


ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.


“‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.


“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಆ ಕಾಲದಲ್ಲಿ ಯೆಹೂದದಲ್ಲಿ ಕೆಲವರು ಸಬ್ಬತ್ ದಿನದಲ್ಲಿ ತೊಟ್ಟಿಯೊಳಗೆ ದ್ರಾಕ್ಷಿ ತುಳಿಯುವುದನ್ನೂ, ಕಣದ ಕಾಳನ್ನು ಕೂಡಿಸಿ, ಆ ಕಾಳುಗಳನ್ನೂ, ದ್ರಾಕ್ಷಾರಸ, ದ್ರಾಕ್ಷಿ, ಅಂಜೂರದ ಹಣ್ಣು ಈ ಮುಂತಾದವುಗಳನ್ನು ಕತ್ತೆಗಳ ಮೇಲೆ ಹೇರಿಕೊಂಡು ಆ ದಿನದಲ್ಲೇ ಯೆರೂಸಲೇಮಿಗೆ ತರುವುದನ್ನೂ ಕಂಡೆನು. ಅವರು ಆ ಆಹಾರ ಪದಾರ್ಥಗಳನ್ನು ಮಾರುವುದಕ್ಕೆ ಬಂದಾಗ ನಾನು ಅವರನ್ನು ವಿರೋಧಿಸಿದೆನು.


ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,


ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು