ಯೆರೆಮೀಯ 17:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 “ಸರ್ವೇಶ್ವರನಾದ ನಾನು ಹೇಳುವ ಮಾತಿದು : ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನು ತರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ಪವಿತ್ರವಾಗಿ ಆಚರಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನಾದ ನನ್ನ ನುಡಿ ಇದೇ - ನೀವು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ ಯಾವ ಕೆಲಸವನ್ನೂ ಮಾಡದೆ ಆ ದಿನವನ್ನು ನನ್ನ ದಿನವೆಂದು ಆಚರಿಸಿದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಆದರೆ ನೀವು ಎಚ್ಚರಿಕೆಯಿಂದ ನನ್ನ ಆಜ್ಞೆಯನ್ನು ಪಾಲಿಸಬೇಕು.’” ಇದು ಯೆಹೋವನ ನುಡಿ. “‘ನೀವು ಸಬ್ಬತ್‌ದಿನದಂದು ಜೆರುಸಲೇಮಿನ ದ್ವಾರಗಳ ಮೂಲಕ ಯಾವ ಭಾರವನ್ನೂ ತರಬಾರದು. ಸಬ್ಬತ್‌ದಿನವನ್ನು ನೀವು ಪವಿತ್ರದಿನವನ್ನಾಗಿ ಮಾಡಬೇಕು. ಆ ದಿನ ನೀವು ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ, ಅಧ್ಯಾಯವನ್ನು ನೋಡಿ |
ಯೆಹೋವನು ಅವರಿಗೆ, “ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ಆತನ ದೃಷ್ಟಿಗೆ ಸರಿಬೀಳುವುದನ್ನು ಮಾಡಿ, ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು, ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ, ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವುದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನೂ, ನಿಮ್ಮನ್ನು ಗುಣಪಡಿಸುವವನೂ ಆಗಿದ್ದೇನೆ” ಎಂದನು.