Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇವಿುನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ ಆ ದಿನವನ್ನು ನನ್ನ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇವಿುನ ಉಪ್ಪರಿಗೆಗಳನ್ನು ದಹಿಸಿಬಿಡುವದು, ಆರುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “‘ನೀವು ನನ್ನ ಮಾತನ್ನು ಕೇಳದಿದ್ದರೆ ಮತ್ತು ನನ್ನ ಆಜ್ಞೆಯನ್ನು ಪಾಲಿಸದಿದ್ದರೆ ಕೇಡಾಗುವುದು. ಸಬ್ಬತ್‌ದಿನದಲ್ಲಿ ಹೊರೆಗಳನ್ನು ಹೊತ್ತುಕೊಂಡು ಜೆರುಸಲೇಮಿಗೆ ಹೋದರೆ ನೀವು ಆ ದಿನವನ್ನು ಪವಿತ್ರದಿನವೆಂದು ಆಚರಿಸಿದಂತೆ ಆಗುವುದಿಲ್ಲ. ಆಗ ನಾನು ನಂದಿಸಲಾಗದ ಬೆಂಕಿಯನ್ನು ಹೊತ್ತಿಸುತ್ತೇನೆ. ಆ ಬೆಂಕಿಯು ಜೆರುಸಲೇಮಿನ ದ್ವಾರಗಳಲ್ಲಿ ಪ್ರಾರಂಭವಾಗಿ ಅರಮನೆಗಳನ್ನು ಸುಡುವವರೆಗೂ ಉರಿಯುತ್ತಿರುವುದು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆದರೆ ನೀವು ಸಬ್ಬತ್ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:27
43 ತಿಳಿವುಗಳ ಹೋಲಿಕೆ  

ಅವನು ಯೆಹೋವನ ಆಲಯವನ್ನೂ, ಅರಸನ ಅರಮನೆಯನ್ನೂ ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಹಾಗೂ ಪಟ್ಟಣದ ಮುಖ್ಯ ಕಟ್ಟಡಗಳನ್ನೂ ಸುಟ್ಟುಬಿಟ್ಟನು.


ಹೀಗಿರಲು ಕರ್ತನಾದ ಯೆಹೋವನ ಈ ಮಾತನ್ನು ಕೇಳಿರಿ, “ಆಹಾ, ನನ್ನ ಕೋಪವೆಂಬ ರೋಷಾಗ್ನಿಯು ಈ ಸ್ಥಳದಲ್ಲಿ ಸುರಿಯಲ್ಪಡುವುದು; ಮನುಷ್ಯರ ಮೇಲೆಯೂ, ಪಶುಗಳ ಮೇಲೆಯೂ, ಕಾಡುಮರಗಳ ಮೇಲೆಯೂ, ಭೂಮಿಯ ಬೆಳೆಯ ಮೇಲೆಯೂ ಅದನ್ನು ಸುರಿಯುವೆನು; ಅದು ಆರದೆ ದಹಿಸುವುದು.”


ನಿಮ್ಮ ದುಷ್ಕೃತ್ಯಗಳಿಗೆ ಪ್ರತಿಫಲವಾಗಿ ನಿಮ್ಮನ್ನು ದಂಡಿಸುವೆನು; ನಿಮ್ಮ ಪುರವೆಂಬ ವನಕ್ಕೆ ಬೆಂಕಿ ಹಚ್ಚುವೆನು, ಅದು ಸುತ್ತುಮುತ್ತಣದ ಪ್ರದೇಶವನ್ನೆಲ್ಲಾ ನುಂಗಿಬಿಡುವುದು.


ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.


ನೀನು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿ ನಾನು ನೇಮಿಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದ್ದಿ.


ಯೆಹೋವನು ತನ್ನ ರೋಷಾಗ್ನಿಯನ್ನು ಸುರಿಸಿ ತನ್ನ ಸಿಟ್ಟನ್ನು ತೀರಿಸಿದ್ದಾನೆ; ಚೀಯೋನಿನ ಅಸ್ತಿವಾರಗಳನ್ನು ನುಂಗಿಬಿಟ್ಟ ಬೆಂಕಿಯನ್ನು ಅಲ್ಲಿ ಹೊತ್ತಿಸಿದ್ದಾನೆ.


ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಆಗ ನಾನು ದಮಸ್ಕದ ಕೋಟೆಯಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಬೆನ್ ಹದದನ ಅರಮನೆಗಳನ್ನು ದಹಿಸಿಬಿಡುವುದು” ಎಂದು ಸೇನಾಧೀಶ್ವರನಾದ ಯೆಹೋವನು ಅನ್ನುತ್ತಾನೆ.


ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.


ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ನಾನು ಮೋವಾಬಿನ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಕೆರೀಯೋತಿನ ಅರಮನೆಗಳನ್ನು ನುಂಗಿಬಿಡುವುದು. ಭಟರು ಘೋಷಿಸಿ ಕೊಂಬೂದುವ ಯುದ್ಧದ ಕೋಲಾಹಲದಲ್ಲಿ, ಮೋವಾಬು ಸಾಯುವುದು;


ನಾನು ತೇಮಾನಿನ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಬೊಚ್ರದ ಅರಮನೆಗಳನ್ನು ನುಂಗಿಬಿಡುವುದು.”


ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”


ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.


ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು.


ನಿನ್ನ ಮನೆಗಳನ್ನು ಬೆಂಕಿಯಿಂದ ಸುಡುವರು; ಬಹುಮಂದಿ ಹೆಂಗಸರ ಕಣ್ಣೆದುರಿನಲ್ಲಿ ನಿನ್ನನ್ನು ದಂಡಿಸುವರು; ನೀನು ನಿನ್ನ ಸೂಳೆತನವನ್ನು ನಿಲ್ಲಿಸಿಬಿಡುವಂತೆ ನಾನು ಮಾಡುವೆನು; ನೀನು ನಿನ್ನ ಮಿಂಡರಿಗೆ ಇನ್ನು ಹಣಕೊಡದಿರುವಿ.


“ಯೆಹೋವನ ಹೆಸರಿನಿಂದ ನೀನು ನಮಗೆ ನುಡಿದ ಮಾತುಗಳನ್ನು ಕೇಳುವುದಿಲ್ಲ.


ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.


ನೀವು ಈ ಮಾತುಗಳನ್ನು ಕೇಳದಿದ್ದರೆ ಈ ಅರಮನೆಯು ಹಾಳುಬೀಳುವುದು ಎಂದು ನನ್ನ ಮೇಲೆ ಆಣೆಯಿಡುತ್ತೇನೆ ಇದು ಯೆಹೋವನ ನುಡಿ” ಎಂಬುದೇ.


ದಾವೀದನ ಮನೆತನದವರೇ, ಯೆಹೋವನು ಇಂತೆನ್ನುತ್ತಾನೆ, “ನಿಮ್ಮ ದುಷ್ಕೃತ್ಯಗಳ ನಿಮಿತ್ತ ನನ್ನ ರೋಷವು ಜ್ವಾಲೆಯಂತೆ ಹೊರಟು, ಯಾರೂ ಆರಿಸಲಾಗದಷ್ಟು ರಭಸವಾಗಿ ದಹಿಸಬಾರದಾಗಿದ್ದರೆ, ಮುಂಜಾನೆಯಲ್ಲಿ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ದೋಚಿಕೊಂಡವನ ಕೈಯಿಂದ ಬಿಡಿಸಿರಿ” ಎಂಬುದೇ.


ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,


ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು.


‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.


ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”


ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.


ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಹಾಕಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ಕೋಪಗೊಳ್ಳುವಂತೆ ಮಾಡಿರುವುದರಿಂದ ನನ್ನ ಕೋಪಾಗ್ನಿಯು ಈ ದೇಶದ ಮೇಲೆ ಉರಿಯಹತ್ತಿದೆ, ಅದು ಆರಿಹೋಗುವುದೇ ಇಲ್ಲ’ ಎನ್ನುತ್ತಾನೆ.


ನನ್ನ ಕೋಪಾಗ್ನಿ ಪ್ರಜ್ವಲಿಸುತ್ತದೆ; ಅದು ಪಾತಾಳದ ವರೆಗೂ ವ್ಯಾಪಿಸಿ ಬೆಳೆಯ ಸಹಿತವಾಗಿ ಭೂಮಿಯನ್ನೂ ಬುಡಸಹಿತವಾಗಿ ಬೆಟ್ಟಗಳನ್ನೂ ದಹಿಸಿಬಿಡುವುದು.


ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”


ಯೆಹೋವನು ಯೆರೆಮೀಯನಿಗೆ,


ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.


ಅವರ ಹೃದಯವು ನೀರಾಗಿ ಬಹಳ ಜನರು ಎಡವಿ ಬೀಳುವಂತೆ ಸಂಹರಿಸುವ ಖಡ್ಗವನ್ನು ಅವರ ಪುರದ್ವಾರಗಳಿಗೆಲ್ಲಾ ತಂದಿದ್ದೇನೆ. ಆಹಾ, ಮಿಂಚಿನಂತೆ ಮಿಂಚುತ್ತದೆ, ವಧೆಗಾಗಿ ಹಂತವಾಗಿ ಸಿದ್ಧವಾಗಿದೆ!


ಇದನ್ನು ಮಾಡಿದ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರ ಪಡಿಸಿ, ನಾನು ನೇಮಿಸಿದ ಸಬ್ಬತ್ ದಿನವನ್ನು ಅಪವಿತ್ರ ಮಾಡಿದ್ದಾರೆ.


ಇಸ್ರಾಯೇಲ್ ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅವರ ಸೌಧಗಳನ್ನು ನುಂಗಿಬಿಡುವುದು.”


ಇಸ್ರಾಯೇಲ್ ದೇಶಕ್ಕೆ ಹೀಗೆ ಸಾರಿ ಹೇಳು, ‘ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನಿನಗೆ ವಿರುದ್ಧವಾಗಿದ್ದೇನೆ, ನನ್ನ ಖಡ್ಗವನ್ನು ಒರೆಯಿಂದ ಹಿರಿದು, ನಿನ್ನಲ್ಲಿನ ಶಿಷ್ಟರನ್ನೂ, ದುಷ್ಟರನ್ನೂ ಸಂಹರಿಸಿ ಬಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು