ಯೆರೆಮೀಯ 17:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ. ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ನಿಮಗೆ ಹಕ್ಕು ಬಾಧ್ಯತೆಯಾಗಿ ದಯಪಾಲಿಸಿದ ಸೊತ್ತನ್ನು ನೀವು ದೋಷದಿಂದಲೆ ಕಳೆದುಕೊಳ್ಳುವಿರಿ. ನೀವು ನೋಡದ ನಾಡಿನಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೇ ಊಳಿಗದವರನ್ನಾಗಿ ಮಾಡುವೆನು. ನೀವು ನನ್ನ ಕೋಪಾಗ್ನಿಯನ್ನು ಹೊತ್ತಿಸಿದ್ದೀರಿ. ಅದು ನಿರಂತರವಾಗಿ ಉರಿಯುತ್ತಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ನಿಮಗೆ ದಯಪಾಲಿಸಿದ ಸ್ವಾಸ್ತ್ಯವನ್ನು ಸ್ವದೋಷದಿಂದಲೇ ಕಳೆದುಕೊಳ್ಳುವಿರಿ; ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು; ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ, ಅದು ನಿತ್ಯವೂ ಜ್ವಲಿಸುತ್ತಿರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಾನು ನಿಮಗೆ ಕೊಟ್ಟ ಭೂಮಿಯನ್ನು ನೀವು ಕಳೆದುಕೊಳ್ಳುವಿರಿ. ನಿಮ್ಮನ್ನು ನಿಮಗೆ ತಿಳಿಯದ ನಾಡಿನಲ್ಲಿ ನಿಮ್ಮ ಶತ್ರುಗಳ ದಾಸರನ್ನಾಗಿ ಮಾಡುವೆನು. ಏಕೆಂದರೆ ನನಗೆ ತುಂಬಾ ಕೋಪ ಬಂದಿದೆ. ನನ್ನ ಕೋಪವು ಉರಿಯುವ ಜ್ವಾಲೆಯಂತಿದೆ; ನೀವು ಅದರಲ್ಲಿ ಭಸ್ಮವಾಗಿ ಹೋಗುವಿರಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ನಿನ್ನ ದೋಷದಿಂದಲೇ ನೀನು ನಾನು ನಿನಗೆ ಕೊಟ್ಟ ಸೊತ್ತನ್ನು ಬಿಟ್ಟು ಬಿಡುವೆ. ನಿನಗೆ ತಿಳಿಯದ ದೇಶದಲ್ಲಿ ನಿನ್ನನ್ನು ನಿನ್ನ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ಏಕೆಂದರೆ ನೀವು ನನ್ನ ರೋಷಾಗ್ನಿಯನ್ನು ಹತ್ತಿಸಿದ್ದೀರಿ. ಅದು ನಿತ್ಯವೂ ಪ್ರಜ್ವಲಿಸುತ್ತಿರುವುದು.” ಅಧ್ಯಾಯವನ್ನು ನೋಡಿ |