Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು, ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವು ಸರ್ವೇಶ್ವರನ ಮಾತುಗಳು : “ಮಾನವ ಮಾತ್ರದವರಲ್ಲಿ ಭರವಸೆಯಿಟ್ಟು ನರಜನ್ಮದವರನ್ನೇ ತನ್ನ ಭುಜಬಲವೆಂದುಕೊಂಡು ಸರ್ವೇಶ್ವರನನ್ನೇ ತೊರೆಯುವಂಥ ಹೃದಯವುಳ್ಳವನು ಶಾಪಗ್ರಸ್ತನು !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೆಹೋವನು ಹೀಗನ್ನುತ್ತಾನೆ - ಮಾನವಮಾತ್ರದವರಲ್ಲಿ ಭರವಸವಿಟ್ಟು ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಹೀಗೆ ಹೇಳಿದನು: “ಕೇವಲ ಜನರನ್ನು ನಂಬಿದವರಿಗೆ ಕೇಡಾಗುವುದು. ಮನುಷ್ಯರ ಬಲವನ್ನು ಆತುಕೊಂಡವರಿಗೆ ಕೇಡಾಗುವುದು. ಯಾಕೆಂದರೆ ಅಂಥವರು ಯೆಹೋವನಲ್ಲಿ ನಂಬಿಕೆ ಇಡುವದನ್ನು ಬಿಟ್ಟುಬಿಟ್ಟಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಮಾನವನ ಸಾಮರ್ಥ್ಯಗಳನ್ನು ತನ್ನ ಆಧಾರವಾಗಿ ಮಾಡಿಕೊಂಡ ವ್ಯಕ್ತಿ ಶಾಪಗ್ರಸ್ತ, ಅವನು ಮನುಷ್ಯನ ಶಕ್ತಿಯ ಮೇಲೆ ಭರವಸೆ ಇಡುವನು. ಯೆಹೋವ ದೇವರ ಕಡೆಯಿಂದ ಯಾವನ ಹೃದಯವು ತೊಲಗುವುದೋ, ಅವನು ಶಾಪಗ್ರಸ್ತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:5
16 ತಿಳಿವುಗಳ ಹೋಲಿಕೆ  

ಮೂಗಿನಿಂದ ಉಸಿರಾಡುವ ತನಕ ಬದುಕುವ ನರಮನುಷ್ಯನ ಮೇಲಿನ ಭರವಸೆಯನ್ನು ಬಿಟ್ಟು ಬಿಡಿರಿ. ಏಕೆಂದರೆ ಅವನು ಯಾವ ಲೆಕ್ಕಕ್ಕೂ ಸಮಾನನಲ್ಲ.


ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.


“‘ಜಜ್ಜಿದ ದಂಟಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತೀಯಷ್ಟೆ. ಒಬ್ಬನು ಅಂಥ ಕೋಲನ್ನು ಆಧಾರ ಮಾಡಿಕೊಳ್ಳುವುದಾದರೆ ಅದು ಅವನ ಕೈಯನ್ನು ತಿವಿದು ಒಳಕ್ಕೆ ಹೋಗುತ್ತದೆ! ಐಗುಪ್ತದ ಅರಸನಾದ ಫರೋಹನನಲ್ಲಿ ಭರವಸವಿಟ್ಟವರಿಗೆ ಅದೇ ಗತಿಯಾಗುವುದು.


ನರರು ಬರೀ ಉಸಿರೇ; ನರಾಧಿಪತಿಗಳು ಬರೀ ಮಾಯವೇ. ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿ ನೋಡಿದರೆ ಉಸಿರಿಗಿಂತಲೂ ಹಗುರ.


ನಾನು ಯೆಹೋವನ ಮಾರ್ಗವನ್ನೇ ಅನುಸರಿಸಿದೆನಲ್ಲಾ; ನನ್ನ ದೇವರನ್ನು ಬಿಟ್ಟು ದುಷ್ಟನಾಗಲಿಲ್ಲವಲ್ಲಾ.


ಹೀಗೆ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ನನ್ನನ್ನು ಸ್ಮರಿಸಿಕೊಳ್ಳುವರು. ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದು ತಮ್ಮ ಹೃದಯವನ್ನೂ, ತಮ್ಮ ವಿಗ್ರಹಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬುದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು, ತಾವು ಬಹಳ ಅಸಹ್ಯಕಾರ್ಯಗಳನ್ನು ನಡೆಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.


ಯೆಹೋವನು ಹೋಶೇಯನ ಸಂಗಡ ಮೊದಲು ಮಾತನಾಡಿದಾಗ ಆತನು ಅವನಿಗೆ, “ನೀನು ಹೋಗಿ ಒಬ್ಬ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ. ಏಕೆಂದರೆ, ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡೆಸುತ್ತದೆ ಎಂಬುದಕ್ಕೆ ಇದು ದೃಷ್ಟಾಂತವಾಗಿರಲಿ” ಎಂದು ಹೇಳಿದನು.


ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ.


ಆಸನ ಆಳ್ವಿಕೆಯ ಮೂವತ್ತೊಂಬತ್ತನೆಯ ವರ್ಷದಲ್ಲಿ ಅವನ ಕಾಲುಗಳಿಗೆ ಬಹು ಕಠಿಣವಾದ ರೋಗ ತಗಲಿತು. ಈ ರೋಗದಲ್ಲೂ ಅವನು ಯೆಹೋವನ ಸಹಾಯವನ್ನು ಕೋರದೆ ವೈದ್ಯರ ಸಹಾಯವನ್ನೇ ಕೋರಿದನು.


ಆಗ ನನ್ನ ಜನರು ತಾವು ನಿರೀಕ್ಷಿಸಿಕೊಂಡಿದ್ದ ಕೂಷಿನ ನಿಮಿತ್ತವಾಗಿಯೂ, ಕೊಚ್ಚಿಕೊಂಡಿದ್ದ ಐಗುಪ್ತದ ವಿಷಯವಾಗಿಯೂ ಬೆಚ್ಚಿಬೆರಗಾಗಿ ನಾಚಿಕೆಪಡುವರು.


ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರಿಗೆ ವಿಧಿಸಿದ ನಿಬಂಧನ ವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು