Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 17:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು. ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಂಥವನು ಅಡವಿಯಲ್ಲಿನ ಜಾಲಿಗಿಡಕ್ಕೆ ಸಮಾನನು. ಶುಭಸಂಭವಿಸಿದರೂ ಅದು ಅವನ ಕಣ್ಣಿಗೆ ಕಾಣದು. ಜನರಾರೂ ವಾಸಿಸದ ಚೌಳು ನೆಲದೊಳು ಬೆಳೆಯಿಲ್ಲದ ಬೆಂಗಾಡಿನೊಳು ವಾಸಿಸುವವನ ಪರಿಸ್ಥಿತಿ ಅವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭಸಂಭವಿಸಿದರೂ ಅದನ್ನು ಕಾಣನು; ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆ ಜನರು ನಿರ್ಜನವಾದ ಪ್ರದೇಶದಲ್ಲಿದ್ದ, ಸುಡುವ ಬರಡು ಭೂಮಿಯಲ್ಲಿದ್ದ, ಬಂಜರು ಭೂಮಿಯಲ್ಲಿ ಬೆಳೆದ, ದೇವರು ನೀಡಬಹುದಾದ ಒಳ್ಳೆಯ ವಸ್ತುಗಳ ಬಗ್ಗೆ ಏನೂ ಅರಿಯದ ಒಂದು ಪೊದೆಯಂತಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು. ಒಳ್ಳೆಯದು ಬರುವಾಗ ನೋಡದೆ ಇರುವನು. ನಿವಾಸಿಗಳಿಲ್ಲದ ಚೌಳು ನೆಲವಾಗಿರುವ ಮರುಭೂಮಿಯ ನೀರಿಲ್ಲದ ಸ್ಥಳಗಳಲ್ಲಿ ವಾಸವಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 17:6
17 ತಿಳಿವುಗಳ ಹೋಲಿಕೆ  

ಜೇನೂ, ಮೊಸರೂ ಸಮೃದ್ಧಿಯಾಗಿ ಹರಿಯುವ ನದಿಗಳನ್ನು ಅವನು ನೋಡುವುದೇ ಇಲ್ಲ.


ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.


ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,


ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ, ಅಡವಿಯಲ್ಲಿನ ಜಾಲಿಯಂತಿರಿ.


ನಾನು ಅಡವಿಯನ್ನು ಅದಕ್ಕೆ ಮನೆಯನ್ನಾಗಿಯೂ, ಮರುಭೂಮಿಯನ್ನು ಅದರ ನಿವಾಸವನ್ನಾಗಿಯೂ ಮಾಡಿದ್ದೇನಷ್ಟೆ.


ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”


ಅಬೀಮೆಲೆಕನು ಆ ದಿನವೆಲ್ಲಾ ಯುದ್ಧಮಾಡಿ, ಪಟ್ಟಣವನ್ನು ಸ್ವಾಧೀನಮಾಡಿಕೊಂಡು, ಅದರ ಜನರನ್ನೆಲ್ಲಾ ಸಂಹರಿಸಿ, ಊರನ್ನು ಕೆಡವಿಬಿಟ್ಟು, ಅಲ್ಲಿ ಉಪ್ಪನ್ನು ಎರಚಿಬಿಟ್ಟನು.


ಆದರೆ ಅದರ ಸುತ್ತಣ ಕೆಸರಾದ ಸ್ಥಳಗಳು, ಕೊಳಚೆಗಳು ಸಿಹಿಯಾಗುವುದಿಲ್ಲ. ಅವು ಉಪ್ಪಿನ ಗಣಿಯಾಗುವುವು.


ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.


ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.


ಇದನ್ನು ಕೇಳಿ ಅರಸನ ಸಮೀಪವರ್ತಿಯಾದ ಸರದಾರನು ದೇವರ ಮನುಷ್ಯನಿಗೆ, “ಯೆಹೋವನು ಆಕಾಶದಲ್ಲಿ ಕಿಂಡಿಗಳನ್ನು ಕೊರೆದರೂ ಇದು ಸಂಭವಿಸಲಾರದು” ಎನ್ನಲು ಎಲೀಷನು ಅವನಿಗೆ, “ಅದು ಸಂಭವಿಸುವುದನ್ನು ನೀನು ಕಣ್ಣಾರೆ ಕಾಣುವಿ, ಆದರೆ ನೀನು ಅದನ್ನು ಅನುಭವಿಸುವುದಿಲ್ಲ” ಎಂದು ಹೇಳಿದನು.


ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.


ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು