ಯೆರೆಮೀಯ 17:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನೀರರುಗಿನಲೆ ನೆಡಲಾದ, ನದಿಯ ಬದಿಯಲೆ ಬೇರು ಹರಡಿದ ಬಿಸಿಲ ಧಗೆಗೆ ಹೆದರದ, ಬರಗಾಲದಲ್ಲೂ ನಿಶ್ಚಿಂತವಾದ ಹಸಿರೆಲೆಬಿಡುವ, ಫಲನೀಡುವ ಮರಕ್ಕೆ ಸಮಾನನು ಆತ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ ದಗೆಗೆ ಭಯಪಡದೆ ಹಸುರೆಲೆಯನ್ನು ಬಿಡುತ್ತಾ ಕ್ಷಾಮ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆ ಮನುಷ್ಯನು ನೀರಿನ ಸಮೀಪದಲ್ಲಿ ನೆಟ್ಟಿರುವ, ಆಳವಾಗಿ ಬೇರೂರಿ ನೀರಿನ ಸೆಲೆಗಳನ್ನು ತಲುಪಿರುವ, ಉಷ್ಣಕ್ಕೆ ಹೆದರದ, ಯಾವಾಗಲೂ ಹಸಿರೆಲೆಗಳಿಂದ ಸೊಂಪಾದ, ಮಳೆ ಬೀಳದ ವರ್ಷದಲ್ಲಿಯೂ ಚಿಂತಿಸದ, ಯಾವಾಗಲೂ ಫಲಭರಿತವಾಗಿರುವ ಮರದಂತೆ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ, ಹೊಳೆಯ ಬಳಿಯಲ್ಲಿ ತನ್ನ ಬೇರುಗಳನ್ನು ಹರಡಿರುವ ಮರದ ಹಾಗಿರುವನು. ಬಿಸಿಲಿನ ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ. ಬರಗಾಲದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಸಮಾನನಾಗಿರುವನು.” ಅಧ್ಯಾಯವನ್ನು ನೋಡಿ |